Oppo K14 5G ಬೆಲೆಯಲ್ಲಿ ಭಾರೀ ಇಳಿಕೆ! 50MP ಕ್ಯಾಮೆರಾ, 7000mAh ಬ್ಯಾಟರಿ ಸಪೋರ್ಟ್ ಇದೆ
ಒಪ್ಪೋ K14 5G ಮೊಬೈಲ್ ಬೆಲೆಯಲ್ಲಿ ಬೊಂಬಾಟ್ ರಿಯಾಯಿತಿ
ಈ ಸ್ಮಾರ್ಟ್‌ಫೋನ್ 7000mAh ಬ್ಯಾಟರಿ ಸಪೋರ್ಟ್ ಪಡೆದುಕೊಂಡಿದೆ
ಒಪ್ಪೋದ ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಆಗಿದೆ
ಜನಪ್ರಿಯ ಒಪ್ಪೋ ಕಂಪನಿಯ Oppo K14 5G ಮೊಬೈಲ್ ಈಗ ಭರ್ಜರಿ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಹೌದು, ಸದ್ಯ ಒಪ್ಪೋ K14 5G ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಬೊಂಬಾಟ್ ಬೆಲೆ ಇಳಿಕೆ ಪಡೆದುಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ MediaTek Dimensity 6300 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿರುವ ಜೊತೆಗೆ ಅಂದಹಾಗೆ ಈ ಮೊಬೈಲ್ ಐಸಿ ಬ್ಲೂ, ಪ್ರಿಸ್ಮ್ ವೈಲೆಟ್ ಮತ್ತು ಪ್ರಿಸ್ಮ್ ವೈಟ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಒಪ್ಪೋ K14 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Samsung ಕಂಪನಿಯ ಈ ಸ್ಟೈಲಿಶ್ ಮೊಬೈಲ್ ಬೆಲೆಯಲ್ಲಿ ಭರ್ಜರಿ ಇಳಿಕೆ! 50MP ಕ್ಯಾಮೆರಾ
Oppo K14 5G ಬೆಲೆಯಲ್ಲಿ ಬೊಂಬಾಟ್ ಇಳಿಕೆ
ಒಪ್ಪೋ K14 5G ಮೊಬೈಲ್ ಸದ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಆಕರ್ಷಕ ರಿಯಾಯಿತಿ ಪಡೆದಿದೆ. ಈ ಸ್ಮಾರ್ಟ್‌ಫೋನ್ 6GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 25,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 19,999 ರೂ.ಗಳ ದರದಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಸಹ ಪಡೆಯಬಹುದಾಗಿದೆ. ಇದರೊಂದಿಗೆ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಮೊಬೈಲ್ ಐಸಿ ಬ್ಲೂ, ಪ್ರಿಸ್ಮ್ ವೈಲೆಟ್ ಮತ್ತು ಪ್ರಿಸ್ಮ್ ವೈಟ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

ಒಪ್ಪೋ K14 5G ಮೊಬೈಲ್ ಫೀಚರ್ಸ್
ನೂತನ ಒಪ್ಪೋ K14 5G ಮೊಬೈಲ್ 6.75 ಇಂಚಿನ ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಇದರ ಸ್ಕ್ರೀನ್ 1,125 nits ಬ್ರೈಟ್ನೆಸ್ ಹೊಂದಿದೆ. ಈ ಮೊಬೈಲ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದಿದೆ. ಇದಕ್ಕೆ ಪೂರಕವಾಗಿ 6GB RAM + 128GB, 6GB RAM + 256GB ಹಾಗೂ 6GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಮೊಬೈಲ್ IP66 + IP68 + IP69 ರೇಟಿಂಗ್ ಸೌಲಭ್ಯ ಪಡೆದುಕೊಂಡಿದೆ.
ಒಪ್ಪೋ K14 5G ಮೊಬೈಲ್ ಹಿಂಬದಿಯಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರ ಮುಖ್ಯ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಆಗಿದ್ದು ಸೆಕೆಂಡರಿ ಕ್ಯಾಮೆರಾ 2MP ಮೊನೊಕ್ರೋಮ್ ಸೆನ್ಸರ್ ಸೌಲಭ್ಯ ಪಡೆದಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8MP ಮೆಗಾಪಿಕ್ಸಲ್ ಕ್ಯಾಮೆರಾ ನೀಡಲಾಗಿದೆ. ಇನ್ನು ಈ ಮೊಬೈಲ್ 7,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿರುವ ಜೊತೆಗೆ 45W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಹೊಂದಿದೆ. ಒಮ್ಮೆ ಪೂರ್ಣ ಚಾರ್ಜ್ ಮಾಡಿದರೆ ಈ ಮೊಬೈಲ್ 18.9 ಗಂಟೆಗಳ YouTube ವೀಡಿಯೊ ಪ್ಲೇಬ್ಯಾಕ್, 13 ಗಂಟೆಗಳ ವರೆಗೆ ವಾಟ್ಸಾಪ್ ವೀಡಿಯೊ ಕರೆಗಳನ್ನು ಒದಗಿಸುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile