Oppo K14x 5G ಮೊಬೈಲ್‌ ಖರೀದಿಗೆ ಇದುವೇ ಅತ್ಯುತ್ತಮ ಸಮಯ! ಭಾರೀ ಡಿಸ್ಕೌಂಟ್‌

HIGHLIGHTS

ಒಪ್ಪೋ K14x ಮೊಬೈಲ್‌ ಈಗ ಭಾರೀ ಡಿಸ್ಕೌಂಟ್‌ನಲ್ಲಿ ಲಭ್ಯ

ಒಪ್ಪೋ K14x ಫೋನ್‌ ಪ್ರಾಥಮಿಕ ಕ್ಯಾಮೆರಾ 50MP ಸೆನ್ಸಾರ್‌ ಆಗಿದೆ

ಒಪ್ಪೋ K14x ಮೊಬೈಲ್‌ 6,500mAh ಬ್ಯಾಟರಿ ಸೌಲಭ್ಯ ಪಡೆದಿದೆ

ಒಪ್ಪೋ ಸಂಸ್ಥೆಯ ಮೊಬೈಲ್‌ಗಳು ದೇಶೀಯ ಮಾರುಕಟ್ಟೆಯಲ್ಲಿ ಗಮನ ಸೆಳೆದಿದ್ದು, ಆ ಪೈಕಿ ಬಜೆಟ್‌ ಬೆಲೆ ಮೊಬೈಲ್‌ ಬೇಡಿಕೆ ಹೊಂದಿವೆ. ಕಂಪನಿಯ Oppo K14x 5G ಸ್ಮಾರ್ಟ್‌ಫೋನ್‌ ಬಜೆಟ್‌ ದರದಲ್ಲಿ ಸದ್ದು ಮಾಡಿದೆ. ಪ್ರಸ್ತುತ ಈ ಮೊಬೈಲ್‌ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಸಖತ್ ಬೆಲೆ ಇಳಿಕೆ ದರದಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ ಆಯ್ದ ಬ್ಯಾಂಕ್‌ ಕೊಡುಗೆಗಳ ಮೂಲಕ ಗ್ರಾಹಕರು ಹೆಚ್ಚುವರಿ ಡಿಸ್ಕೌಂಟ್‌ ಸಹ ಪಡೆಯಬಹುದಾಗಿದೆ. ಅಂದಹಾಗೆ ಒಪ್ಪೋ ಸಂಸ್ಥೆಯ ಈ ಮೊಬೈಲ್‌ MediaTek Dimensity 6300 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಅಲ್ಲದೇ 6,500mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಅನ್ನು ಒಳಗೊಂಡಿದೆ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಒಪ್ಪೋ K14x 5G ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Jio ಸಂಸ್ಥೆಯ ಈ ಪ್ಲಾನಿನಲ್ಲಿ 168GB ಡೇಟಾ ಜೊತೆಗೆ ಜನಪ್ರಿಯ OTT ಚಂದಾದಾರಿಕೆ ಲಭ್ಯ!

Oppo K14x 5G ಮೊಬೈಲ್‌ ದರದಲ್ಲಿ ಕಡಿತ

ಒಪ್ಪೋ K14x 5G ಮೊಬೈಲ್ ಪ್ರಸ್ತುತ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಬೊಂಬಾಟ್‌ ರಿಯಾಯಿತಿ ಪಡೆದಿದೆ. ಈ ಮೊಬೈಲ್‌ 4GB + 128GB ವೇರಿಯಂಟ್‌ ಬೆಲೆ 21,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಫೋನ್‌ 15,799 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್‌ಗಳ ಕ್ರೆಡಿಟ್‌ ಕಾರ್ಡ್‌ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಪಡೆಯಬಹುದಾಗಿದೆ. ಅಂದಹಾಗೆ ಇನ್ನು ಈ ಸ್ಮಾರ್ಟ್‌ಫೋನ್‌ ಪ್ರಿಸ್ಮ್ ವೈಲೆಟ್‌ ಗ್ರೀನ್‌ ಹಾಗೂ ಐಸ್‌ ಬ್ಲೂ ಕಲರ್‌ ಆಯ್ಕೆ ಪಡೆದುಕೊಂಡಿದೆ.

ಒಪ್ಪೋ K14x 5G ಮೊಬೈಲ್‌ನ ಫೀಚರ್ಸ್‌

ಒಪ್ಪೋ K14x 5G ಸ್ಮಾರ್ಟ್‌ಫೋನ್‌ 6.7 ಇಂಚಿನ HD+ LCD ಡಿಸ್‌ಪ್ಲೇ ಪಡೆದಿದೆ. ಹಾಗೆಯೇ 120Hz ರಿಫ್ರೆಶ್ ರೇಟ್‌ ಜೊತೆಗೆ 1125 nits ಬ್ರೈಟ್ನೆಸ್‌ ಸಪೋರ್ಟ್‌ ಒಳಗೊಂಡಿದೆ. ಇದರೊಂದಿಗೆ ಈ ಮೊಬೈಲ್ MediaTek Dimensity 6300 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ Android 15 ಓಎಸ್‌ ಸಪೋರ್ಟ್‌ ಕೂಡಾ ಹೊಂದಿದೆ. ಅಲ್ಲದೇ ಇದು 4GB + 128GB ಹಾಗೂ 6GB + 128GB ಆನ್‌ಬೋರ್ಡ್ ಸ್ಟೋರೇಜ್‌ ಆಯ್ಕೆಗಳನ್ನು ಪಡೆದಿದೆ. ಇದರೊಂದಿಗೆ 6,500mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 45W ಫಾಸ್ಟ್‌ ಸಪೋರ್ಟ್‌ ಸಹ ಪಡೆದಿದೆ.

ಹಾಗೆಯೇ ಒಪ್ಪೋ K14x 5G ಫೋನ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ರಚನೆ ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾ 50MP ಸೆನ್ಸಾರ್‌ ಸೌಲಭ್ಯ ಪಡೆದಿದ್ದು, ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್‌ ಸೌಲಭ್ಯ ಪಡೆದಿದೆ. ಅದೇ ರೀತಿ ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ 5MP ಕ್ಯಾಮೆರಾ ರಚನೆಯನ್ನು ಒದಗಿಸಲಾಗಿದೆ. ಇದು Dual-View, AI ಪೋರ್ಟ್ರೇಟ್ ಮೋಡ್, AI ರೀಕಂಪೋಸ್ ಮತ್ತು AI ಎರೇಸರ್ 2.0 ಸೇರಿದಂತೆ ಕೆಲವು ಆಯ್ಕೆಗಳನ್ನು ಒಳಗೊಂಡಿದೆ.

Disclosure: This Article Contains Affiliate Links

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :