ಜನಪ್ರಿಯ ಮೊಬೈಲ್ ಸಂಸ್ಥೆಗಳಲ್ಲಿ ಒಂದಾದ Oppo ಕಂಪನಿಯು ಭಾರತದಲ್ಲಿ ಹೊಸದಾಗಿ Oppo K14x 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ Oppo K14x 5G ಮೊಬೈಲ್ ಬಜೆಟ್ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್ 6,500mAh ಬ್ಯಾಟರಿ ಸಪೋರ್ಟ್ ಪಡೆದಿರುವುದು ಹೈಲೈಟ್ ಅಂಶಗಳಲ್ಲಿ ಒಂದಾಗಿದೆ. ಅಲ್ಲದೇ ಈ ಮೊಬೈಲ್ Mediatek Dimensity 6300 ಪ್ರೊಸೆಸರ್ ಪವರ್ ಜೊತೆಗೆ 50MP ಪ್ರಾಥಮಿಕ ಕ್ಯಾಮೆರಾ ಸೆನ್ಸಾರ್ ಅನ್ನು ಒಳಗೊಂಡಿದೆ. ಅಂದಹಾಗೆ ಸ್ಮಾರ್ಟ್‌ಫೋನ್ ಪ್ರಿಸ್ಮ್ ವೈಲೆಟ್ ಗ್ರೀನ್ ಹಾಗೂ ಐಸ್ ಬ್ಲೂ ಕಲರ್ ಆಯ್ಕೆಗಳನ್ನು ಗ್ರಾಹಕರಿಗೆ ನೀಡಿದೆ. ಇನ್ನು Oppo K14x 5G ಮೊಬೈಲ್ ಸೇಲ್ ಡೇಟ್, ಆಫರ್ ಬೆಲೆ, ಫೀಚರ್ಸ್ ಹಾಗೂ ಲಭ್ಯತೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Motorola Edge 60 Fusion 5G ಬೆಲೆಯಲ್ಲಿ ಭರ್ಜರಿ ಕುಸಿತ! ಈ ಆಫರ್ ಮಿಸ್ ಮಾಡ್ಕೋಬೇಡಿ
Oppo ಸಂಸ್ಥೆಯ ನೂತನ Oppo K14x 5G ಸ್ಮಾರ್ಟ್‌ಫೋನ್ ದೇಶಿಯ ಮಾರುಕಟ್ಟೆಗೆ ಎರಡು ವೇರಿಯಂಟ್‌ಗಳಲ್ಲಿ ಲಾಂಚ್ ಆಗಿದೆ. ಈ ಮೊಬೈಲ್ 4GB + 128GB ಸ್ಟೋರೇಜ್ ಆವೃತ್ತಿಯ ಬೆಲೆ ರೂ. 14,999 ಆಗಿದೆ. ಹಾಗೆಯೇ ಇದರ 6GB + 128GB ಸ್ಟೋರೇಜ್ ಹೊಂದಿರುವ ವೇರಿಯಂಟ್ ಬೆಲೆ ರೂ. 16,999 ಆಗಿದೆ. ಅಂದಹಾಗೆ Oppo K14x 5G ಸ್ಮಾರ್ಟ್‌ಫೋನ್ ಫೆಬ್ರವರಿ 16 ರಂದು ಫ್ಲಿಪ್‌ಕಾರ್ಟ್ ಮತ್ತು ಒಪ್ಪೋ ಆನ್‌ಲೈನ್ ಸ್ಟೋರ್ ಮೂಲಕ ಭಾರತದಲ್ಲಿ ಮಾರಾಟ ಪ್ರಾರಂಭ ಮಾಡಲಿದೆ. ಇನ್ನು ಈ ನೂತನ Oppo K14x 5G ಸ್ಮಾರ್ಟ್‌ಫೋನ್ ಪ್ರಿಸ್ಮ್ ವೈಲೆಟ್ ಗ್ರೀನ್ ಹಾಗೂ ಐಸ್ ಬ್ಲೂ ಕಲರ್ ಆಯ್ಕೆ ಪಡೆದುಕೊಂಡಿದೆ. ಗ್ರಾಹಕರು SBI, HDFC ಬ್ಯಾಂಕ್ ಮತ್ತು ICICI ಬ್ಯಾಂಕ್ ಕಾರ್ಡ್‌ಗಳ ಮೇಲೆ ರೂ. 1,500 ವರೆಗೆ ಇನ್‌ಸ್ಟಂಟ್ ರಿಯಾಯಿತಿ ಸಹ ಪಡೆಯಬಹುದು.
Oppo K14x 5G ಸ್ಮಾರ್ಟ್‌ಫೋನ್ 6.7 ಇಂಚಿನ HD+ LCD ಡಿಸ್‌ಪ್ಲೇ ಪಡೆದಿದೆ. ಹಾಗೆಯೇ 120Hz ರಿಫ್ರೆಶ್ ರೇಟ್ ಜೊತೆಗೆ 1125 nits ಬ್ರೈಟ್ನೆಸ್ ಸಪೋರ್ಟ್ ಒಳಗೊಂಡಿದೆ. ಇದರೊಂದಿಗೆ ಈ ಮೊಬೈಲ್ MediaTek Dimensity 6300 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ Android 15 ಓಎಸ್ ಸಪೋರ್ಟ್ ಕೂಡಾ ಹೊಂದಿದೆ. ಅಲ್ಲದೇ ಇದು 4GB + 128GB ಹಾಗೂ 6GB + 128GB ಆನ್‌ಬೋರ್ಡ್ ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ. ಇದರೊಂದಿಗೆ 6,500mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 45W ಫಾಸ್ಟ್ ಸಪೋರ್ಟ್ ಸಹ ಪಡೆದಿದೆ.
ಇನ್ನು Oppo K14x 5G ಫೋನ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾ 50MP ಸೆನ್ಸಾರ್ ಸೌಲಭ್ಯ ಪಡೆದಿದ್ದು, ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್ ಸೌಲಭ್ಯ ಪಡೆದಿದೆ. ಅದೇ ರೀತಿ ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ 5MP ಕ್ಯಾಮೆರಾ ರಚನೆಯನ್ನು ಒದಗಿಸಲಾಗಿದೆ. ಇದು Dual-View, AI ಪೋರ್ಟ್ರೇಟ್ ಮೋಡ್, AI ರೀಕಂಪೋಸ್ ಮತ್ತು AI ಎರೇಸರ್ 2.0 ಸೇರಿದಂತೆ ಕೆಲವು ಆಯ್ಕೆಗಳನ್ನು ಒಳಗೊಂಡಿದೆ.