ಲೀಡಿಂಗ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಎನಿಸಿರುವ ಫ್ಲಿಪ್‌ಕಾರ್ಟ್ ತಾಣದಲ್ಲಿ ಒಪ್ಪೋ ಕಂಪನಿಯ Oppo K14x 5G ಸ್ಮಾರ್ಟ್‌ಫೋನ್ ಗಮನಾರ್ಹ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಮೊಬೈಲ್ 6,500mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್ ಪ್ರಿಸ್ಮ್ ವೈಲೆಟ್ ಗ್ರೀನ್ ಹಾಗೂ ಐಸ್ ಬ್ಲೂ ಕಲರ್ ಆಯ್ಕೆಯಲ್ಲಿ ಸಿಗಲಿದೆ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಒಪ್ಪೋ K14x 5G ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : iPhone 18 Pro ಬಿಡುಗಡೆಗೂ ಮುನ್ನವೇ ಭರ್ಜರಿ ಅಪ್‌ಡೇಟ್: ಈ ದಿನದಂದು ಪ್ರೀ-ಆರ್ಡರ್ ಸಾಧ್ಯತೆ!
ಬಜೆಟ್ ಬೆಲೆಯಲ್ಲಿ ಆಕರ್ಷಕ ಫೀಚರ್ಸ್ ಮೂಲಕ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿರುವ ಒಪ್ಪೋ K14x 5G ಮೊಬೈಲ್ ಸದ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 6GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 23,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 22,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಈ ಫೋನ್ ಪ್ರಿಸ್ಮ್ ವೈಲೆಟ್ ಗ್ರೀನ್ ಹಾಗೂ ಐಸ್ ಬ್ಲೂ ಕಲರ್ ಆಯ್ಕೆ ಹೊಂದಿದೆ.
ಒಪ್ಪೋ K14x 5G ಸ್ಮಾರ್ಟ್‌ಫೋನ್ 6.7 ಇಂಚಿನ HD+ LCD ಡಿಸ್‌ಪ್ಲೇ ಪಡೆದಿದೆ. ಹಾಗೆಯೇ 120Hz ರಿಫ್ರೆಶ್ ರೇಟ್ ಜೊತೆಗೆ 1125 nits ಬ್ರೈಟ್ನೆಸ್ ಸಪೋರ್ಟ್ ಒಳಗೊಂಡಿದೆ. ಇದರೊಂದಿಗೆ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ Android 15 ಓಎಸ್ ಸಪೋರ್ಟ್ ಕೂಡಾ ಹೊಂದಿದೆ. ಅಲ್ಲದೇ ಇದು 4GB + 128GB ಹಾಗೂ 6GB + 128GB ಆನ್‌ಬೋರ್ಡ್ ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ. ಇದರೊಂದಿಗೆ 6,500mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 45W ಫಾಸ್ಟ್ ಸಪೋರ್ಟ್ ಸಹ ಪಡೆದಿದೆ.
ಹಾಗೆಯೇ ಒಪ್ಪೋ K14x 5G ಫೋನ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾ 50MP ಸೆನ್ಸಾರ್ ಸೌಲಭ್ಯ ಪಡೆದಿದ್ದು, ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್ ಸೌಲಭ್ಯ ಪಡೆದಿದೆ. ಅದೇ ರೀತಿ ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ 5MP ಕ್ಯಾಮೆರಾ ರಚನೆಯನ್ನು ಒದಗಿಸಲಾಗಿದೆ. ಇದು Dual-View, AI ಪೋರ್ಟ್ರೇಟ್ ಮೋಡ್, AI ರೀಕಂಪೋಸ್ ಮತ್ತು AI ಎರೇಸರ್ 2.0 ಸೇರಿದಂತೆ ಕೆಲವು ಆಯ್ಕೆಗಳನ್ನು ಒಳಗೊಂಡಿದೆ.