ಸದ್ದಿಲ್ಲದೆ ಭಾರತದಲ್ಲಿ Oppo K14 5G ಸ್ಮಾರ್ಟ್‌ಫೋನ್‌ ಲಾಂಚ್‌! ಬೆಲೆ ಮತ್ತು ಫೀಚರ್ಸ್‌ ನೋಡಿ

HIGHLIGHTS

ಒಪ್ಪೋ K14 5G ಫೋನ್‌ ಮಾರ್ಚ್‌ 20 ರಿಂದ ಮಾರಾಟ ಪ್ರಾರಂಭ ಮಾಡಲಿದೆ

ಒಪ್ಪೋದ ಈ ಮೊಬೈಲ್‌ 50MP ಸೆನ್ಸಾರ್‌ನ ಪ್ರಾಥಮಿಕ ಕ್ಯಾಮೆರಾ ಪಡೆದುಕೊಂಡಿದೆ

ಒಪ್ಪೋದ ಈ ಮೊಬೈಲ್‌ 7,000mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದೆ

ಸದ್ದಿಲ್ಲದೆ ಭಾರತದಲ್ಲಿ Oppo K14 5G ಸ್ಮಾರ್ಟ್‌ಫೋನ್‌ ಲಾಂಚ್‌! ಬೆಲೆ ಮತ್ತು ಫೀಚರ್ಸ್‌ ನೋಡಿ

ಒಪ್ಪೋ ಮೊಬೈಲ್‌ ಕಂಪನಿಯ ಬಹುನಿರೀಕ್ಷಿತ Oppo K14 5G ಸ್ಮಾರ್ಟ್‌ಫೋನ್‌ ಅನ್ನು ಇಂದು (ಮಾರ್ಚ್ 17 ರಂದು) ಭಾರತೀಯ ಮಾರುಕಟ್ಟೆಗೆ ಅಧಿಕೃತವಾಗಿ ಬಿಡುಗಡೆ ಆಗಿದೆ. ಈ ಮೊಬೈಲ್‌ ಆಕ್ಟಾ ಕೋರ್ MediaTek Dimensity 6300 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿರುವ ಜೊತೆಗೆ 7,000mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಹೊಂದಿದೆ. ಹಾಗೆಯೇ ಈ ಮೊಬೈಲ್‌ನ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಅನ್ನು ಒಳಗೊಂಡಿದೆ. ಈ ಮೊಬೈಲ್‌ ಐಸಿ ಬ್ಲೂ, ಪ್ರಿಸ್ಮ್ ವೈಲೆಟ್ ಮತ್ತು ಪ್ರಿಸ್ಮ್ ವೈಟ್ ಕಲರ್‌ ಆಯ್ಕೆಗಳಲ್ಲಿ ಮಾರುಕಟ್ಟೆಗೆ ಎಂಟ್ರಿ ಪಡೆದಿದೆ. ಹಾಗಾದರೆ ಒಪ್ಪೋ K14 5G ಸ್ಮಾರ್ಟ್‌ಫೋನ್‌ನ ಬೆಲೆ, ಮಾರಾಟ, ಫೀಚರ್ಸ್‌ ಹಾಗೂ ಲಭ್ಯತೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಮಾರುಕಟ್ಟೆಗೆ ಬಂದೇ ಬಿಡ್ತು Vivo T5X 5G ಸ್ಮಾರ್ಟ್‌ಫೋನ್‌! ಬೆಲೆ ಮತ್ತು ಫೀಚರ್ಸ್‌ ಮಾಹಿತಿ

Oppo K14 5G ಮೊಬೈಲ್‌ ಬೆಲೆ ಮತ್ತು ಲಭ್ಯತೆ

ಮಾರುಕಟ್ಟೆ ಪ್ರವೇಶಿಸಿರುವ ಒಪ್ಪೋ K14 5G ಮೊಬೈಲ್‌ ಬಜೆಟ್‌ ಪ್ರೈಸ್‌ಟ್ಯಾಗ್‌ ಪಡೆದಿದ್ದು ಈ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಈ ಮೊಬೈಲ್‌ನ ಆರಂಭಿಕ 6GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 17,999 ರೂಗಳು ಆಗಿದೆ. ಹಾಗೆಯೇ 6GB RAM + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 19,999 ರೂಗಳು ಆಗಿದೆ. ಅದೇ ರೀತಿ 8GB RAM + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 21,999 ರೂಗಳು ಆಗಿದೆ. ಗ್ರಾಹಕರು HDFC ಬ್ಯಾಂಕ್, ICICI ಬ್ಯಾಂಕ್ ಮತ್ತು SBI ಕಾರ್ಡ್‌ಗಳ ಮೂಲಕ ಖರೀದಿಸಿದರೆ 1,000 ರೂಗಳ ವರೆಗೆ ಇನ್‌ಸ್ಟಂಟ್‌ ರಿಯಾಯಿತಿ ಪಡೆಯಬಹುದು. ಅಂದಹಾಗೆ ಈ ಫೋನ್‌ ಇದೇ ಮಾರ್ಚ್ 20 ರಿಂದ ಫ್ಲಿಪ್‌ಕಾರ್ಟ್ ಮತ್ತು ಒಪ್ಪೋ ಆನ್‌ಲೈನ್ ಸ್ಟೋರ್ ಮೂಲಕ ಮಾರಾಟ ಪ್ರಾರಂಭ ಮಾಡಲಿದೆ. ಇನ್ನು ಈ ಮೊಬೈಲ್‌ ಐಸಿ ಬ್ಲೂ, ಪ್ರಿಸ್ಮ್ ವೈಲೆಟ್ ಮತ್ತು ಪ್ರಿಸ್ಮ್ ವೈಟ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Oppo K14 5G

ಒಪ್ಪೋ K14 5G ಮೊಬೈಲ್‌ ಫೀಚರ್ಸ್‌ ಹೀಗಿವೆ

ನೂತನ ಒಪ್ಪೋ K14 5G ಮೊಬೈಲ್ 6.75 ಇಂಚಿನ ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್‌ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಇದರ ಸ್ಕ್ರೀನ್‌ 1,125 nits ಬ್ರೈಟ್ನೆಸ್‌ ಹೊಂದಿದೆ. ಈ ಮೊಬೈಲ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಪಡೆದಿದೆ. ಇದಕ್ಕೆ ಪೂರಕವಾಗಿ 6GB RAM + 128GB, 6GB RAM + 256GB ಹಾಗೂ 6GB RAM + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಮೊಬೈಲ್‌ IP66 + IP68 + IP69 ರೇಟಿಂಗ್‌ ಸೌಲಭ್ಯ ಪಡೆದುಕೊಂಡಿದೆ.

ಒಪ್ಪೋ K14 5G ಮೊಬೈಲ್‌ ಹಿಂಬದಿಯಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರ ಮುಖ್ಯ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಆಗಿದ್ದು ಸೆಕೆಂಡರಿ ಕ್ಯಾಮೆರಾ 2MP ಮೊನೊಕ್ರೋಮ್ ಸೆನ್ಸರ್‌ ಸೌಲಭ್ಯ ಪಡೆದಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8MP ಮೆಗಾಪಿಕ್ಸಲ್ ಕ್ಯಾಮೆರಾ ನೀಡಲಾಗಿದೆ. ಇನ್ನು ಈ ಮೊಬೈಲ್‌ 7000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವ ಜೊತೆಗೆ 45W ವೈರ್ಡ್ ಫಾಸ್ಟ್‌ ಚಾರ್ಜಿಂಗ್‌ ಬೆಂಬಲ ಸಹ ಹೊಂದಿದೆ. ಒಮ್ಮೆ ಪೂರ್ಣ ಚಾರ್ಜ್‌ ಮಾಡಿದರೆ ಈ ಮೊಬೈಲ್‌ 18.9 ಗಂಟೆಗಳ YouTube ವೀಡಿಯೊ ಪ್ಲೇಬ್ಯಾಕ್, 13 ಗಂಟೆಗಳ ವರೆಗೆ ವಾಟ್ಸಾಪ್‌ ವೀಡಿಯೊ ಕರೆಗಳನ್ನು ಒದಗಿಸುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo