ಇತ್ತೀಚಿನ Oppo K14 Lite ಮೊಬೈಲ್‌ ಬೆಲೆಯಲ್ಲಿ ಈಗ ಸಖತ್ ಡಿಸ್ಕೌಂಟ್‌; ಆಫರ್‌ ಬೆಲೆ ನೋಡಿ

HIGHLIGHTS

ಫ್ಲಿಪ್‌ಕಾರ್ಟ್‌ನಲ್ಲಿ ಒಪ್ಪೋ K14 ಲೈಟ್ ಫೋನಿಗೆ ಭಾರೀ ಡಿಸ್ಕೌಂಟ್‌

ಒಪ್ಪೋ K14 ಲೈಟ್ ಮೊಬೈಲ್‌ 7,000mAh ಬ್ಯಾಟರಿ ಸಪೋರ್ಟ್‌ ಪಡೆದಿದೆ

ಒಪ್ಪೋ K14 ಲೈಟ್ ಫೋನ್‌ Unisoc T7250 ಆಕ್ಟಾ ಕೋರ್ ಪ್ರೊಸೆಸರ್‌ ಹೊಂದಿದೆ

ಇತ್ತೀಚಿನ Oppo K14 Lite ಮೊಬೈಲ್‌ ಬೆಲೆಯಲ್ಲಿ ಈಗ ಸಖತ್ ಡಿಸ್ಕೌಂಟ್‌; ಆಫರ್‌ ಬೆಲೆ ನೋಡಿ

ಒಪ್ಪೋ ಕಂಪನಿಯ Oppo K14 Lite ಮೊಬೈಲ್‌ ಆಕರ್ಷಕ ಫಿಚರ್ಸ್‌ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಈ ಮೊಬೈಲ್‌ ಫ್ಲಿಪ್‌ಕಾರ್ಟ್ ಇ ಕಾಮರ್ಸ್‌ ತಾಣದಲ್ಲಿ ಭಾರೀ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್‌ Unisoc T7250 ಆಕ್ಟಾ ಕೋರ್ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ 7,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್‌ ‘Feather Purple’ ಮತ್ತು ‘Stone Brown’ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಒಪ್ಪೋ K14 ಲೈಟ್ ಮೊಬೈಲ್‌ಗೆ ಲಭ್ಯವಿರುವ ಆಫರ್‌ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Vi ಟೆಲಿಕಾಂನ ಈ ಅಗ್ಗದ ಪ್ಲಾನ್‌ನಲ್ಲಿ ಅನಿಯಮಿತ ಡೇಟಾ ಜೊತೆಗೆ ಆಕರ್ಷಿಕ ವ್ಯಾಲಿಡಿಟಿ

Oppo K14 Lite ಬೆಲೆಯಲ್ಲಿ ಬಿಗ್ ಆಫರ್

ಸ್ಟೈಲಿಶ್‌ ಲುಕ್ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಮೊಬೈಲ್‌ ಪ್ರಿಯರ ಗಮನ ಸೆಳೆದಿರುವ ಒಪ್ಪೋ K14 ಲೈಟ್ ಫೋನ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 4GB RAM + 64GB ಸ್ಟೋರೇಜ್ ವೇರಿಯಂಟ್‌ ಬೆಲೆ 37,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 16,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಮೊಬೈಲ್‌ ‘Feather Purple’ ಮತ್ತು ‘Stone Brown’ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Oppo K14 Lite launched in India with 7000mAh battery Price features and other key details to know
Oppo K14 Lite

ಒಪ್ಪೋ K14 ಲೈಟ್ ಮೊಬೈಲ್‌ ಫೀಚರ್ಸ್‌

ಒಪ್ಪೋ K14 ಲೈಟ್ ಸ್ಮಾರ್ಟ್‌ಫೋನ್‌ 6.75 ಇಂಚಿನ HD+ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 120Hz ರಿಫ್ರೆಶ್ ರೇಟ್‌ ಜೊತೆಗೆ 900 nits ಬ್ರೈಟ್ನೆಸ್‌ ಸೌಲಭ್ಯ ಅನ್ನು ಪಡೆದಿದೆ. ಹಾಗೆಯೇ ಈ ಸ್ಕ್ರೀನ್ 720 x 1,570 ಪಿಕ್ಸೆಲ್‌ ರೆಸಲ್ಯೂಶನ್ ಪಡೆದಿದೆ. ಹಾಗೆಯೇ ಈ ಫೋನ್‌ Unisoc T7250 ಆಕ್ಟಾ ಕೋರ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದು ಧೂಳು ಮತ್ತು ನೀರಿನ ಸಿಂಪಡಣೆಯಿಂದ ರಕ್ಷಣೆಗಾಗಿ IP64 ರೇಟಿಂಗ್ ಅನ್ನು ಹೊಂದಿದೆ. ಅಲ್ಲದೇ ಇದು ಆಂಡ್ರಾಯ್ಡ್‌ 16 ಆಧಾರಿತ ColorOS 16 ಓಎಸ್ ಸಪೋರ್ಟ್ ಪಡೆದಿದೆ.

ಹಾಗೆಯೇ ಒಪ್ಪೋ K14 ಲೈಟ್ ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 13MP ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 5MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 7,000mAh ಬ್ಯಾಟರಿ ಸಪೋರ್ಟ್‌ ಹೊಂದಿರುವ ಜೊತೆಗೆ 15W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile