ಇಂದು ಗ್ರ್ಯಾಂಡ್‌ ಎಂಟ್ರಿ ಕೊಡಲಿದೆ OPPO K14x 5G ಫೋನ್‌! ಗ್ರಾಹಕರ ಕುತೂಹಲ ಹೆಚ್ಚಿಸಿದ ಫೀಚರ್ಸ್‌

Updated on 10-Feb-2026
HIGHLIGHTS

OPPO K14x ಮೊಬೈಲ್‌ ಇಂದು ಅಧಿಕೃತವಾಗಿ ಬಿಡುಗಡೆ ಆಗಲಿದೆ

OPPO K14x ಫೋನ್‌ 6,500mAh ಬ್ಯಾಟರಿ ಸೌಲಭ್ಯ ಒಳಗೊಂಡಿರಲಿದೆ

OPPO K14x ಮೊಬೈಲ್‌ 120Hz ರಿಫ್ರೆಶ್ ರೇಟ್‌ ಪಡೆದಿರುವುದು ಬಹುತೇಕ ಪಕ್ಕಾ ಎನ್ನಲಾಗಿದೆ

OPPO ಮೊಬೈಲ್‌ ಸಂಸ್ಥೆಯ ಬಹುನಿರೀಕ್ಷಿತ Oppo K14x 5G ಮೊಬೈಲ್‌ ದೇಶಿಯ ಮಾರುಕಟ್ಟೆಯಲ್ಲಿ ಇಂದು (ಫೆಬ್ರವರಿ 10 ರಂದು) ಅಧಿಕೃತವಾಗಿ ಬಿಡುಗಡೆ ಆಗಲಿದೆ. ಈಗಾಗಲೇ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ ಒಪ್ಪೋ K14x ಮೊಬೈಲ್‌ 6500mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿರುವುದು ಪಕ್ಕಾ ಎನ್ನಲಾಗಿದೆ. ಹಾಗೆಯೇ ಇದು MediaTek Dimensity 6300 ಚಿಪ್‌ಸೆಟ್‌ ಪ್ರೊಸೆಸರ್‌ ಸೌಲಭ್ಯ ಸಹ ಪಡೆದಿರಲಿದೆ. ಅಲ್ಲದೇ ಈ ಮೊಬೈಲ್‌ ಎರಡು ಕಲರ್‌ ಆಯ್ಕೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆಗಳು ಇವೆ. ಹಾಗಾದರೆ ಲಾಂಚ್‌ಗೆ ಸಜ್ಜಾಗಿರುವ OPPO K14x ಮೊಬೈಲ್‌ನ ನಿರೀಕ್ಷಿತ ಬೆಲೆ ಹಾಗೂ ಫೀಚರ್ಸ್‌ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : OnePlus 15R ಬೆಲೆಯಲ್ಲಿ ಭಾರೀ ಇಳಿಕೆ! 7400mAh ಬ್ಯಾಟರಿ, ಸ್ನ್ಯಾಪ್‌ಡ್ರಾಗನ್‌ ಪ್ರೊಸೆಸರ್‌ ಇದೆ

OPPO K14x 5G ಫೋನ್‌ ಲಾಂಚ್‌ ದಿನಾಂಕ ಮತ್ತು ನಿರೀಕ್ಷಿತ ಬೆಲೆ

OPPO ಕಂಫನಿಯ ನೂತನ Oppo K14x 5G ಮೊಬೈಲ್‌ ಮಾರುಕಟ್ಟೆಗೆ ಬರಲು ಸಂಪೂರ್ಣ ತಯಾರಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಈ ಮೊಬೈಲ್‌ ಇಂದು (ಫೆಬ್ರವರಿ 10 ರಂದು) ಅಧಿಕೃತವಾಗಿ ಲಾಂಚ್ ಆಗಲಿದೆ. ಈ ಕುರಿತು Flipkart ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಮೈಕ್ರೋ ಪೇಜ್‌ ತೆರೆಯಲಾಗಿದೆ. ಇನ್ನು ಈ ಫೋನ್‌ ಬಜೆಟ್‌ ರೇಂಜ್‌ನಲ್ಲಿ ಲಗ್ಗೆ ಇಡುವ ನಿರೀಕ್ಷೆಗಳು ಇವೆ. ಆದರೆ ಕಂಪನಿಯು ಮೊಬೈಲ್‌ನ ಬೆಲೆಯ ಈ ಕುರಿತು ಇನ್ನು ಯಾವುದೇ ಅಧಿಕೃತ ಮಾಹಿತಿ ಹೊರಹಾಕಿಲ್ಲ. ಇನ್ನು ಈ ಮೊಬೈಲ್‌ ಪ್ರಿಸ್ಮ್ ವೈಲೆಟ್‌ ಗ್ರೀನ್‌ ಹಾಗೂ ಐಸ್‌ ಬ್ಲೂ ಕಲರ್‌ ಆಯ್ಕೆ ಪಡೆದಿರಲಿದೆ.

OPPO K14x 5G ಮೊಬೈಲ್‌ನ ನಿರೀಕ್ಷಿತ ಫೀಚರ್ಸ್‌

ಒಪ್ಪೋ K14x 5G ಸ್ಮಾರ್ಟ್‌ಫೋನ್‌ 6.7 ಇಂಚಿನ HD+ ಡಿಸ್‌ಪ್ಲೇ ಪಡೆದಿರಲಿದೆ ಎನ್ನಲಾಗಿದೆ. ಹಾಗೆಯೇ 120Hz ರಿಫ್ರೆಶ್ ರೇಟ್‌ ಜೊತೆಗೆ 1125 nits ಬ್ರೈಟ್ನೆಸ್‌ ಸಪೋರ್ಟ್‌ ಪಡೆದಿರಲಿದೆ. ಇದರೊಂದಿಗೆ ಈ ಫೋನ್‌ MediaTek Dimensity 6300 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ Android 16 ಓಎಸ್‌ ಸಪೋರ್ಟ್‌ ಕೂಡಾ ಒಳಗೊಂಡಿರಬಹುದು. ಅಲ್ಲದೇ ಇದು 6GB RAM ಮತ್ತು 128GB ಆನ್‌ಬೋರ್ಡ್ ಸ್ಟೋರೇಜ್‌ ಆಯ್ಕೆ ಪಡೆದಿರುವುದು ಬಹುತೇಕ ಖಚಿತ ಎನ್ನಲಾಗಿದೆ. ಇದರೊಂದಿಗೆ 6,500mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 45W ಫಾಸ್ಟ್‌ ಸಪೋರ್ಟ್‌ ಸಹ ಪಡೆದಿರುವುದು ಬಹುತೇಕ ನಿಕ್ಕಿ ಎನ್ನಲಾಗಿದೆ.

ಇನ್ನು ಒಪ್ಪೋ K14x 5G ಫೋನ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ರಚನೆ ಒಳಗೊಂಡಿರಲಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50MP AI ಸೆನ್ಸಾರ್‌ ಪಡೆದಿರಲಿದೆ ಎಂದು ತಿಳಿದುಬಂದಿದೆ. ಅದೇ ರೀತಿ ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ 5MP ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿರುವುದು ಬಹುತೇಕ ಪಕ್ಕಾ ಎಂದು ಹೇಳಲಾಗುತ್ತಿದೆ. ಅಲ್ಲದೇ ಈ ಫೋನಿನಲ್ಲಿ ರಿವರ್ಸ್‌ ಚಾರ್ಜಿಂಗ್ ಆಯ್ಕೆ ಸಹ ಒದಗಿಸಬಹುದು ಜೊತೆಗೆ IP64 ರೇಟಿಂಗ್ ಸೌಲಭ್ಯ ಸಹ ಪಡೆದಿರಲಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :