ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಒಪ್ಪೋ ಕಂಪನಿಯ ಸ್ಮಾರ್ಟ್‌ಫೋನ್‌ಗಳು ಬೇಡಿಕೆಯಲ್ಲಿ ಇವೆ. ಅವುಗಳ ಪೈಕಿ ಕೆಲವು ಹೈ ಎಂಡ್ ದರದಲ್ಲಿನ ಮೊಬೈಲ್‌ಗಳು ಗಮನ ಸೆಳೆದಿವೆ. ಸದ್ಯ ಆ ಪೈಕಿ ಕಂಪನಿಯ Oppo Find X8 Pro ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭಾರೀ ಆಕರ್ಷಕ ರಿಯಾಯಿತಿ ಪಡೆದುಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ MediaTek Dimensity 9400 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿರುವ ಜೊತೆಗೆ ಈ ಸ್ಮಾರ್ಟ್‌ಫೋನ್ ಪರ್ಲ್ ವೈಟ್ ಮತ್ತು ಸ್ಪೆಸ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಒಪ್ಪೋ ಫೈಂಡ್ X8 ಪ್ರೊ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ Vivo T4 5G ಮೊಬೈಲ್ ಬೆಲೆಯಲ್ಲಿ ಭಾರೀ ಇಳಿಕೆ!
ಒಪ್ಪೋ ಫೈಂಡ್ X8 ಪ್ರೊ ಮೊಬೈಲ್ ಹೈ ಎಂಡ್ ಮಾದರಿಯಲ್ಲಿ ಹಾಗೂ ದೈತ್ಯ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದಿದೆ. ಈ ಮೊಬೈಲ್ 16GB RAM + 512GB ಸ್ಟೋರೇಜ್ ವೇರಿಯಂಟ್ ಬೆಲೆ 1,09,999 ರೂ.ಗಳು ಆಗಿದ್ದು ಆದರೆ ಬ್ಯಾಂಕ್ ಆಫರ್ ಮೂಲಕ ಈ ಮೊಬೈಲ್ ಅನ್ನು 1,09,999 ರೂ.ಗಳ ಬೆಲೆಯಲ್ಲಿ ಖರೀದಿಸಬಹುದು. ಈ ಫೋನ್ ಪರ್ಲ್ ವೈಟ್ ಮತ್ತು ಸ್ಪೆಸ್ ಬ್ಲ್ಯಾಕ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಆಸಕ್ತ ಗ್ರಾಹಕರು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಖರೀದಿಸಬಹುದಾಗಿದೆ.
ಒಪ್ಪೋ ಫೈಂಡ್ X8 ಪ್ರೊ ಮೊಬೈಲ್ 6.78 ಇಂಚಿನ AMOLED ಡಿಸ್‌ಪ್ಲೇ ಅನ್ನು ಹೊಂದಿದ್ದು ಇದರ ಸ್ಕ್ರೀನ್ 120Hz ವರೆಗಿನ ರಿಫ್ರೆಶ್ ರೇಟ್ ಸಪೋರ್ಟ್ ಪಡೆದಿದೆ. ಹಾಗೆಯೇ ಬೆಳಕಿನಲ್ಲಿ4,500 nits ಗರಿಷ್ಠ ಬ್ರೈಟ್ನೆಸ್ ಸೌಲಭ್ಯ ಪಡೆದಿದೆ. ಅಲ್ಲದೇ ಈ ಫೋನ್ MediaTek Dimensity 9400 ಚಿಪ್‌ಸೆಟ್ ಪ್ರೊಸೆಸರ್ ಬಲದಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಇದು 16GB RAM + 512GB ಸ್ಟೋರೇಜ್ ಆಯ್ಕೆಯ ಸೌಲಭ್ಯ ಸಹ ಪಡೆದಿದೆ. ಇದರೊಂದಿಗೆ ಈ ಮೊಬೈಲ್ 5,910mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು ಇದಕ್ಕೆ ಪೂರಕವಾಗಿ 80W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 50W ವೈರ್‌ಲೆಸ್ ಚಾರ್ಜಿಂಗ್ ಸಪೋರ್ಟ್ ಸಹ ನೀಡಲಾಗಿದೆ.
ಇನ್ನು ಒಪ್ಪೋ ಕಂಪನಿಯ ಈ ಒಪ್ಪೋ ಫೈಂಡ್ X8 ಪ್ರೊ ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಕ್ವಾಡ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಆಗಿದೆ. ಹಾಗೆಯೇ ಇದರ ಇನ್ನುಳಿದ ಮೂರು ಕ್ಯಾಮೆರಾಗಳು ಕೂಡಾ 50MP ಸೆನ್ಸಾರ್ ಸೌಲಭ್ಯ ಪಡೆದಿವೆ. ಹಾಗೆಯೇ ಮುಂಭಾಗದಲ್ಲಿ ಸೆಲ್ಫಿ ಹಾಗೂ ವೀಡಿಯೊ ಕರೆಗಳಿಗಾಗಿ 32MP ಸೆನ್ಸಾರ್ ಇರುವ ಕ್ಯಾಮೆರಾ ಸೌಲಭ್ಯ ಒದಗಿಸಲಾಗಿದೆ.