ಡಿಸ್ಕೌಂಟ್ ಬೆಲೆಯಲ್ಲಿ Oppo K14x ಮೊಬೈಲ್ ಖರೀದಿ ಮಾಡಲು ಇದು ಸೂಕ್ತ ಸಮಯ!
ಫ್ಲಿಪ್ಕಾರ್ಟ್ನಲ್ಲಿ ಒಪ್ಪೋ K14x ಫೋನಿಗೆ ಆಕರ್ಷಕ ಆಫರ್
ಒಪ್ಪೋ K14x ಮೊಬೈಲ್ 6,500mAh ಬ್ಯಾಟರಿ ಸೌಲಭ್ಯ ಹೊಂದಿದೆ
ಒಪ್ಪೋ K14x ಸ್ಮಾರ್ಟ್ಫೋನ್ ಎರಡು ಆಕರ್ಷಕ ಬಣ್ಣಗಳಲ್ಲಿ ಲಭ್ಯ
Flipkart Big Bang Diwali Sale: ಫ್ಲಿಪ್ಕಾರ್ಟ್ ಆಯೋಜಿಸಿರುವ ಹಬ್ಬದ ಮಾರಾಟದಲ್ಲಿ ಆಯ್ದ ಮೊಬೈಲ್ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ಒಪ್ಪೋ ಕಂಪನಿಯ Oppo K14x ಸ್ಮಾರ್ಟ್ಫೋನ್ ಸಹ ಸ್ಪೆಷಲ್ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್ಗಳ ಕೊಡುಗೆಗಳು ಹಾಗೂ ಎಕ್ಸ್ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ MediaTek Dimensity 6300 ಚಿಪ್ಸೆಟ್ ಪ್ರೊಸೆಸರ್ ಪವರ್ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್ಫೋನ್ 6,500mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್ಕಾರ್ಟ್ ಇ ಕಾಮರ್ಸ್ ವೆಬ್ಸೈಟ್ನಲ್ಲಿ ಒಪ್ಪೋ K14x ಸ್ಮಾರ್ಟ್ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Oppo K14x ಈಗ ಆಫರ್ನಲ್ಲಿ ಲಭ್ಯ
ಬಜೆಟ್ ದರ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ಒಪ್ಪೋ K14x ಮೊಬೈಲ್ ಫ್ಲಿಪ್ಕಾರ್ಟ್ ಇ ಕಾಮರ್ಸ್ ಪ್ಲಾಟ್ಫಾರ್ಮ್ ನಲ್ಲಿ ಅತ್ಯುತ್ತಮ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 4GB + 64GB ಸ್ಟೋರೇಜ್ ವೇರಿಯಂಟ್ ಬೆಲೆ 19,999 ರೂ.ಗಳು ಆಗಿದ್ದು, ಆದರೆ ಆಫರ್ನಲ್ಲಿ ಪ್ರಸ್ತುತ ಈ ಮೊಬೈಲ್ ಬ್ಯಾಂಕ್ ಆಫರ್ಗಳ ಮೂಲಕ 18,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಪ್ರಿಸ್ಮ್ ವೈಲೆಟ್ ಗ್ರೀನ್ ಹಾಗೂ ಐಸ್ ಬ್ಲೂ ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದು.
ಒಪ್ಪೋ K14x 5G ಫೀಚರ್ಸ್ ಮಾಹಿತಿ
ಒಪ್ಪೋ K14x 5G ಸ್ಮಾರ್ಟ್ಫೋನ್ 6.7 ಇಂಚಿನ HD+ LCD ಡಿಸ್ಪ್ಲೇ ಪಡೆದಿದೆ. ಹಾಗೆಯೇ 120Hz ರಿಫ್ರೆಶ್ ರೇಟ್ ಜೊತೆಗೆ 1125 nits ಬ್ರೈಟ್ನೆಸ್ ಸಪೋರ್ಟ್ ಒಳಗೊಂಡಿದೆ. ಇದರೊಂದಿಗೆ ಈ ಮೊಬೈಲ್ MediaTek Dimensity 6300 ಚಿಪ್ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ Android 15 ಓಎಸ್ ಸಪೋರ್ಟ್ ಕೂಡಾ ಹೊಂದಿದೆ. ಅಲ್ಲದೇ ಇದು 4GB + 128GB ಹಾಗೂ 6GB + 128GB ಆನ್ಬೋರ್ಡ್ ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ. ಇದರೊಂದಿಗೆ 6,500mAh ಬ್ಯಾಟರಿ ಬ್ಯಾಕ್ಅಪ್ ಜೊತೆಗೆ 45W ಫಾಸ್ಟ್ ಸಪೋರ್ಟ್ ಸಹ ಪಡೆದಿದೆ.
ಇನ್ನು ಒಪ್ಪೋ K14x 5G ಫೋನ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾ 50MP ಸೆನ್ಸಾರ್ ಸೌಲಭ್ಯ ಪಡೆದಿದ್ದು, ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್ ಸೌಲಭ್ಯ ಪಡೆದಿದೆ. ಅದೇ ರೀತಿ ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ 5MP ಕ್ಯಾಮೆರಾ ರಚನೆಯನ್ನು ಒದಗಿಸಲಾಗಿದೆ. ಇದು Dual-View, AI ಪೋರ್ಟ್ರೇಟ್ ಮೋಡ್, AI ರೀಕಂಪೋಸ್ ಮತ್ತು AI ಎರೇಸರ್ 2.0 ಸೇರಿದಂತೆ ಕೆಲವು ಆಯ್ಕೆಗಳನ್ನು ಒಳಗೊಂಡಿದೆ.