ಲಾಂಚ್‌ ಆಗಿಯೇ ಬಿಡ್ತು Oppo Find X9s ಸ್ಮಾರ್ಟ್‌ಫೋನ್‌! ಟ್ರಿಪಲ್‌ 50MP ಕ್ಯಾಮೆರಾ

HIGHLIGHTS

ಒಪ್ಪೋ ಫೈಂಡ್‌ X9s ಫೋನ್‌ ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ

ಒಪ್ಪೋದ ಈ ನೂತನ ಮೊಬೈಲ್‌ 50MP ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ

ಒಪ್ಪೋ ಫೈಂಡ್‌ X9s ಸ್ಮಾರ್ಟ್‌ಫೋನ್‌ ಮೂರು ಆಕರ್ಷಕ ಕಲರ್‌ ಆಯ್ಕೆ ಪಡೆದಿದೆ

ಲೀಡಿಂಗ್ ಮೊಬೈಲ್‌ ಬ್ರಾಂಡ್‌ಗಳಲ್ಲಿ ಒಂದಾಗಿರುವ ಒಪ್ಪೋ ಸಂಸ್ಥೆಯು Oppo Find X9s ಸ್ಮಾರ್ಟ್‌ಫೋನ್‌ ಅನ್ನು ಇಂದು (ಮೇ 21 ರಂದು) ಭಾರತೀಯ ಮಾರುಕಟ್ಟೆಗೆ ಅಧಿಕೃತವಾಗಿ ಲಾಂಚ್ ಮಾಡಿದೆ. ಈ ಮೊಬೈಲ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 9000 ಸರಣಿಯ ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಹೊಂದಿರುವ ಜೊತೆಗೆ 7,025mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ನ ಮುಖ್ಯ ಕ್ಯಾಮೆರಾವು 50MP ಸೆನ್ಸಾರ್‌ ಅನ್ನು ಪಡೆದುಕೊಂಡಿದೆ. ಈ ಮೊಬೈಲ್‌ ಕ್ಯಾನ್ಯನ್ ಆರೆಂಜ್ ಮತ್ತು ಟಂಡ್ರಾ ಉಂಬರ್ ಕಲರ್‌ ಆಯ್ಕೆಗಳಲ್ಲಿ ಮಾರುಕಟ್ಟೆಗೆ ಎಂಟ್ರಿ ಪಡೆದಿದೆ. ಹಾಗಾದರೆ ಒಪ್ಪೋ ಫೈಂಡ್‌ X9s ಸ್ಮಾರ್ಟ್‌ಫೋನ್‌ನ ಬೆಲೆ, ಮಾರಾಟ, ಫೀಚರ್ಸ್‌ ಹಾಗೂ ಲಭ್ಯತೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : 6,000mAh ಬ್ಯಾಟರಿ ಇರುವ POCO C85 5G ಬೆಲೆಯಲ್ಲಿ ಬೊಂಬಾಟ್‌ ಇಳಿಕೆ!

Oppo Find X9s ಮೊಬೈಲ್‌ ಬೆಲೆ ಮತ್ತು ಲಭ್ಯತೆ

ನೂತನ ಒಪ್ಪೋ ಫೈಂಡ್‌ X9s ಮೊಬೈಲ್‌ ಫ್ಲ್ಯಾಗ್‌ಶಿಪ್‌ ಪ್ರೈಸ್‌ಟ್ಯಾಗ್‌ ಪಡೆದಿದ್ದು ಈ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಈ ಮೊಬೈಲ್‌ನ ಆರಂಭಿಕ 12GB RAM + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 79,999 ರೂ.ಗಳು ಆಗಿದೆ. ಹಾಗೆಯೇ 12GB + 512GB ವೇರಿಯಂಟ್‌ ಬೆಲೆ 89,999 ರೂ.ಗಳು ಆಗಿದೆ. ಅಂದಹಾಗೆ ಈ ಫೋನ್‌ ಭಾರತದಲ್ಲಿ ಅಮೆಜಾನ್, ಫ್ಲಿಪ್‌ಕಾರ್ಟ್ ಮತ್ತು ಒಪ್ಪೋ ಆನ್‌ಲೈನ್ ಸ್ಟೋರ್ ಮೂಲಕ ಮುಂಗಡ-ಆರ್ಡರ್‌ಗೆ ಲಭ್ಯವಿದ್ದು, ಮೇ 28 ರಂದು ಮಾರಾಟ ಶುರು ಮಾಡಲಿದೆ. ಇನ್ನು ಈ ಮೊಬೈಲ್‌ ಲ್ಯಾವೆಂಡರ್ ಸ್ಕೈ, ಮಿಡ್‌ನೈಟ್ ಗ್ರೇ ಮತ್ತು ಸನ್‌ಸೆಟ್ ಆರೆಂಜ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ಒಪ್ಪೋ ಫೈಂಡ್‌ X9s ಫೀಚರ್ಸ್‌ ಹೀಗಿವೆ

ನೂತನ ಒಪ್ಪೋ ಫೈಂಡ್‌ X9s ಮೊಬೈಲ್ 6.59 ಇಂಚಿನ ಪೂರ್ಣ HD+ AMOLED ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್‌ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಇದರ ಸ್ಕ್ರೀನ್‌ 1,800 nits ಬ್ರೈಟ್ನೆಸ್‌ ಹೊಂದಿದ್ದು 1,440×3,168 ಪಿಕ್ಸೆಲ್‌ ರೆಸಲ್ಯೂಶನ್‌ ಒಳಗೊಂಡಿದೆ. ಇದರ ಡಿಸ್ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 7i ರಕ್ಷಣೆಯನ್ನು ಹೊಂದಿದೆ. ಈ ಮೊಬೈಲ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 9000 ಸರಣಿಯ ಚಿಪ್‌ಸೆಟ್ ಪ್ರೊಸೆಸರ್‌ ಪವರ್‌ ಪಡೆದಿದೆ. ಇದಕ್ಕೆ ಪೂರಕವಾಗಿ 12GB RAM + 256GB ಹಾಗೂ 12GB + 512GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ.

ಒಪ್ಪೋ ಫೈಂಡ್‌ X9s ಸ್ಮಾರ್ಟ್‌ಫೋನ್‌ Hasselblad-tuned ಟ್ರಿಪಲ್‌ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಆಗಿದೆ. ಹಾಗೆಯೇ ಇದರ ಸೆಕೆಂಡರಿ ಹಾಗೂ ತೃತೀಯ ಕ್ಯಾಮೆರಾಗಳು ಸಹ 50MP ಸೆನ್ಸಾರ್‌ ಸೌಲಭ್ಯ ಪಡೆದಿವೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಮೆಗಾಪಿಕ್ಸಲ್ ಕ್ಯಾಮೆರಾ ನೀಡಲಾಗಿದೆ. ಇನ್ನು ಈ ಮೊಬೈಲ್‌ 7,025mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವ ಜೊತೆಗೆ 80W ವೈರ್ಡ್‌ ಫಾಸ್ಟ್ ಚಾರ್ಜಿಂಗ್‌ ಹೊಂದಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :