ಇಂದಿನಿಂದ Oppo K14x 5G ಮೊಬೈಲ್ ಸೇಲ್ ಪ್ರಾರಂಭ! ಬಜೆಟ್ ಬೆಲೆಯಲ್ಲಿ 50MP ಕ್ಯಾಮೆರಾ ಸ್ಮಾರ್ಟ್‌ಫೋನ್
ಒಪ್ಪೋ ಸಂಸ್ಥೆಯ ಈ ಹೊಸ ಫೋನ್ ಇಂದಿನಿಂದ ಖರೀದಿಗೆ ಲಭ್ಯ
ಒಪ್ಪೋ ಕಂಪನಿಯ ಈ ನೂತನ ಮೊಬೈಲ್ ಆರಂಭಿಕ ಬೆಲೆ 14,999 ರೂಗಳು ಆಗಿದೆ
ಈ ನೂತನ ಮೊಬೈಲ್‌ಎರಡು ಕಲರ್ ಮೋಡ್ ಆಯ್ಕೆಗಳನ್ನು ಒಳಗೊಂಡಿವೆ
OPPO K14x 5G Sale Today: ಭಾರತದಲ್ಲಿ OPPO ಕಂಪನಿಯು ಇತ್ತೀಚಿಗೆ ಬಿಡುಗಡೆ ಮಾಡಿರುವ ಹೊಸ Oppo K14x 5G ಮೊಬೈಲ್ ಇಂದು (ಫೆಬ್ರವರಿ 16 ರಂದು) ಮಾರಾಟ ಪ್ರಾರಂಭಿಸಲಿದೆ. ಕಡಿಮೆ ಪ್ರೈಸ್‌ಟ್ಯಾಗ್ ಅನ್ನು ಒಳಗೊಂಡಿರುವ Oppo K14x 5G ಮೊಬೈಲ್ ಈಗಾಗಲೆ ಪ್ರಿ-ಬುಕಿಂಗ್‌ಗೆ ತೆರೆದುಕೊಂಡಿತ್ತು. ಈ ನೂತನ ಮೊಬೈಲ್ Mediatek Dimensity 6300 ಪ್ರೊಸೆಸರ್ ಪವರ್ ಜೊತೆಗೆ 50MP ಮುಖ್ಯ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಅಂದಹಾಗೆ ಈ ಮೊಬೈಲ್ ಪ್ರಿಸ್ಮ್ ವೈಲೆಟ್ ಗ್ರೀನ್ ಹಾಗೂ ಐಸ್ ಬ್ಲೂ ಕಲರ್ ಆಯ್ಕೆಗಳನ್ನು ಗ್ರಾಹಕರಿಗೆ ನೀಡಿದೆ. ಹಾಗಾದರೆ Oppo K14x 5G ಮೊಬೈಲ್ ಸೇಲ್, ಆಫರ್ ಬೆಲೆ, ಫೀಚರ್ಸ್ ಹಾಗೂ ಲಭ್ಯತೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Motorola Edge 60 Stylus ಬೆಲೆಯಲ್ಲಿ ದಿಢೀರ್ ಕುಸಿತ! ಬಜೆಟ್ ಬೆಲೆಯಲ್ಲಿ ಖರೀದಿಸಲು ಒಳ್ಳೆಯ ಚಾನ್ಸ್
Oppo K14x 5G ಇಂದಿನಿಂದ ಖರೀದಿಗೆ ಲಭ್ಯ
Oppo ಕಂಪನಿಯ ಹೊಸ Oppo K14x 5G ಮೊಬೈಲ್ ಇಂದು (ಫೆಬ್ರವರಿ 16 ರಂದು) ಮಧ್ಯಾಹ್ನ 12 ಗಂಟೆಯಿಂದ ಫ್ಲಿಪ್‌ಕಾರ್ಟ್ ಮತ್ತು ಒಪ್ಪೋ ಆನ್‌ಲೈನ್ ಸ್ಟೋರ್ ಮೂಲಕ ಭಾರತದಲ್ಲಿ ಮಾರಾಟ ಪ್ರಾರಂಭ ಮಾಡಲಿದೆ. ಈ ಮೊಬೈಲ್ 4GB + 128GB ಸ್ಟೋರೇಜ್ ಆವೃತ್ತಿಯ ಬೆಲೆ ರೂ. 14,999 ಆಗಿದೆ. ಅಲ್ಲದೇ ಇದರ 6GB + 128GB ಸ್ಟೋರೇಜ್ ಹೊಂದಿರುವ ವೇರಿಯಂಟ್ ಬೆಲೆ ರೂ. 16,999 ಆಗಿದೆ. ಅಂದಹಾಗೆ Oppo K14x 5G ಮೊಬೈಲ್ ಇನ್ನು ಈOppo K14x 5G ಸ್ಮಾರ್ಟ್‌ಫೋನ್ ಪ್ರಿಸ್ಮ್ ವೈಲೆಟ್ ಗ್ರೀನ್ ಹಾಗೂ ಐಸ್ ಬ್ಲೂ ಕಲರ್ ಆಯ್ಕೆ ಪಡೆದುಕೊಂಡಿದೆ. ಗ್ರಾಹಕರು SBI, HDFC ಬ್ಯಾಂಕ್ ಮತ್ತು ICICI ಬ್ಯಾಂಕ್ ಕಾರ್ಡ್‌ಗಳ ಮೇಲೆ ರೂ. 1,500 ವರೆಗೆ ಇನ್‌ಸ್ಟಂಟ್ ರಿಯಾಯಿತಿ ಸಹ ಪಡೆಯಬಹುದು.

Oppo K14x 5G ಮೊಬೈಲ್‌ನ ಫೀಚರ್ಸ್
Oppo K14x 5G ಮೊಬೈಲ್ 6.7 ಇಂಚಿನ HD+ LCD ಡಿಸ್‌ಪ್ಲೇ ಪಡೆದಿದೆ. ಹಾಗೆಯೇ 120Hz ರಿಫ್ರೆಶ್ ರೇಟ್ ಜೊತೆಗೆ 1125 nits ಬ್ರೈಟ್ನೆಸ್ ಸಪೋರ್ಟ್ ಒಳಗೊಂಡಿದೆ. ಇದರೊಂದಿಗೆ ಈ ಮೊಬೈಲ್ MediaTek Dimensity 6300 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ Android 15 ಓಎಸ್ ಸಪೋರ್ಟ್ ಕೂಡಾ ಹೊಂದಿದೆ. ಅಲ್ಲದೇ ಇದು 4GB + 128GB ಹಾಗೂ 6GB + 128GB ಆನ್‌ಬೋರ್ಡ್ ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ. ಇದರೊಂದಿಗೆ 6,500mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 45W ಫಾಸ್ಟ್ ಸಪೋರ್ಟ್ ಸಹ ಪಡೆದಿದೆ.
ಇನ್ನು Oppo K14x 5G ಫೋನ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾ 50MP ಸೆನ್ಸಾರ್ ಸೌಲಭ್ಯ ಪಡೆದಿದ್ದು, ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್ ಸೌಲಭ್ಯ ಪಡೆದಿದೆ. ಅದೇ ರೀತಿ ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ 5MP ಕ್ಯಾಮೆರಾ ರಚನೆಯನ್ನು ಒದಗಿಸಲಾಗಿದೆ. ಇದು Dual-View, AI ಪೋರ್ಟ್ರೇಟ್ ಮೋಡ್, AI ರೀಕಂಪೋಸ್ ಮತ್ತು AI ಎರೇಸರ್ 2.0 ಸೇರಿದಂತೆ ಕೆಲವು ಆಯ್ಕೆಗಳನ್ನು ಒಳಗೊಂಡಿದೆ.
Manthesh B
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile