ಜನಪ್ರಿಯ ಒಪ್ಪೋ ಸಂಸ್ಥೆಯು ತನ್ನ ಹೊಸ OPPO Find X9 Ultra ಸ್ಮಾರ್ಟ್‌ಫೋನ್ ಅನ್ನು ಇಂದು (ಮೇ 21 ರಂದು) ಭಾರತೀಯ ಮಾರುಕಟ್ಟೆಗೆ ಅಧಿಕೃತವಾಗಿ ಲಾಂಚ್ ಮಾಡಿದೆ. ಈ ಮೊಬೈಲ್ ಸ್ನಾಪ್‌ಡ್ರಾಗನ್ 8 ಎಲೈಟ್ ಜೆನ್ 5 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿರುವ ಜೊತೆಗೆ 7,050mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಒಳಗೊಂಡಿದೆ. ಹಾಗೆಯೇ ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 200MP ಸೆನ್ಸಾರ್ ಅನ್ನು ಪಡೆದುಕೊಂಡಿದೆ. ಈ ಮೊಬೈಲ್ ಕ್ಯಾನ್ಯನ್ ಆರೆಂಜ್ ಮತ್ತು ಟಂಡ್ರಾ ಉಂಬರ್ ಕಲರ್ ಆಯ್ಕೆಗಳಲ್ಲಿ ಮಾರುಕಟ್ಟೆಗೆ ಎಂಟ್ರಿ ಪಡೆದಿದೆ. ಹಾಗಾದರೆ ಒಪ್ಪೋ ಫೈಂಡ್ X9 ಅಲ್ಟ್ರಾ ಸ್ಮಾರ್ಟ್‌ಫೋನ್‌ನ ಬೆಲೆ, ಮಾರಾಟ, ಫೀಚರ್ಸ್ ಹಾಗೂ ಲಭ್ಯತೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : 6,000mAh ಬ್ಯಾಟರಿ ಇರುವ POCO C85 5G ಬೆಲೆಯಲ್ಲಿ ಬೊಂಬಾಟ್ ಇಳಿಕೆ!
ನೂತನ ಒಪ್ಪೋ ಫೈಂಡ್ X9 ಅಲ್ಟ್ರಾ ಮೊಬೈಲ್ ಫ್ಲ್ಯಾಗ್‌ಶಿಪ್ ಪ್ರೈಸ್‌ಟ್ಯಾಗ್ ಪಡೆದಿದ್ದು ಈ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಈ ಮೊಬೈಲ್‌ನ ಆರಂಭಿಕ 12GB RAM + 512GB ಸ್ಟೋರೇಜ್ ವೇರಿಯಂಟ್ ಬೆಲೆ 1,69,999 ರೂ.ಗಳು ಆಗಿದೆ. ಅಂದಹಾಗೆ ಈ ಫೋನ್ ಭಾರತದಲ್ಲಿ ಅಮೆಜಾನ್, ಫ್ಲಿಪ್‌ಕಾರ್ಟ್ ಮತ್ತು ಒಪ್ಪೋ ಆನ್‌ಲೈನ್ ಸ್ಟೋರ್ ಮೂಲಕ ಮುಂಗಡ-ಆರ್ಡರ್‌ಗೆ ಲಭ್ಯವಿದೆ. ಇನ್ನು ಈ ಮೊಬೈಲ್ ಕ್ಯಾನ್ಯನ್ ಆರೆಂಜ್ ಮತ್ತು ಟಂಡ್ರಾ ಉಂಬರ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.
ನೂತನ ಒಪ್ಪೋ ಫೈಂಡ್ X9 ಅಲ್ಟ್ರಾ ಮೊಬೈಲ್ 6.82 inch QHD+ AMOLED ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಇದರ ಸ್ಕ್ರೀನ್ 1,800 nits ಬ್ರೈಟ್ನೆಸ್ ಹೊಂದಿದ್ದು 1,440×3,168 ಪಿಕ್ಸೆಲ್ ರೆಸಲ್ಯೂಶನ್ ಒಳಗೊಂಡಿದೆ. ಇದರ ಡಿಸ್ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆಯನ್ನು ಹೊಂದಿದೆ. ಈ ಮೊಬೈಲ್ ಸ್ನಾಪ್‌ಡ್ರಾಗನ್ 8 ಎಲೈಟ್ ಜೆನ್ 5 ಚಿಪ್‌ಸೆಟ್ ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದಿದೆ. ಇದಕ್ಕೆ ಪೂರಕವಾಗಿ 12GB RAM + 512GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಹಾಗೆಯೇ ಇದು ಆಂಡ್ರಾಯ್ಡ್ 16 ಆಧಾರಿತ ColorOS 16 ನಲ್ಲಿ ಕಾರ್ಯನಿರ್ವಹಿಸುತ್ತದೆ.
ಒಪ್ಪೋ ಫೈಂಡ್ X9 ಅಲ್ಟ್ರಾ ಸ್ಮಾರ್ಟ್‌ಫೋನ್ Hasselblad-tuned ಕ್ವಾಡ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 200MP ಸೆನ್ಸಾರ್ ಸಾಮರ್ಥ್ಯದಲ್ಲಿ ಆಗಿದ್ದು ಸೆಕೆಂಡರಿ ಕ್ಯಾಮೆರಾ 50MP ಸೆನ್ಸಾರ್ ಸೌಲಭ್ಯ ಪಡೆದಿದೆ. ಹಾಗೆಯೇ ಉಳಿದೆರಡು ಕ್ಯಾಮೆರಾಗಳು 200MP + 50MP ಸೆನ್ಸಾರ್ ಒಳಗೊಂಡಿವೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 50MP ಮೆಗಾಪಿಕ್ಸಲ್ ಕ್ಯಾಮೆರಾ ನೀಡಲಾಗಿದೆ. ಇನ್ನು ಈ ಮೊಬೈಲ್ 7,050mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿರುವ ಜೊತೆಗೆ 100W ವೈರ್ಡ್ ಫಾಸ್ಟ್ ಚಾರ್ಜಿಂಗ್ ಜೊತೆಗೆ 50W ವೈರ್‌ಲೆಸ್ ಚಾರ್ಜಿಂಗ್ ಬೆಂಬಲ ಸಹ ಹೊಂದಿದೆ.