ಸಖತ್ ಸ್ಟೈಲಿಶ್‌ ಲುಕ್‌ ಇರುವ Oppo K14x 5G ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

HIGHLIGHTS

ಒಪ್ಪೋ K14x 5G ಸ್ಮಾರ್ಟ್‌ಫೋನ್‌ ಆಕರ್ಷಕ ಡಿಸ್ಕೌಂಟ್‌ನಲ್ಲಿ ಲಭ್ಯ

ಈ ಮೊಬೈಲ್‌ 6,500mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಅನ್ನು ಪಡೆದಿದೆ

ಈ ಫೋನ್‌ MediaTek Dimensity 6300 ಚಿಪ್‌ಸೆಟ್‌ ಪ್ರೊಸೆಸರ್‌ ಹೊಂದಿದೆ

ಸಖತ್ ಸ್ಟೈಲಿಶ್‌ ಲುಕ್‌ ಇರುವ Oppo K14x 5G ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ಒಪ್ಪೋ ಕಂಪನಿಯ Oppo K14x 5G ಮೊಬೈಲ್‌ ಅತ್ಯುತ್ತಮ ಕ್ಯಾಮೆರಾ ಹಾಗೂ ವೇಗದ ಪ್ರೊಸೆಸರ್‌ ಫೀಚರ್ಸ್‌ಗಳ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಪ್ರಸ್ತುತ ಈ ಮೊಬೈಲ್‌ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಆಕರ್ಷಕ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್‌ MediaTek Dimensity 6300 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ 45W ವೈರ್ಡ್ ಚಾರ್ಜಿಂಗ್ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್‌ ಪ್ರಿಸ್ಮ್ ವೈಲೆಟ್‌ ಗ್ರೀನ್‌ ಹಾಗೂ ಐಸ್‌ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಒಪ್ಪೋ K14x 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Vi ಟೆಲಿಕಾಂನ 799 ರೂ.ಗಳ ಪ್ಲಾನ್ ರೀಚಾರ್ಜ್‌ಗೆ ಯೋಗ್ಯವೇ? 77 ದಿನಗಳ ವ್ಯಾಲಿಡಿಟಿ ಸೌಲಭ್ಯ

Oppo K14x 5G ಮೊಬೈಲ್‌ಗೆ ಬೊಂಬಾಟ್‌ ಆಫರ್‌

ಆಕರ್ಷಕ ಫೀಚರ್ಸ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ಒಪ್ಪೋ K14x 5G ಸ್ಮಾರ್ಟ್‌ಫೋನ್‌ ಸದ್ಯ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಸಖತ್ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 4GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 35,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 17,449 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಪ್ರಿಸ್ಮ್ ವೈಲೆಟ್‌ ಗ್ರೀನ್‌ ಹಾಗೂ ಐಸ್‌ ಬ್ಲೂ ಕಲರ್‌ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ.

OPPO K14x 5G

ಒಪ್ಪೋ K14x 5G ಮೊಬೈಲ್‌ನ ಫೀಚರ್ಸ್‌

ಒಪ್ಪೋ K14x 5G ಸ್ಮಾರ್ಟ್‌ಫೋನ್‌ 6.7 ಇಂಚಿನ HD+ LCD ಡಿಸ್‌ಪ್ಲೇ ಪಡೆದಿದೆ. ಹಾಗೆಯೇ 120Hz ರಿಫ್ರೆಶ್ ರೇಟ್‌ ಜೊತೆಗೆ 1125 nits ಬ್ರೈಟ್ನೆಸ್‌ ಸಪೋರ್ಟ್‌ ಒಳಗೊಂಡಿದೆ. ಇದರೊಂದಿಗೆ ಈ ಮೊಬೈಲ್ MediaTek Dimensity 6300 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ Android 15 ಓಎಸ್‌ ಸಪೋರ್ಟ್‌ ಕೂಡಾ ಹೊಂದಿದೆ. ಅಲ್ಲದೇ ಇದು 4GB + 128GB ಹಾಗೂ 6GB + 128GB ಆನ್‌ಬೋರ್ಡ್ ಸ್ಟೋರೇಜ್‌ ಆಯ್ಕೆಗಳನ್ನು ಪಡೆದಿದೆ. ಇದರೊಂದಿಗೆ 6,500mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 45W ಫಾಸ್ಟ್‌ ಸಪೋರ್ಟ್‌ ಸಹ ಪಡೆದಿದೆ.

ಹಾಗೆಯೇ ಒಪ್ಪೋ K14x 5G ಫೋನ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾ 50MP ಸೆನ್ಸಾರ್‌ ಸೌಲಭ್ಯ ಪಡೆದಿದ್ದು, ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್‌ ಸೌಲಭ್ಯ ಪಡೆದಿದೆ. ಅದೇ ರೀತಿ ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ 5MP ಕ್ಯಾಮೆರಾ ರಚನೆಯನ್ನು ಒದಗಿಸಲಾಗಿದೆ. ಇದು Dual-View, AI ಪೋರ್ಟ್ರೇಟ್ ಮೋಡ್, AI ರೀಕಂಪೋಸ್ ಮತ್ತು AI ಎರೇಸರ್ 2.0 ಸೇರಿದಂತೆ ಕೆಲವು ಆಯ್ಕೆಗಳನ್ನು ಒಳಗೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile