ಟ್ರಿಪಲ್‌ 50MP ಕ್ಯಾಮೆರಾ ಇರುವ Oppo Find X8 Pro ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಇಳಿಕೆ!

HIGHLIGHTS

ಒಪ್ಪೋ ಫೈಂಡ್‌ X8 ಪ್ರೊ ಮೂರು 50MP ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ

ಒಪ್ಪೋದ ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 9400 ಪ್ರೊಸೆಸರ್‌ ಹೊಂದಿದೆ

ಒಪ್ಪೋ ಫೈಂಡ್‌ X8 ಪ್ರೊ ಫೋನ್‌ 80W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಹೊಂದಿದೆ

ಪ್ರಸ್ತುತ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಒಪ್ಪೋ ಕಂಪನಿಯ ಪ್ರೀಮಿಯಂ ಫ್ಲ್ಯಾಗ್‌ಶಿಪ್ ಫೋನ್‌ ಆಕರ್ಷಕ ಡಿಸ್ಕೌಂಟ್‌ ಬೆಲೆಗೆ ಲಭ್ಯ. ಹೌದು, ಫ್ಲಿಪ್‌ಕಾರ್ಟ್‌ತಾಣದಲ್ಲಿ ಸಂಸ್ಥೆಯ Oppo Find X8 Pro ಸ್ಮಾರ್ಟ್‌ಫೋನ್‌ ಆಕರ್ಷಕ ರಿಯಾಯಿತಿ ಪಡೆದುಕೊಂಡಿದೆ. ಇದಲ್ಲದೇ ಬ್ಯಾಂಕ್‌ ಆಫರ್‌ ಪಡೆದುಕೊಂಡು ಖರೀದಿಸಿದರೆ ಮತ್ತಷ್ಟು ಹೆಚ್ಚುವರಿ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಅಂದಹಾಗೆ ಒಪ್ಪೋದ ಈ ಮೊಬೈಲ್‌ 5,910mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದೆ. ಅಲ್ಲದೇ ಇದು MediaTek Dimensity 9400 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇನ್ನು ಈ ಫೋನ್‌ ಪರ್ಲ್ ವೈಟ್ ಹಾಗೂ ಬ್ಲ್ಯಾಕ್‌ ಕಲರ್‌ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಒಪ್ಪೋ ಫೈಂಡ್‌ X8 ಪ್ರೊ ಮೊಬೈಲ್‌ಗೆ ಲಭ್ಯ ಇರುವ ಆಫರ್‌ ಬಗ್ಗೆ ಮುಂದೆ ತಿಳಿಯೋಣ.

Also Read : ನಾಳೆ iQOO 15 ಮೊಬೈಲ್‌ Apex ಕಲರ್‌ನಲ್ಲಿ ಲಾಂಚ್‌! ಪವರ್‌ಫುಲ್‌ ಬ್ಯಾಟರಿ ಇದೆ

Oppo Find X8 Pro ಬೆಲೆಯಲ್ಲಿ ಭಾರ್ಜರಿ ಇಳಿಕೆ

ಜನಪ್ರಿಯ ಒಪ್ಪೋ ಫೈಂಡ್‌ X8 ಪ್ರೊ ಮೊಬೈಲ್‌ ಸದ್ಯ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಆಕರ್ಷಕ ಡಿಸ್ಕೌಂಟ್‌ ಪಡೆದಿದೆ. ಈ ಮೊಬೈಲ್‌ 16GB RAM + 512 GB ವೇರಿಯಂಟ್‌ 1,09,999 ರೂಗಳ ಪ್ರೈಸ್‌ಟ್ಯಾಗ್‌ ಹೊಂದಿದ್ದು, ಆದರೆ ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ 84,999 ರೂಗಳ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಈ ಫೋನ್‌ ಖರೀದಿಸುವ ಗ್ರಾಹಕರು ಆಯ್ದ ಬ್ಯಾಂಕ್‌ಗಳಿಂದ ಹೆಚ್ಚುವರಿ ಕೊಡುಗೆ ಹಾಗೂ ಆಕರ್ಷಕ EMI ಆಯ್ಕೆಗಳನ್ನು ಸಹ ಪಡೆಯಬಹುದು. ಅಂದಹಾಗೆ ಈ ಫೋನ್‌ ಪರ್ಲ್ ವೈಟ್ ಹಾಗೂ ಬ್ಲ್ಯಾಕ್‌ ಕಲರ್‌ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ.

ಒಪ್ಪೋ ಫೈಂಡ್‌ X8 ಪ್ರೊ ಫೋನಿನ ಪ್ರಮುಖ ಫೀಚರ್ಸ್‌

ಒಪ್ಪೋ ಫೈಂಡ್‌ X8 ಪ್ರೊ ಮೊಬೈಲ್‌ 6.78 ಇಂಚಿನ AMOLED ಡಿಸ್‌ಪ್ಲೇ ಅನ್ನು ಹೊಂದಿದ್ದು ಇದರ ಸ್ಕ್ರೀನ್‌ 120Hz ವರೆಗಿನ ರಿಫ್ರೆಶ್ ರೇಟ್‌ ಸಪೋರ್ಟ್‌ ಪಡೆದಿದೆ. ಹಾಗೆಯೇ ಬೆಳಕಿನಲ್ಲಿ4,500 nits ಗರಿಷ್ಠ ಬ್ರೈಟ್ನೆಸ್‌ ಸೌಲಭ್ಯ ಪಡೆದಿದೆ. ಅಲ್ಲದೇ ಈ ಫೋನ್‌ MediaTek Dimensity 9400 ಚಿಪ್‌ಸೆಟ್‌ ಪ್ರೊಸೆಸರ್‌ ಬಲದಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಇದು 16GB RAM + 512GB ಸ್ಟೋರೇಜ್‌ ಆಯ್ಕೆಯ ಸೌಲಭ್ಯ ಸಹ ಪಡೆದಿದೆ. ಇದರೊಂದಿಗೆ ಈ ಮೊಬೈಲ್‌ 5,910mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು ಇದಕ್ಕೆ ಪೂರಕವಾಗಿ 80W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 50W ವೈರ್‌ಲೆಸ್ ಚಾರ್ಜಿಂಗ್ ಸಪೋರ್ಟ್ ಸಹ ನೀಡಲಾಗಿದೆ.

ಇನ್ನು ಒಪ್ಪೋ ಸಂಸ್ಥೆಯ ಈ ಒಪ್ಪೋ ಫೈಂಡ್‌ X8 ಪ್ರೊ ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಕ್ವಾಡ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಆಗಿದೆ. ಹಾಗೆಯೇ ಇದರ ಇನ್ನುಳಿದ ಮೂರು ಕ್ಯಾಮೆರಾಗಳು ಕೂಡಾ 50MP ಸೆನ್ಸಾರ್‌ ಸೌಲಭ್ಯ ಪಡೆದಿವೆ. ಹಾಗೆಯೇ ಮುಂಭಾಗದಲ್ಲಿ ಸೆಲ್ಫಿ ಹಾಗೂ ವೀಡಿಯೊ ಕರೆಗಳಿಗಾಗಿ 32MP ಸೆನ್ಸಾರ್‌ ಇರುವ ಕ್ಯಾಮೆರಾ ಸೌಲಭ್ಯ ಒದಗಿಸಲಾಗಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :