Oppo K13 Turbo ಸ್ಮಾರ್ಟ್‌ಫೋನ್ ಈಗ ಡಿಸ್ಕೌಂಟ್‌ನಲ್ಲಿ ಲಭ್ಯ! ಆಫರ್ ಬೆಲೆ ನೋಡಿ
ಒಪ್ಪೋ K13 ಟರ್ಬೋ ಮೊಬೈಲ್‌ಗೆ Flipkart ನಲ್ಲಿ ಭಾರೀ ಆಫರ್
ಒಪ್ಪೋ K13 ಟರ್ಬೋ ಫೋನ್ 50MP ಕ್ಯಾಮೆರಾ ರಚನೆ ಪಡೆದುಕೊಂಡಿದೆ
ಒಪ್ಪೋದ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 8450 ಪ್ರೊಸೆಸರ್ ಹೊಂದಿದೆ
ಒಪ್ಪೋ ಕಂಪನಿಯ ಸ್ಮಾರ್ಟ್‌ಫೋನ್ ಅನ್ನು ಆಫರ್‌ನಲ್ಲಿ ಖರೀದಿ ಮಾಡುವ ಯೋಚನೆ ಇದ್ದರೆ, ಕೂಡಲೇ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ನೋಡಿ. ಹೌದು, ಪ್ರಸ್ತುತ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಒಪ್ಪೋ ಸಂಸ್ಥೆಯ Oppo K13 Turbo ಮೊಬೈಲ್ ಸಖತ್ ಬೆಲೆ ಇಳಿಕೆ ದರದಲ್ಲಿ ಲಭ್ಯವಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಒಪ್ಪೋ ಸಂಸ್ಥೆಯ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 8450 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಹಾಗೆಯೇ LTPS AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಒಪ್ಪೋ K13 ಟರ್ಬೋ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Airtel ಸಂಸ್ಥೆಯ 219ರೂ.ಗಳ ಪ್ಲಾನಿನಲ್ಲಿ 3GB ಡೇಟಾ ಜೊತೆಗೆ ಆಕರ್ಷಕ ವ್ಯಾಲಿಡಿಟಿ
Oppo K13 Turbo ಮೊಬೈಲ್ ಬೆಲೆಯಲ್ಲಿ ಸಖತ್ ಕಡಿತ
ಒಪ್ಪೋ K13 ಟರ್ಬೋ ಮೊಬೈಲ್ ಆಕರ್ಷಕ ಫೀಚರ್ಸ್ ಮೂಲಕ ಗಮನ ಸೆಳೆದಿದೆ. ಪ್ರಸ್ತುತ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಗಮನಾರ್ಹ ರಿಯಾಯಿತಿ ಪಡೆದಿದೆ. ಈ ಮೊಬೈಲ್ 8GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 33,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 27,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಫೋನ್ ಪರ್ಪಲ್ ಪ್ಯಾಂಟೋಮ್, ವೈಟ್ ನೈಟ್ ಮತ್ತು ಮೀಡ್‌ನೈಟ್ ಮಾವೆರಿಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನು ಆಸಕ್ತ ಗ್ರಾಹಕರು ಅಮೆಜಾನ್ ಇ ಕಾಮರ್ಸ್ ತಾಣದ ಮೂಲಕ ಖರೀದಿಸಬಹುದಾಗಿದೆ.

ಒಪ್ಪೋ K13 ಟರ್ಬೋ ಮೊಬೈಲ್ ಫೀಚರ್ಸ್
ಒಪ್ಪೋ K13 ಟರ್ಬೋ ಫೋನ್ 6.8 ಇಂಚಿನ LTPS AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಅನ್ನು ಪಡೆದುಕೊಂಡಿದೆ. ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 8450 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಇದು 8GB RAM ಮತ್ತು 128GB ಸ್ಟೋರೇಜ್ ಹಾಗೂ 8GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳ ಅನ್ನು ಒಳಗೊಂಡಿದೆ.
ಹಾಗೆಯೇ ಒಪ್ಪೋ K13 ಟರ್ಬೋ ಮೊಬೈಲ್ ಹಿಂಭಾಗದಲ್ಲಿ ಆಕರ್ಷಕ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಈ ಫೋನ್ 50MP ಪ್ರಾಥಮಿಕ ಕ್ಯಾಮೆರಾ ಹೊಂದಿರುವ ಜೊತೆಗೆ 2MP ಸೆನ್ಸಾರ್ ಪಡೆದಿದೆ. ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್ 16MP ಕ್ಯಾಮೆರಾವನ್ನು ಒಳಗೊಂಡಿದೆ. ಅಲ್ಲದೇ Android 15 ಆಧಾರಿತ Color OS 15 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ ಈ ಫೋನ್ 7000mAh ಬ್ಯಾಟರಿ ಜೊತೆಗೆ 80W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile