50MP ಸೆಲ್ಫಿ ಕ್ಯಾಮೆರಾ ಸೌಲಭ್ಯದ OPPO F35 Pro ಮೊಬೈಲ್‌ಗೆ ಈಗ ಭರ್ಜರಿ ಡಿಸ್ಕೌಂಟ್!
ಫ್ಲಿಪ್‌ಕಾರ್ಟ್‌ನಲ್ಲಿ ಒಪ್ಪೋ F35 ಪ್ರೊ ಫೋನಿಗೆ ಆಕರ್ಷಕ ಆಫರ್
ಒಪ್ಪೋ F35 ಪ್ರೊ ಮೊಬೈಲ್ 8,000mAh ಬ್ಯಾಟರಿ ಸೌಲಭ್ಯ ಹೊಂದಿದೆ
ಒಪ್ಪೋ F35 ಪ್ರೊ ಸ್ಮಾರ್ಟ್‌ಫೋನ್ ಮೂರು ಆಕರ್ಷಕ ಬಣ್ಣಗಳಲ್ಲಿ ಲಭ್ಯ
Flipkart ಆಯೋಜಿಸಿರುವ ವಿಶೇಷ ಸೇಲ್‌ನಲ್ಲಿ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ಒಪ್ಪೋ ಕಂಪನಿಯ OPPO F35 ಪ್ರೊ ಸ್ಮಾರ್ಟ್‌ಫೋನ್ ಸಹ ಸ್ಪೆಷಲ್ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ MediaTek Dimensity 7360 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ 8,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಒಪ್ಪೋ F35 ಪ್ರೊ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Vi ಟೆಲಿಕಾಂನ ಈ ಜನಪ್ರಿಯ ರೀಚಾರ್ಜ್ ಪ್ಲಾನ್ ಬೆಲೆಯಲ್ಲಿ ಪರಿಷ್ಕರಣೆ! ಇಲ್ಲಿದೆ ಮಾಹಿತಿ
OPPO F35 pro ಈಗ ಡಿಸ್ಕೌಂಟ್‌ನಲ್ಲಿ ಲಭ್ಯ
ಪ್ರೀಮಿಯಂ ಬೆಲೆ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ಒಪ್ಪೋ F35 ಪ್ರೊ ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಅತ್ಯುತ್ತಮ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 6GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 74,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್ ಬ್ಯಾಂಕ್ ಆಫರ್‌ಗಳ ಮೂಲಕ 45,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಸನ್‌ರೈಸ್ ಆರೆಂಜ್, ಬ್ರೌನ್ ಹಾಗೂ ಬ್ಲೂ ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದು.
ಒಪ್ಪೋ F35 ಪ್ರೊ ಮೊಬೈಲ್ ಫೀಚರ್ಸ್
ಒಪ್ಪೋ F35 ಪ್ರೊ ಸ್ಮಾರ್ಟ್‌ಫೋನ್ 6.78 ಇಂಚಿನ 1.5K LTPS OLED ಡಿಸ್‌ಪ್ಲೇ ಹೊಂದಿದ್ದು, ಇದರೊಂದಿಗೆ ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಪಡೆದಿದೆ. ಹಾಗೆಯೇ ಈ ಫೋನ್ MediaTek Dimensity 7360 ಪ್ರೊಸೆಸರ್ ಪವರ್ ಪಡೆದಿದೆ. ಈ ಸ್ಮಾರ್ಟ್‌ಫೋನ್ 8,000mAh ಬ್ಯಾಟರಿಯನ್ನು ಪಡೆದಿದ್ದು, ದೀರ್ಘಾವಧಿ ಬ್ಯಾಕ್‌ಅಪ್ ಒದಗಿಸಲಿದೆ.
ಒಪ್ಪೋ F35 ಪ್ರೊ ಸ್ಮಾರ್ಟ್‌ಫೋನ್ ಹಿಂಬದಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಹಾಗೂ ಸೆಕೆಂಡರಿ ಕ್ಯಾಮೆರಾವು 8MP ಕ್ಯಾಮೆರಾ ಸೌಲಭ್ಯ ಪಡೆದಿದೆ. ಈ ಫೋನ್ 50MP ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಅಲ್ಲದೇ IP66/ IP68/ IP69K ರೇಟಿಂಗ್ ಸೌಲಭ್ಯದೊಂದಿಗೆ ನೀರು ಮತ್ತು ಧೂಳಿನ ವಿರುದ್ಧದ ರಕ್ಷಣಾ ಪ್ರಮಾಣೀಕರಣವನ್ನು ಪಡೆದಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
