80W SUPERVOOC ಚಾರ್ಜರ್ ಒಳಗೊಂಡ Oppo Find X9s 5G ಈಗ ಭರ್ಜರಿ ಡಿಸ್ಕೌಂಟ್‌ನಲ್ಲಿ ಲಭ್ಯ!
ಅಮೆಜಾನ್‌ನಲ್ಲಿ ಒಪ್ಪೋ ಫೈಂಡ್ X9s ಫೋನಿಗೆ ಭರ್ಜರಿ ಕೊಡುಗೆ
ಒಪ್ಪೋ ಫೈಂಡ್ X9s ಫೋನ್ 50MP ಸೆನ್ಸಾರ್ ಕ್ಯಾಮೆರಾ ರಚನೆ ಪಡೆದಿದೆ
ಒಪ್ಪೋ ಫೈಂಡ್ X9s ಮೊಬೈಲ್ 7,025mAh ಬ್ಯಾಟರಿ ಸಪೋರ್ಟ್ ಹೊಂದಿದೆ
ಒಪ್ಪೋ ಮೊಬೈಲ್ ಕಂಪನಿಯ ಫ್ಲ್ಯಾಗ್‌ಶಿಪ್ ಮಾದರಿಯ ಸ್ಮಾರ್ಟ್‌ಫೋನ್‌ಗಳ ಲಿಸ್ಟ್‌ನಲ್ಲಿ ಗುರುತಿಸಿಕೊಂಡಿರುವ Oppo Find X9s 5G ಮೊಬೈಲ್ ಕ್ಯಾಮೆರಾ, ಬ್ಯಾಟರಿ ಸೇರಿದಂತೆ ಆಕರ್ಷಕ ಫೀಚರ್ಸ್‌ಗಳ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಭಾರೀ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 9000 ಸರಣಿಯ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 50MP ಸೆನ್ಸಾರ್ ಕ್ಯಾಮೆರಾ ರಚನೆ ಸಹ ಪಡೆದಿದೆ. ಅಲ್ಲದೇ ಮೊಬೈಲ್ ಲ್ಯಾವೆಂಡರ್ ಸ್ಕೈ, ಮಿಡ್‌ನೈಟ್ ಗ್ರೇ ಮತ್ತು ಸನ್‌ಸೆಟ್ ಆರೆಂಜ್ ಕಲರ್ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಒಪ್ಪೋ ಫೈಂಡ್ X9s ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Telegram ಆಪ್‌ನಲ್ಲಿ Last Seen ಹೈಡ್ ಮಾಡುವುದು ಹೇಗೆ ಗೊತ್ತಾ?
Oppo Find X9s 5G ಬೆಲೆಯಲ್ಲಿ ಸಖತ್ ಇಳಿಕೆ
ಅತ್ಯುತ್ತಮ ಫೀಚರ್ಸ್‌ಗಳ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ಒಪ್ಪೋ ಮೊಬೈಲ್ ಕಂಪನಿಯ ಒಪ್ಪೋ ಫೈಂಡ್ X9s ಮೊಬೈಲ್ ಸದ್ಯ ಅಮೆಜಾನ್‌ನಲ್ಲಿ ಇ ಕಾಮರ್ಸ್ ತಾಣದಲ್ಲಿ ಬೊಂಬಾಟ್ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 12GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 1,39,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 79,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದರ ಜೊತೆಗೆ ಗ್ರಾಹಕರಿಗೆ ಆಕರ್ಷಕ EMI ಆಯ್ಕೆಗಳು ಸಹ ಸಿಗುತ್ತವೆ. ಇನ್ನು ಈ ಮೊಬೈಲ್ ಲ್ಯಾವೆಂಡರ್ ಸ್ಕೈ, ಮಿಡ್‌ನೈಟ್ ಗ್ರೇ ಮತ್ತು ಸನ್‌ಸೆಟ್ ಆರೆಂಜ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

ಒಪ್ಪೋ ಫೈಂಡ್ X9s ಫೀಚರ್ಸ್ ಹೀಗಿವೆ
ನೂತನ ಒಪ್ಪೋ ಫೈಂಡ್ X9s ಮೊಬೈಲ್ 6.59 ಇಂಚಿನ ಪೂರ್ಣ HD+ AMOLED ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಇದರ ಸ್ಕ್ರೀನ್ 1,800 nits ಬ್ರೈಟ್ನೆಸ್ ಹೊಂದಿದ್ದು 1,440×3,168 ಪಿಕ್ಸೆಲ್ ರೆಸಲ್ಯೂಶನ್ ಒಳಗೊಂಡಿದೆ. ಇದರ ಡಿಸ್ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 7i ರಕ್ಷಣೆಯನ್ನು ಹೊಂದಿದೆ. ಈ ಮೊಬೈಲ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 9000 ಸರಣಿಯ ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದಿದೆ. ಇದಕ್ಕೆ ಪೂರಕವಾಗಿ 12GB RAM + 256GB ಹಾಗೂ 12GB + 512GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ.
ಒಪ್ಪೋ ಫೈಂಡ್ X9s ಸ್ಮಾರ್ಟ್‌ಫೋನ್ Hasselblad-tuned ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಆಗಿದೆ. ಹಾಗೆಯೇ ಇದರ ಸೆಕೆಂಡರಿ ಹಾಗೂ ತೃತೀಯ ಕ್ಯಾಮೆರಾಗಳು ಸಹ 50MP ಸೆನ್ಸಾರ್ ಸೌಲಭ್ಯ ಪಡೆದಿವೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಮೆಗಾಪಿಕ್ಸಲ್ ಕ್ಯಾಮೆರಾ ನೀಡಲಾಗಿದೆ. ಇನ್ನು ಈ ಮೊಬೈಲ್ 7,025mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿರುವ ಜೊತೆಗೆ 80W ವೈರ್ಡ್ ಫಾಸ್ಟ್ ಚಾರ್ಜಿಂಗ್ ಹೊಂದಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
