7,000mAh ಬ್ಯಾಟರಿ ಒಳಗೊಂಡ Oppo K14 Lite ಮೊಬೈಲ್ ಈಗ ಸಸ್ತಾ ಬೆಲೆಗೆ ಲಭ್ಯ!
ಫ್ಲಿಪ್‌ಕಾರ್ಟ್‌ನಲ್ಲಿ ಒಪ್ಪೋ K14 ಲೈಟ್ ಫೋನಿಗೆ ಆಕರ್ಷಕ ಆಫರ್
ಒಪ್ಪೋ K14 ಲೈಟ್ ಮೊಬೈಲ್ 7,000mAh ಬ್ಯಾಟರಿ ಸೌಲಭ್ಯ ಹೊಂದಿದೆ
ಒಪ್ಪೋ K14 ಲೈಟ್ ಸ್ಮಾರ್ಟ್‌ಫೋನ್ ಎರಡು ಆಕರ್ಷಕ ಕಲರ್‌ನಲ್ಲಿ ಲಭ್ಯ
Flipkart ಆಯೋಜಿಸಿರುವ ವಿಶೇಷ ಸೇಲ್‌ನಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಸಖತ್ ರಿಯಾಯಿತಿ ಲಭ್ಯವಿದೆ. ಆ ಪೈಕಿ Oppo ಕಂಪನಿಯ Oppo K14 Lite ಮೊಬೈಲ್ ಸ್ಪೆಷಲ್ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಆಕ್ಟಾ ಕೋರ್ Unisoc T7250 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ 7,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಒಪ್ಪೋ K14 ಲೈಟ್ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಇಂದಿನಿಂದ iPhone Duo ಫೋಲ್ಡೆಬಲ್ ಫೋನ್ ಸೇಲ್ ಪ್ರಾರಂಭ; ಬೆಲೆ ಹಾಗೂ ಲಭ್ಯತೆ ನೋಡಿ
Oppo K14 Lite ಈಗ ಡಿಸ್ಕೌಂಟ್‌ನಲ್ಲಿ ಲಭ್ಯ
ಕಡಿಮೆ ಬೆಲೆ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ಒಪ್ಪೋ K14 ಲೈಟ್ ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಅತ್ಯುತ್ತಮ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 4GB + 64GB ಸ್ಟೋರೇಜ್ ವೇರಿಯಂಟ್ ಬೆಲೆ 37,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್ ಬ್ಯಾಂಕ್ ಆಫರ್‌ಗಳ ಮೂಲಕ 15,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು Feather Purple ಮತ್ತು Stone Brown ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದು.

ಒಪ್ಪೋ K14 ಲೈಟ್ ಮೊಬೈಲ್ ಫೀಚರ್ಸ್
ಒಪ್ಪೋ K14 ಲೈಟ್ ಸ್ಮಾರ್ಟ್‌ಫೋನ್ 6.75 ಇಂಚಿನ HD+ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ 900 nits ಬ್ರೈಟ್ನೆಸ್ ಸೌಲಭ್ಯ ಅನ್ನು ಪಡೆದಿದೆ. ಹಾಗೆಯೇ ಈ ಸ್ಕ್ರೀನ್ 720 x 1,570 ಪಿಕ್ಸೆಲ್ ರೆಸಲ್ಯೂಶನ್ ಪಡೆದಿದೆ. ಹಾಗೆಯೇ ಈ ಫೋನ್ Unisoc T7250 ಆಕ್ಟಾ-ಕೋರ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದು ಧೂಳು ಮತ್ತು ನೀರಿನ ಸಿಂಪಡಣೆಯಿಂದ ರಕ್ಷಣೆಗಾಗಿ IP64 ರೇಟಿಂಗ್ ಅನ್ನು ಹೊಂದಿದೆ. ಅಲ್ಲದೇ ಇದು ಆಂಡ್ರಾಯ್ಡ್ 16 ಆಧಾರಿತ ColorOS 16 ಓಎಸ್ ಸಪೋರ್ಟ್ ಪಡೆದಿದೆ.
ಹಾಗೆಯೇ ಒಪ್ಪೋ K14 ಲೈಟ್ ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 13MP ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 5MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 7,000mAh ಬ್ಯಾಟರಿ ಸಪೋರ್ಟ್ ಹೊಂದಿರುವ ಜೊತೆಗೆ 15W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
