45W ಫಾಸ್ಟ್‌ ಸಪೋರ್ಟ್‌ ಇರುವ Oppo ಸಂಸ್ಥೆಯ ಈ ಜನಪ್ರಿಯ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

HIGHLIGHTS

ಒಪ್ಪೋ K14x 5G ಸ್ಮಾರ್ಟ್‌ಫೋನ್‌ ಭರ್ಜರಿ ಡಿಸ್ಕೌಂಟ್‌ನಲ್ಲಿ ಲಭ್ಯ

ಒಪ್ಪೋದ ಈ ಫೋನ್‌ 6,500mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಅನ್ನು ಪಡೆದಿದೆ

ಒಪ್ಪೋ ಕಂಪನಿಯ ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ ಹೊಂದಿದೆ

45W ಫಾಸ್ಟ್‌ ಸಪೋರ್ಟ್‌ ಇರುವ Oppo ಸಂಸ್ಥೆಯ ಈ ಜನಪ್ರಿಯ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ಪ್ರಮುಖ ಮೊಬೈಲ್‌ ಬ್ರಾಂಡ್‌ಗಳ ಪೈಕಿ ಒಂದಾದ ಒಪ್ಪೋ ಕಂಪನಿಯ Oppo K14x 5G ಮೊಬೈಲ್‌ ಆಕರ್ಷಕ ಫಿಚರ್ಸ್‌ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಪ್ರಸ್ತುತ ಈ ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಸಖತ್ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ 6,500mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್‌ ಪ್ರಿಸ್ಮ್ ವೈಲೆಟ್‌ ಗ್ರೀನ್‌ ಹಾಗೂ ಐಸ್‌ ಬ್ಲೂ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಒಪ್ಪೋ K14x 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : WhatsApp Web ಬಳಕೆದಾರರಿಗೆ ಗುಡ್ ನ್ಯೂಸ್: ವಿಡಿಯೋ-ಆಡಿಯೋ ಕರೆ ಈಗ ಇನ್ನಷ್ಟು ಸುಲಭ

Oppo K14x 5G ಫೋನಿಗೆ ಬಿಗ್ ಡಿಸ್ಕೌಂಟ್‌

ಗ್ರಾಹಕಸ್ನೇಹಿ ಬೆಲೆಯಲ್ಲಿ ಆಕರ್ಷಕ ಫೀಚರ್ಸ್ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರ ಗಮನ ಸೆಳೆದಿರುವ ಒಪ್ಪೋ K14x 5G ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಭಾರೀ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 6GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 25,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 21,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಫೋನ್‌ ಪ್ರಿಸ್ಮ್ ವೈಲೆಟ್‌ ಗ್ರೀನ್‌ ಹಾಗೂ ಐಸ್‌ ಬ್ಲೂ ಕಲರ್‌ ಆಯ್ಕೆಗಳಲ್ಲಿ ಲಭ್ಯ.

Oppo K14 5G with 7000mAh battery and 120Hz display launch today in india

ಒಪ್ಪೋ K14x 5G ಮೊಬೈಲ್‌ನ ಫೀಚರ್ಸ್‌

ಒಪ್ಪೋ K14x 5G ಸ್ಮಾರ್ಟ್‌ಫೋನ್‌ 6.7 ಇಂಚಿನ HD+ LCD ಡಿಸ್‌ಪ್ಲೇ ಪಡೆದಿದೆ. ಹಾಗೆಯೇ 120Hz ರಿಫ್ರೆಶ್ ರೇಟ್‌ ಜೊತೆಗೆ 1125 nits ಬ್ರೈಟ್ನೆಸ್‌ ಸಪೋರ್ಟ್‌ ಒಳಗೊಂಡಿದೆ. ಇದರೊಂದಿಗೆ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ Android 15 ಓಎಸ್‌ ಸಪೋರ್ಟ್‌ ಕೂಡಾ ಹೊಂದಿದೆ. ಅಲ್ಲದೇ ಇದು 4GB + 128GB ಹಾಗೂ 6GB + 128GB ಆನ್‌ಬೋರ್ಡ್ ಸ್ಟೋರೇಜ್‌ ಆಯ್ಕೆಗಳನ್ನು ಪಡೆದಿದೆ. ಇದರೊಂದಿಗೆ 6,500mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 45W ಫಾಸ್ಟ್‌ ಸಪೋರ್ಟ್‌ ಸಹ ಪಡೆದಿದೆ.

ಹಾಗೆಯೇ ಒಪ್ಪೋ K14x 5G ಫೋನ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾ 50MP ಸೆನ್ಸಾರ್‌ ಸೌಲಭ್ಯ ಪಡೆದಿದ್ದು, ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್‌ ಸೌಲಭ್ಯ ಪಡೆದಿದೆ. ಅದೇ ರೀತಿ ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ 5MP ಕ್ಯಾಮೆರಾ ರಚನೆಯನ್ನು ಒದಗಿಸಲಾಗಿದೆ. ಇದು Dual-View, AI ಪೋರ್ಟ್ರೇಟ್ ಮೋಡ್, AI ರೀಕಂಪೋಸ್ ಮತ್ತು AI ಎರೇಸರ್ 2.0 ಸೇರಿದಂತೆ ಕೆಲವು ಆಯ್ಕೆಗಳನ್ನು ಒಳಗೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile