OPPO K13 5G Launched in India
OPPO K13 5G Officially Launched: ಭಾರತದಲ್ಲಿ ಚೀನಾದ ಜನಪ್ರಿಯ ಸ್ಮಾರ್ಟ್ಫೋನ್ ಬ್ರಾಂಡ್ ಒಪ್ಪೋ ಇಂದು ತನ್ನ ಲೇಟೆಸ್ಟ್ OPPO K13 5G ಅಧಿಕೃತವಾಗಿ ಬಿಡುಗಡೆಯಾಗಿದೆ. ಪ್ರಸ್ತುತ ಸ್ಮಾರ್ಟ್ಫೋನ್ 7000mAh ಬ್ಯಾಟರಿ, IP65 ಪ್ರೊಟೆಕ್ಷನ್ ಮತ್ತು 50MP ಆಕರ್ಷಕ ಫೀಚರ್ಗಳೊಂದಿಗೆ ಪ್ರತ್ಯೇಕವಾಗಿ ಫ್ಲಿಪ್ಕಾರ್ಟ್ ಮೂಲಕ ಬಿಡುಗಡೆಯಾಗಿ ಮಾರಾಟಕ್ಕೆ ಬರಲಿರುವುದನ್ನು ಖಚಿತಪಡಿಸಿದೆ. ಹಾಗಾದ್ರೆ ಈ OPPO K13 5G ಸ್ಮಾರ್ಟ್ಫೋನ್ ಫೀಚರ್ಗಳೇನು ಮತ್ತು ಬಿಡುಗಡೆಯ ಆಫರ್ ಬೆಲೆ ಎಷ್ಟು ಎಲ್ಲವನ್ನು ಈ ಕೆಳಗೆ ತಿಳಿಯಬಹುದು.
ಭಾರತದಲ್ಲಿ ಇಂದು ಅಂದ್ರೆ 21ನೇ ಏಪ್ರಿಲ್ 2025 ರಂದು ಬಿಡುಗಡೆಯಾದ ಈ OPPO K13 5G ಸ್ಮಾರ್ಟ್ಫೋನ್ ಪ್ರಸ್ತುತ ಎರಡು ಮಾದರಿಯಲ್ಲಿ ಬಿಡುಗಡೆಯಾಗಿದ್ದು ಆರಂಭಿಕ 8GB RAM ಮತ್ತು 128GB ಸ್ಟೋರೇಜ್ ಆರಂಭಿಕ 17,999 ರೂಗಳಿಗೆ ಮತ್ತೊಂದು 8GB RAM ಮತ್ತು 256GB ಸ್ಟೋರೇಜ್ ಮಾದರಿಗೆ 19,999 ರೂಗಳಿಗೆ ಪರಿಚಯಿಸಲಾಗಿದೆ.
ಆದರೆ ಆಸಕ್ತ ಬಳಕೆದಾರರು ಇದನ್ನು HDFC, SBI ಮತ್ತು ICICI ಬ್ಯಾಂಕ್ಗಳ ಕಾರ್ಡ್ ಬಳಸಿಕೊಂಡು ಸುಮಾರು 1000 ಹೆಚ್ಚುವರಿ ಡಿಸ್ಕೌಂಟ್ ಸಹ ಪಡೆಯುವ ಮೂಲಕ ಈ ಸ್ಮಾರ್ಟ್ಫೋನ್ ಆರಂಭಿಕ ಮಾದರಿಯನ್ನು ಕೇವಲ 16,999 ರೂಗಳಿಗೆ ಫ್ಲಿಪ್ಕಾರ್ಟ್ ಮೂಲಕ ಖರೀದಿಸಬಹುದು.
OPPO K13 5G ಸ್ಮಾರ್ಟ್ಫೋನ್ ಭಾರತದಲ್ಲಿ ಬಿಡುಗಡೆಯಾಗಿದ್ದು ಇದರ ಮೊದಲ ಮಾರಾಟವನ್ನು 25ನೇ ಏಪ್ರಿಲ್ 2025 ಮಧ್ಯಾಹ್ನ 12:00 ಗಂಟೆಯಿಂದ ಫ್ಲಿಪ್ಕಾರ್ಟ್ ಇಂಡಿಯಾ ಮತ್ತು ಒಪ್ಪೋ ವೆಬ್‌ಸೈಟ್ ಮತ್ತು ಆಯ್ದ ಆಫ್‌ಲೈನ್ ರಿಟೇಲ್ ಸ್ಟೋರ್‌ಗಳ ಮೂಲಕ ಲಭ್ಯವಾಗಲಿದೆ. OPPO K13 5G ಸ್ಮಾರ್ಟ್ಫೋನ್ ಅನ್ನು ನೀವು Prism Black ಮತ್ತು Icy Purple ಎಂಬ 2 ಆಕರ್ಷಕ ಬಣ್ಣಗಳಲ್ಲಿ ಖರೀದಿಸಬಹುದು.
OPPO K13 5G ಸ್ಮಾರ್ಟ್ಫೋನ್ 120Hz ರಿಫ್ರೆಶ್ ರೇಟ್ನೊಂದಿಗೆ 6.67 ಇಂಚಿನ AMOLED (2392×1080 ಪಿಕ್ಸೆಲ್‌ಗಳು) FHD ಅನ್ನು ಹೊಂದಿದೆ. ಫೋಟೋಗಳು ಮತ್ತು ವೀಡಿಯೊಗಳಿಗಾಗಿ OPPO K13 5G ಡ್ಯುಯಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದು f/1.8 ಅಪಾರ್ಚರ್‌ನೊಂದಿಗೆ 50MP ಮೆಗಾಪಿಕ್ಸೆಲ್ ಪ್ರೈಮರಿ ಕ್ಯಾಮೆರಾವನ್ನು OIS ಜೊತೆಗೆ ಬರುತ್ತದೆ. ಮತ್ತೊಂದು 2MP ಡೆಪ್ತ್ ಸೆನ್ಸರ್ ಹೊಂದಿದೆ. ಇದರ ಕ್ರಮವಾಗಿ ಫೋನ್ ಮುಂಭಾಗದಲ್ಲಿ ಸೇಲ್ಫಿ ಮತ್ತು ವಿಡಿಯೋ ಕರೆಗಾಗಿ 16MP ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಅಲ್ಲದೆ ಸ್ಮಾರ್ಟ್ಫೋನ್ ವಾಟರ್ ಮತ್ತು ಡಸ್ಟ್ ಪ್ರೊಟೆಕ್ಷನ್‌ಗಾಗಿ IP65 ರೇಟಿಂಗ್ ಅನ್ನು ಸಹ ಈ ಫೋನ್ ಹೊಂದಿದೆ.
Also Read: Reliance Jio ಪ್ರತಿದಿನ 2.5GB ಡೇಟಾ ಮತ್ತು ಅನ್ಲಿಮಿಟೆಡ್ ಕರೆಗಳೊಂದಿಗೆ ಅತಿ ಕಡಿಮೆ ಬೆಲೆಗೆ ಲಭ್ಯ!
OPPO K13 5G ಸ್ಮಾರ್ಟ್ಫೋನ್ Qualcomm Snapdragon 6 Gen 4 ಪ್ರೊಸೆಸರ್‌ನೊಂದಿಗೆ ಬರುತ್ತದೆ. OPPO K13 5G ಸ್ಮಾರ್ಟ್ಫೋನ್ ಆರಂಭಿಕ 8GB RAM ಆನ್‌ಬೋರ್ಡ್ ಮೆಮೊರಿ ಮತ್ತು 256GB ಸ್ಟೋರೇಜ್ ಹೊಂದಿದೆ. ಇದರ ಕನೆಕ್ಟಿಂಗ್ ಆಯ್ಕೆಗಳಲ್ಲಿ ಮುಖ್ಯವಾಗಿ Bluetooth, GPS, WiFi, 3.5mm Audio Jack, USB Type C Port ಮತ್ತು AGPS/GPS, GLONASS, BDS, ಸೆನ್ಸರ್‌ಗಳನ್ನು ಹೊಂದಿದೆ. ಕೊನೆಯದಾಗಿ ಈ ಸ್ಮಾರ್ಟ್ಫೋನ್ 7000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ ಮತ್ತು 80W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.