ಇಂದು OPPO K14 Lite ಸೇಲ್‌! ಫೋನ್‌ ಬಿಡುಗಡೆಗೂ ಮುನ್ನವೇ ಸೇಲ್‌ ಘೋಷಿಸಿದ ಒಪ್ಪೋ

ಇಂದು OPPO K14 Lite ಸೇಲ್‌! ಫೋನ್‌ ಬಿಡುಗಡೆಗೂ ಮುನ್ನವೇ ಸೇಲ್‌ ಘೋಷಿಸಿದ ಒಪ್ಪೋ

ಒಪ್ಪೋ ಮೊಬೈಲ್‌ ಕಂಪನಿಯ ತನ್ನ ಹೊಸ OPPO K14 Lite ಮೊಬೈಲ್‌ ಅನ್ನು ಬಿಡುಗಡೆ ಮಾಡುವ ಮುನ್ನವೇ ಸೇಲದ ಘೋಷಣೆ ಮಾಡಿದೆ. ಅಂದಹಾಗೆ ಹೊಸ ಒಪ್ಪೋ K14 ಲೈಟ್ ಫೋನ್‌ ಇಂದು (ಸೆಪ್ಟೆಂಬರ್ 16 ರಂದು) ಭಾರತೀಯ ಮಾರುಕಟ್ಟೆಯಲ್ಲಿ ಫ್ಲಿಪ್‌ಕಾರ್ಟ್‌ ಮೂಲಕ ಸೇಲ್‌ ಪ್ರಾರಂಭ ಮಾಡಲಿದೆ. ಈ ನೂತನ ಮೊಬೈಲ್‌ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP64 ರೇಟಿಂಗ್ ಸೌಲಭ್ಯದ ಜೊತೆಗೆ 7,200mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿರುವುದು ಖಚಿತವಾಗಿದೆ. ಹಾಗೆಯೇ ಈ ಮೊಬೈಲ್‌ 120Hz ಅಲ್ಟ್ರಾ-ಬ್ರೈಟ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಅಲ್ಲದೇ ಈ ಫೋನ್‌ ಫೆದರ್ ಪರ್ಪಲ್ ಮತ್ತು ಸ್ಟೋನ್ ಬ್ರೌನ್ ಕಲರ್‌ ಬಣ್ಣಗಳ ಆಯ್ಕೆಗಳನ್ನು ಒಳಗೊಂಡಿರುವುದು ಪಕ್ಕಾ ಎನ್ನಲಾಗಿದೆ. ಹಾಗಾದರೇ ಒಪ್ಪೋ K14 ಲೈಟ್ ಮೊಬೈಲ್‌ ಸೇಲ್‌, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : OnePlus N6 Lite ಸ್ಮಾರ್ಟ್‌ಫೋನ್‌ ಬಿಡುಗಡೆಗೆ ದಿನಾಂಕ ನಿಗದಿ; ನಿರೀಕ್ಷಿತ ಫೀಚರ್ಸ್‌ ನೋಡಿ

ಇಂದು OPPO K14 Lite ಮೊಬೈಲ್‌ ಸೇಲ್‌

ದೇಶೀಯ ಮಾರುಕಟ್ಟೆಗೆ ಬಜೆಟ್‌ ಬೆಲೆಯಲ್ಲಿ ಲಗ್ಗೆ ಇಡುವ ನಿರೀಕ್ಷೆ ಇರುವ ಒಪ್ಪೋ K14 ಲೈಟ್ ಮೊಬೈಲ್‌ ಇಂದು (ಸೆಪ್ಟೆಂಬರ್ 16 ರಂದು) ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಮೂಲಕ ಸೇಲ್‌ ಶುರು ಮಾಡಲಿದೆ. ಈ ಮೊಬೈಲ್‌ನ ಆರಂಭಿಕ 4GB RAM + 64GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯನ್ನು ಒಳಗೊಂಡಿರಲಿದೆ ಎಂದು ತಿಳಿದುಬಂದಿದೆ. ಹೊಂದಿದೆ. ಹಾಗೆಯೇ ಈ ಫೋನ್‌ ಫೆದರ್ ಪರ್ಪಲ್ ಮತ್ತು ಸ್ಟೋನ್ ಬ್ರೌನ್ ಕಲರ್‌ ಬಣ್ಣಗಳ ಆಯ್ಕೆಗಳನ್ನು ಪಡೆದಿರಲಿದೆ. ಇನ್ನು ಈ ಫೋನ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಮೂಲಕ ಖರೀದಿಗೆ ಲಭ್ಯವಾಗಲಿದೆ.

Oppo K14 Lite

ಒಪ್ಪೋ K14 ಲೈಟ್ ನಿರೀಕ್ಷಿತ ಫೀಚರ್ಸ್‌

ಒಪ್ಪೋ K14 ಲೈಟ್ ಮೊಬೈಲ್‌ 6.75 ಇಂಚಿನ LCD ಡಿಸ್‌ಪ್ಲೇ ಅನ್ನು ಹೊಂದಿರುವ ಸಾಧ್ಯತೆ. ಇದರ ಸ್ಕ್ರೀನ್‌ 120Hz ರಿಫ್ರೆಶ್ ರೇಟ್‌ ಜೊತೆಗೆ 1,200 nits ಬ್ರೈಟ್ನೆಸ್‌ ಸೌಲಭ್ಯ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಆಕ್ಟಾ-ಕೋರ್ ಯುನಿಸಾಕ್ T7250 SoC ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿರಲಿದೆ. ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್‌ IP64 ರೇಟಿಂಗ್ ಸೌಲಭ್ಯ ಸಹ ಪಡೆದುಕೊಂಡಿರಲಿದೆ. ಅಲ್ಲದೇ ಇದು ಆಂಡ್ರಾಯ್ಡ್ 16 ಅನ್ನು ಆಧರಿಸಿದ ColorOS 16 ಸ್ಕಿನ್‌ ಓಎಸ್ ಸಪೋರ್ಟ್ ಪಡೆದಿರಲಿದೆ.

ಹಾಗೆಯೇ ಒಪ್ಪೋ K14 ಲೈಟ್ ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿರಲಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 13MP ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇರಲಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 5MP ಕ್ಯಾಮೆರಾ ಪಡೆದುಕೊಂಡಿರಲಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 7,000mAh ಬ್ಯಾಟರಿ ಸಪೋರ್ಟ್‌ ಹೊಂದಿರುವ ಜೊತೆಗೆ 15W ಫಾಸ್ಟ್ ಚಾರ್ಜಿಂಗ್‌ ಬೆಂಬಲವನ್ನು ಹೊಂದಿರುವ ನಿರೀಕ್ಷೆಗಳು ಇವೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile