ನಾಳೆ Oppo K14 5G ಸ್ಮಾರ್ಟ್‌ಫೋನ್‌ ಖರೀದಿಗೆ ಲಭ್ಯ! ಬೆಲೆ ಮತ್ತು ಆಫರ್‌ ಮಾಹಿತಿ ನೋಡಿ

HIGHLIGHTS

ನಾಳೆ (ಮಾರ್ಚ್ 20 ರಂದು) ಒಪ್ಪೋ K14 5G ಮಾರಾಟ ಪ್ರಾರಂಭ

ಒಪ್ಪೋ ಕಂಪನಿಯ ಈ ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ರಚನೆ ಹೊಂದಿದೆ

ಒಪ್ಪೋ K14 5G ಮೊಬೈಲ್‌ 7,000mAh ಸಾಮರ್ಥ್ಯದ ಬ್ಯಾಟರಿ ಪಡೆದುಕೊಂಡಿದೆ

Oppo ಮೊಬೈಲ್ ಕಂಪನಿಯು ಇತ್ತೀಚಿಗೆ ಬಿಡುಗಡೆ ಮಾಡಿರುವ Oppo K14 5G ಸ್ಮಾರ್ಟ್‌ಫೋನ್‌ ನಾಳೆ (ಮಾರ್ಚ್ 20 ರಂದು) ಸೇಲ್‌ ಪ್ರಾರಂಭ ಮಾಡಲಿದೆ. ಬಜೆಟ್‌ ವಿಭಾಗದಲ್ಲಿ ಲಗ್ಗೆ ಇಟ್ಟಿರುವ ಈ ಸ್ಮಾರ್ಟ್‌ಫೋನ್‌ 7000mAh ಬ್ಯಾಟರಿ ಬ್ಯಾಕ್‌ಅಪ್‌ ಮೂಲಕ ಗಮನ ಸೆಳೆದಿದೆ. ಹಾಗೆಯೇ ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್ ಪವರ್‌ ಅನ್ನು ಒಳಗೊಂಡಿದೆ. ಇದರೊಂದಿಗೆ ಈ ಮೊಬೈಲ್‌ 50MP ಕ್ಯಾಮೆರಾ ಸೆನ್ಸಾರ್‌ ಸೌಲಭ್ಯವನ್ನು ಒಳಗೊಂಡಿದೆ. ದೇಶಿಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿರುವ ಒಪ್ಪೋ K14 5G ಸ್ಮಾರ್ಟ್‌ಫೋನ್ ಐಸಿ ಬ್ಲೂ, ಪ್ರಿಸ್ಮ್ ವೈಲೆಟ್ ಮತ್ತು ಪ್ರಿಸ್ಮ್ ವೈಟ್ ಕಲರ್‌ ಆಯ್ಕೆಗಳನ್ನು ಒಳಗೊಂಡಿದೆ. ಇನ್ನುಳಿದಂತೆ ಒಪ್ಪೋ K14 5G ಸ್ಮಾರ್ಟ್‌ಫೋನ್ ಬೆಲೆ, ಲಭ್ಯತೆ ಹಾಗೂ ಫೀಚರ್ಸ್‌ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Samsung Galaxy M56 5G ಖರೀದಿಸಲು ಇದು ಬೆಸ್ಟ್‌ ಟೈಮ್‌! ಈ ಆಫರ್‌ಗೆ ನೀವು ಫಿದಾ ಆಗ್ತೀರಾ

Oppo K14 5G ಮೊಬೈಲ್‌ ಬೆಲೆ ಮತ್ತು ಲಭ್ಯತೆ

ನೂತನ ಒಪ್ಪೋ K14 5G ಮೊಬೈಲ್‌ ಬಜೆಟ್‌ ಪ್ರೈಸ್‌ಟ್ಯಾಗ್‌ ಪಡೆದಿದ್ದು ಈ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಈ ಮೊಬೈಲ್‌ನ ಆರಂಭಿಕ 6GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 17,999 ರೂಗಳು ಆಗಿದೆ. ಹಾಗೆಯೇ 6GB RAM + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 19,999 ರೂಗಳು ಆಗಿದೆ. ಅದೇ ರೀತಿ 8GB RAM + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 21,999 ರೂಗಳು ಆಗಿದೆ. ಗ್ರಾಹಕರು HDFC ಬ್ಯಾಂಕ್, ICICI ಬ್ಯಾಂಕ್ ಮತ್ತು SBI ಕಾರ್ಡ್‌ಗಳ ಮೂಲಕ ಖರೀದಿಸಿದರೆ 1,000 ರೂಗಳ ವರೆಗೆ ಇನ್‌ಸ್ಟಂಟ್‌ ರಿಯಾಯಿತಿ ಪಡೆಯಬಹುದು. ಅಂದಹಾಗೆ ಈ ಫೋನ್‌ ಐಸಿ ಬ್ಲೂ, ಪ್ರಿಸ್ಮ್ ವೈಲೆಟ್ ಮತ್ತು ಪ್ರಿಸ್ಮ್ ವೈಟ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ಒಪ್ಪೋ K14 5G ಫೀಚರ್ಸ್‌ ಮಾಹಿತಿ

ಹೊಸ ಒಪ್ಪೋ K14 5G ಮೊಬೈಲ್ 6.75 ಇಂಚಿನ ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್‌ 120Hz ವರೆಗೆ ರಿಫ್ರೆಶ್ ರೇಟ್ ಪಡೆದಿದೆ. ಹಾಗೆಯೇ ಇದರ ಸ್ಕ್ರೀನ್‌ 1,125 nits ಬ್ರೈಟ್ನೆಸ್‌ ಒಳಗೊಂಡಿದೆ. ಈ ಮೊಬೈಲ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಪಡೆದಿದೆ. ಇದಕ್ಕೆ ಪೂರಕವಾಗಿ 6GB RAM + 128GB, 6GB RAM + 256GB ಹಾಗೂ 6GB RAM + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಮೊಬೈಲ್‌ IP66 + IP68 + IP69 ರೇಟಿಂಗ್‌ ಸೌಲಭ್ಯ ಪಡೆದುಕೊಂಡಿದೆ.

ಒಪ್ಪೋ K14 5G ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರ ಮುಖ್ಯ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಆಗಿದ್ದು ಸೆಕೆಂಡರಿ ಕ್ಯಾಮೆರಾ 2MP ಮೊನೊಕ್ರೋಮ್ ಸೆನ್ಸರ್‌ ಸೌಲಭ್ಯ ಪಡೆದಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8MP ಮೆಗಾಪಿಕ್ಸಲ್ ಕ್ಯಾಮೆರಾ ನೀಡಲಾಗಿದೆ. ಇನ್ನು ಈ ಮೊಬೈಲ್‌ 7000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವ ಜೊತೆಗೆ 45W ವೈರ್ಡ್ ಫಾಸ್ಟ್‌ ಚಾರ್ಜಿಂಗ್‌ ಬೆಂಬಲ ಸಹ ಪಡೆದುಕೊಂಡಿದೆ. ಒಮ್ಮೆ ಪೂರ್ಣ ಚಾರ್ಜ್‌ ಮಾಡಿದರೆ ಈ ಮೊಬೈಲ್‌ 18.9 ಗಂಟೆಗಳ YouTube ವೀಡಿಯೊ ಪ್ಲೇಬ್ಯಾಕ್, 13 ಗಂಟೆಗಳ ವರೆಗೆ ವಾಟ್ಸಾಪ್‌ ವೀಡಿಯೊ ಕರೆಗಳನ್ನು ಒದಗಿಸುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :