ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ಒಪ್ಪೋ ಮೊಬೈಲ್ ಸಂಸ್ಥೆಯ Oppo K13 Turbo 5G ಸ್ಮಾರ್ಟ್‌ಫೋನ್ ಸ್ಟೈಲಿಶ್ ಲುಕ್‌ನೊಂದಿಗೆ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಬೊಂಬಾಟ್ ಆಫರ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 8450 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 50MP ಸೆನ್ಸಾರ್ ಕ್ಯಾಮೆರಾ ರಚನೆ ಸಹ ಪಡೆದಿದೆ. ಅಲ್ಲದೇ ಈ ಫೋನ್ ಮಿಡ್‌ನೈಟ್ ಮೇವರಿಕ್, ವೈಟ್ ನೈಟ್ ಹಾಗೂ ಪರ್ಪಲ್ ಫ್ಯಾಂಟಮ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಒಪ್ಪೋ K13 ಟರ್ಬೋ 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : 16GB RAM ಒಳಗೊಂಡ Google Pixel 10 Pro ಮೊಬೈಲ್ ಬೆಲೆಯಲ್ಲಿ ಸಖತ್ ಇಳಿಕೆ!
ಅಧಿಕ ಬ್ಯಾಟರಿ ಸಪೋರ್ಟ್ ಜೊತೆಗೆ ಅತ್ಯುತ್ತಮ ಕ್ಯಾಮೆರಾ ಫೀಚರ್ಸ್ ಮೂಲಕ ಮೊಬೈಲ್ ಪ್ರಿಯರ ಗಮನ ಸೆಳೆದಿರುವ ಒಪ್ಪೋ K13 ಟರ್ಬೋ 5G ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ವಾವ್ ಎನಿಸುವ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 33,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 26,294 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಮಿಡ್‌ನೈಟ್ ಮೇವರಿಕ್, ವೈಟ್ ನೈಟ್ ಹಾಗೂ ಪರ್ಪಲ್ ಫ್ಯಾಂಟಮ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.
ಒಪ್ಪೋ K13 ಟರ್ಬೋ 5G ಮೊಬೈಲ್ 6.80 ಇಂಚಿನ 1.5K AMOLED ಡಿಸ್‌ಪ್ಲೇ ಹೊಂದಿದೆ. ಹಾಗೆಯೇ ಇದು 1,280×2,800 ಪಿಕ್ಸೆಲ್ ರೆಸಲ್ಯೂಶನ್ ಜೊತೆಗೆ 120Hz ವರೆಗೆ ರಿಫ್ರೆಶ್ ರೇಟ್ ಬೆಂಬಲ ಪಡೆದುಕೊಂಡಿದೆ. ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 8450 ಚಿಪ್‌ಸೆಟ್ ಪ್ರೊಸೆಸರ್ ಸಪೋರ್ಟ್‌ನಲ್ಲಿ ಕೆಲಸ ಮಾಡಲಿದೆ ಹಾಗೂ ಆಂಡ್ರಾಯ್ಡ್ 15 ಓಎಸ್ ಬೆಂಬಲ ಪಡೆದುಕೊಂಡಿದೆ. ಇದಕ್ಕೆ ಅನುಗುಣವಾಗಿ 8GB RAM + 128GB ಹಾಗೂ 8GB RAM + 256GB ಸ್ಟೋರೇಜ್ ಆಯ್ಕೆ ಪಡೆದುಕೊಂಡಿದೆ.
ಹಾಗೆಯೇ ಒಪ್ಪೋ K13 ಟರ್ಬೋ 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾ 50MP ಸೆನ್ಸಾರ್‌ನಲ್ಲಿ ಇದ್ದು ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್ 16MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇನ್ನು ಈ ಮೊಬೈಲ್ 7,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದುಕೊಂಡಿದ್ದು ಇದಕ್ಕೆ ಪೂರಕವಾಗಿ 80W ವೈರ್ಡ್ ಫಾಸ್ಟ್ ಚಾರ್ಜಿಂಗ್ ಒದಗಿಸಿದೆ.