Oppo reno16
ಒಪ್ಪೋ ಕಂಪನಿಯ ಬಹುನಿರೀಕ್ಷಿತ Oppo Reno 16 ಮೊಬೈಲ್ ಸರಣಿ ಭಾರತದಲ್ಲಿ ಇಂದು (ಜುಲೈ 2 ರಂದು) ಅಧಿಕೃತವಾಗಿ ಬಿಡುಗಡೆ ಆಗಿದೆ. ಈ ಹೊಸ ಮೊಬೈಲ್ ಸರಣಿಯು ಒಪ್ಪೋ ರೆನೋ 16 ಹಾಗೂ ಒಪ್ಪೋ ರೆನೋ 16c ಮಾಡೆಲ್‌ಗಳನ್ನು ಒಳಗೊಂಡಿದೆ. ಆ ಪೈಕಿ ಒಪ್ಪೋ ರೆನೋ 16 ಮೊಬೈಲ್ ಪ್ರೀಮಿಯಂ ಬೆಲೆಯಲ್ಲಿ ಆಕರ್ಷಕ ಎನಿಸಿದೆ. ಈ ಫೋನ್ ಸ್ನಾಪ್‌ಡ್ರಾಗನ್ 7 ಸರಣಿಯ ಚಿಪ್‌ಸೆಟ್ ಪ್ರೊಸೆಸರ್ ಪಡೆದುಕೊಂಡಿದೆ. ಅಲ್ಲದೇ ಇದು 6,700mAh ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದೆ. ಈ ಮೊಬೈಲ್ ಸ್ಟಾರಿ ವೈಟ್, ಸ್ಟೆಲ್ಲರ್ ಪರ್ಪಲ್ ಮತ್ತು ಟ್ವಿಲೈಟ್ ವೈಲೆಟ್ ಬಣ್ಣಗಳ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶಿಸಿದೆ. ಹಾಗಾದರೇ ಒಪ್ಪೋ ರೆನೋ 16 ಸ್ಮಾರ್ಟ್‌ಫೋನ್ ಬೆಲೆ ಹಾಗೂ ಫೀಚರ್ಸ್ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : LG ಕಂಪನಿಯಿಂದ ಎರಡು ಹೊಸ ಬ್ಲೂಟೂತ್ ಸ್ಪೀಕರ್ ಬಿಡುಗಡೆ; AI ಆಧಾರಿತ ಆಡಿಯೊ ಫೀಚರ್ಸ್
ಒಪ್ಪೋ ಕಂಪನಿಯ ಒಪ್ಪೋ ರೆನೋ 16 ಮೊಬೈಲ್ ಎರಡು ವೇರಿಯಂಟ್ ಆಯ್ಕೆಗಳಲ್ಲಿ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಮೊಬೈಲ್‌ನ 8GB RAM + 256GB ಸ್ಟೋರೇಜ್ ವೇರಿಯಂಟ್ 61,999 ರೂ.ಗಳ ಬೆಲೆಯನ್ನು ಹೊಂದಿದೆ. ಅದೇ ರೀತಿ 12GB RAM + 256GB ಸ್ಟೋರೇಜ್ ವೇರಿಯಂಟ್ ಮಾಡೆಲ್ 67,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಮೊಬೈಲ್ ಮೂರು ಬಣ್ಣಗಳ ಆಯ್ಕೆ ಪಡೆದಿದ್ದು ಅವುಗಳು ಕ್ರಮವಾಗಿ ಸ್ಟಾರಿ ವೈಟ್, ಸ್ಟೆಲ್ಲರ್ ಪರ್ಪಲ್ ಮತ್ತು ಟ್ವಿಲೈಟ್ ವೈಲೆಟ್ ಆಗಿವೆ. ಅಂದಹಾಗೆ ಈ ಮೊಬೈಲ್ ಭಾರತದಲ್ಲಿ ಜುಲೈ 9 ರಂದು ಅಮೆಜಾನ್ ಮೂಲಕ ಮಾರಾಟಕ್ಕೆ ಬರಲಿದೆ.
ಒಪ್ಪೋ ರೆನೋ 16 ಮೊಬೈಲ್ 6.32 ಇಂಚಿನ AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ 3,500 nits ವರೆಗಿನ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಕ್ವಾಲ್ಕಾಮ್‌ನ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 7 ಜೆನ್ 4 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 8GB RAM + 256GB ಹಾಗೂ 12GB RAM + 256GB ವೇರಿಯಂಟ್‌ಗಳ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಇದು ಇತ್ತೀಚಿನ Android 16 ಆಧಾರಿತ ColorOS 16 ನೊಂದಿಗೆ ಕಾರ್ಯನಿರ್ವಹಿಸಲಿದೆ.
ಹಾಗೆಯೇ ಒಪ್ಪೋ ರೆನೋ 16 ಮೊಬೈಲ್ ಟ್ರಿಪಲ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ. ಇನ್ನುಳಿದ ಎರಡು ಕ್ಯಾಮೆರಾಗಳು ಸಹ ಕ್ರಮವಾಗಿ 50 ಮೆಗಾಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿವೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಅಲ್ಲದೇ ಇದು 6,700mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಜೊತೆಗೆ 80W ವೈಯರ್ಡ್ ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ.