ಇಂದು ಗ್ರ್ಯಾಂಡ್‌ ಎಂಟ್ರಿ ಕೊಡಲಿದೆ OPPO K14 5G ಮೊಬೈಲ್‌! ನಿರೀಕ್ಷಿತ ಫೀಚರ್ಸ್‌ ಮತ್ತು ಬೆಲೆ

HIGHLIGHTS

ಇಂದು (ಮಾರ್ಚ್ 9 ರಂದು) ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ಒಪ್ಪೋ K14 ಫೋನ್‌

ಒಪ್ಪೋದ ಈ ಹೊಸ ಫೋನ್‌ MediaTek Dimensity 6300 ಪ್ರೊಸೆಸರ್‌ ಪಡೆದಿರಲಿದೆ

ಈ ಸ್ಮಾರ್ಟ್‌ಫೋನ್‌ ಕ್ಲಾಸಿಕ್‌ ವೈಟ್‌ ಹಾಗೂ ಡಾರ್ಕ್ ಪರ್ಪಲ್‌ ಕಲರ್ ಆಯ್ಕೆ ಪಡೆದಿರಬಹುದು

ಇಂದು ಗ್ರ್ಯಾಂಡ್‌ ಎಂಟ್ರಿ ಕೊಡಲಿದೆ OPPO K14 5G ಮೊಬೈಲ್‌! ನಿರೀಕ್ಷಿತ ಫೀಚರ್ಸ್‌ ಮತ್ತು ಬೆಲೆ

OPPO ಮೊಬೈಲ್‌ ಸಂಸ್ಥೆಯ ಬಹುನಿರೀಕ್ಷಿತ OPPO K14 5G ಸ್ಮಾರ್ಟ್‌ಫೋನ್‌ ಇಂದು (ಮಾರ್ಚ್ 9 ರಂದು) ದೇಶಿಯ ಮಾರುಕಟ್ಟೆಗೆ ಅಧಿಕೃತವಾಗಿ ಲಾಂಚ್ ಆಗಲಿದೆ. ಬಿಡುಗಡೆಗೂ ಮುನ್ನವೇ ಭಾರೀ ಕುತೂಹಲ ಮೂಡಿಸಿರುವ ಈ ಫೋನ್‌ 7,000mAh ಸಾಮರ್ಥ್ಯದ ಬ್ಯಾಟರಿ ಒಳಗೊಂಡಿರುವುದು ಕನ್ಫರ್ಮ್ ಆಗಿದೆ. ಹಾಗೆಯೇ ಈ ಮೊಬೈಲ್‌ MediaTek Dimensity 6300 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಪಡೆದಿರುವ ನಿರೀಕ್ಷೆಗಳು ಅಧಿಕವಾಗಿವೆ. ಇನ್ನು ಈ ಮೊಬೈಲ್‌ ಕ್ಲಾಸಿಕ್‌ ವೈಟ್‌ ಹಾಗೂ ಡಾರ್ಕ್ ಪರ್ಪಲ್‌ ಕಲರ್ ಆಯ್ಕೆಗಳೊಂದಿಗೆ ಲಗ್ಗೆ ಇಡಬಹುದು ಎನ್ನಲಾಗಿದೆ. ಇನ್ನುಳಿದಂತೆ ಒಪ್ಪೋ K14 5G ಮೊಬೈಲ್‌ನ ಇತರೆ ನಿರೀಕ್ಷಿತ ಬೆಲೆ ಹಾಗೂ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Vivo X300 Ultra ಮೊಬೈಲ್‌ ಕ್ಯಾಮೆರಾ ಡಿಟೇಲ್ಸ್ ಬಹಿರಂಗ! ಶೀಘ್ರದಲ್ಲೇ ಮಾರುಕಟ್ಟೆಗೆ ಎಂಟ್ರಿ

OPPO K14 5G ಇಂದು ಮಾರುಕಟ್ಟೆಗೆ ಬರಲಿದೆ

ಪ್ರಮುಖ ಮೊಬೈಲ್ ಬ್ರಾಂಡ್‌ಗಳ ಪೈಕಿ ಒಂದಾಗಿರುವ ಒಪ್ಪೋ ಕಂಪನಿಯು ಇದೀಗ ತನ್ನ K ಸರಣಿಯಲ್ಲಿ ಹೊಸದಾಗಿ ಪರಿಚಯಿಸಲಿರುವ ಒಪ್ಪೋ K14 5G ಮೊಬೈಲ್‌ ಗ್ರಾಹಕರ ನಿರೀಕ್ಷೆಗಳನ್ನು ಹೆಚ್ಚಿಸಿದೆ. ಈ ಸ್ಮಾರ್ಟ್‌ಫೋನ್‌ ಇಂದು (ಮಾರ್ಚ್ 9 ರಂದು) ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಿ ಲಾಂಚ್ ಆಗಲಿದೆ. ಈ ಮೊಬೈಲ್ ಫೋನ್ ಕುರಿತು Flipkart ತಾಣದಲ್ಲಿ ಮೀಸಲಾದ ಮೈಕ್ರೋಸೈಟ್ ಈಗಾಗಲೇ ಲೈವ್ ಆಗಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್‌ ಎರಡು ಬಣ್ಣಗಳ ಆಯ್ಕೆ ಪಡೆದಿರಲಿದ್ದು ಅವುಗಳು ಕ್ರಮವಾಗಿ ಕ್ಲಾಸಿಕ್‌ ವೈಟ್‌ ಹಾಗೂ ಡಾರ್ಕ್ ಪರ್ಪಲ್‌ ಕಲರ್ ಆಗಿರಲಿವೆ ಎಂದು ಹೇಳಲಾಗುತ್ತಿದೆ. ಇನ್ನು ಫೋನಿನ ಅಧಿಕೃತ ಬೆಲೆಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯನ್ನು ಕಂಪನಿಯು ಹೊರಹಾಕಿಲ್ಲ. ಈ ಫೋನ್ Flipkart ಇ ಕಾಮರ್ಸ್‌ ಮೂಲಕ ಮಾರಾಟ ಶುರು ಮಾಡಲಿದೆ.

Oppo K14 5G

ಒಪ್ಪೋ K14 5G ನಿರೀಕ್ಷಿತ ಫೀಚರ್ಸ್‌

ಒಪ್ಪೋ ಸಂಸ್ಥೆಯ ಮುಂಬರುವ ನೂತನ ಒಪ್ಪೋ K14 5G ಮೊಬೈಲ್‌ ಬ್ಯಾಟರಿ ಪ್ರಮುಖ ಹೈಲೈಟ್‌ ಆಗಿರಲಿದೆ. ಇದು 7,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿರಲಿದ್ದು ಇದಕ್ಕೆ ಪೂರಕವಾಗಿ 45W ಫಾಸ್ಟ್ ಚಾರ್ಜಿಂಗ್ ಸಪೋರ್ಟ್‌ ಪಡೆದುಕೊಂಡಿರುವುದು ಬಹುತೇಕ ಪಕ್ಕಾ ಎಂದು ಹೇಳಲಾಗಿದೆ. ಹಾಗೆಯೇ ಫ್ಲಿಪ್‌ಕಾರ್ಟ್ ಮೈಕ್ರೋಸೈಟ್ ಒಪ್ಪೋ K14 5G ಮೊಬೈಲ್‌ನ ​​ಹಿಂಭಾಗದ ವಿನ್ಯಾಸವನ್ನು ಬಹಿರಂಗಪಡಿಸುತ್ತದೆ. ಈ ಫೋನ್ LED ಫ್ಲ್ಯಾಷ್‌ ಸಪೋರ್ಟ್‌ದೊಂದಿಗೆ ಸೆಟ್‌ ಆಗಿರುವ ಡ್ಯುಯಲ್ ಹಿಂಬದಿಯ ಕ್ಯಾಮೆರಾ ರಚನೆ ಅನ್ನು ಹೊಂದಿರುವಂತೆ ಕಾಣುತ್ತದೆ. ಹಾಗೆಯೇ ಒಪ್ಪೋದ ಈ ಮೊಬೈಲ್‌ ColorOS ಪಡೆದಿರಲಿದೆ ಎನ್ನಲಾಗಿದೆ.

ಅಲ್ಲದೇ ಕೆಲವು ಲೀಕ್ ಮಾಹಿತಿಗಳ ಪ್ರಕಾರ ಈ ಸ್ಮಾರ್ಟ್‌ಫೋನ್‌ MediaTek Dimensity 6300 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದೆ ಎನ್ನಲಾಗಿದೆ. ಈ ಮೊಬೈಲ್‌ನ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನು ಬಹಿರಂಗವಾಗಬೇಕಿದೆ. ಅಂದಹಾಗೆ ಒಪ್ಪೋ K14 5G ಮೊಬೈಲ್‌ 20,000 ರೂ.ಗಳ ಆಸುಪಾಸಿನ ಬೆಲೆಯಲ್ಲಿ ಮಾರುಕಟ್ಟೆಗೆ ಎಂಟ್ರಿ ಪಡೆಯುವ ಸಾಧ್ಯತೆಗಳು ಇವೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo