ಜನಪ್ರಿಯ ಇ ಕಾಮರ್ಸ್ ಅಮೆಜಾನ್ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ಒಪ್ಪೋ ಕಂಪನಿಯ Oppo K14 5G ಮೊಬೈಲ್ ಆಕರ್ಷಕ ಆಫರ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ 7,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಒಪ್ಪೋ K14 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಭಾರೀ ಆಫರ್‌ನಲ್ಲಿ Samsung Galaxy A36 ಸ್ಮಾರ್ಟ್‌ಫೋನ್ ಖರೀದಿಸಲು ಇಲ್ಲಿ ಗಮನಿಸಿ!
ಬಜೆಟ್ ದರ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ಒಪ್ಪೋ K14 5G ಮೊಬೈಲ್ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಸಖತ್ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 8GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 25,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್ 23,888 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಐಸಿ ಬ್ಲೂ, ಪ್ರಿಸ್ಮ್ ವೈಲೆಟ್ ಮತ್ತು ಪ್ರಿಸ್ಮ್ ವೈಟ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು. ಒಪ್ಪೋ K14 5G ಸ್ಮಾರ್ಟ್‌ಫೋನ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.
ಒಪ್ಪೋ K14 5G ಮೊಬೈಲ್ 6.75 ಇಂಚಿನ ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಇದರ ಸ್ಕ್ರೀನ್ 1,125 nits ಬ್ರೈಟ್ನೆಸ್ ಹೊಂದಿದೆ. ಈ ಮೊಬೈಲ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದಿದೆ. ಇದಕ್ಕೆ ಪೂರಕವಾಗಿ 6GB RAM + 128GB, 6GB RAM + 256GB ಹಾಗೂ 6GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಮೊಬೈಲ್ IP66 + IP68 + IP69 ರೇಟಿಂಗ್ ಸೌಲಭ್ಯ ಪಡೆದುಕೊಂಡಿದೆ.
ಒಪ್ಪೋ K14 5G ಮೊಬೈಲ್ ಹಿಂಬದಿಯಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರ ಮುಖ್ಯ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಆಗಿದ್ದು ಸೆಕೆಂಡರಿ ಕ್ಯಾಮೆರಾ 2MP ಮೊನೊಕ್ರೋಮ್ ಸೆನ್ಸರ್ ಸೌಲಭ್ಯ ಪಡೆದಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8MP ಮೆಗಾಪಿಕ್ಸಲ್ ಕ್ಯಾಮೆರಾ ನೀಡಲಾಗಿದೆ. ಇನ್ನು ಈ ಮೊಬೈಲ್ 7,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿರುವ ಜೊತೆಗೆ 45W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಹೊಂದಿದೆ.
Disclosure: This Article Contains Affiliate Links