ನಾಳೆಯಿಂದ Oppo Reno 16 ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌ ಪ್ರಾರಂಭ! ಬೆಲೆ ಹಾಗೂ ಫೀಚರ್ಸ್

ನಾಳೆಯಿಂದ Oppo Reno 16 ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌ ಪ್ರಾರಂಭ! ಬೆಲೆ ಹಾಗೂ ಫೀಚರ್ಸ್

ಇತ್ತೀಚಿಗೆ ಹೊಸದಾಗಿ ಬಿಡುಗಡೆ ಆಗಿರುವ Oppo Reno 16 ಸ್ಮಾರ್ಟ್‌ಫೋನ್ ಮೀಡ್‌ರೇಂಜ್‌ ದರದ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಅಂದಹಾಗೆ ಈ ಮೊಬೈಲ್‌ ನಾಳೆ (ಜುಲೈ 9 ರಿಂದ) ಭಾರತೀಯ ಮಾರುಕಟ್ಟೆಯಲ್ಲಿ ಸೇಲ್‌ ಶುರು ಮಾಡಲಿದೆ. ಈ ನೂತನ ಮೊಬೈಲ್‌ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 7 ಜೆನ್ 4 ಚಿಪ್‌ಸೆಟ್‌ ಪ್ರೊಸೆಸರ್‌ ಒಳಗೊಂಡಿರುವ ಜೊತೆಗೆ 6,700mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದೆ. ಅಲ್ಲದೇ ಈ ಮೊಬೈಲ್‌ನ ಡಿಸ್‌ಪ್ಲೇಯು 120Hz ವರೆಗೆ ರಿಫ್ರೆಶ್ ರೇಟ್‌ ಹೊಂದಿದೆ. ಅಲ್ಲದೇ ಈ ಮೊಬೈಲ್‌ ಸ್ಟಾರಿ ವೈಟ್, ಸ್ಟೆಲ್ಲರ್ ಪರ್ಪಲ್ ಮತ್ತು ಟ್ವಿಲೈಟ್ ವೈಲೆಟ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಹಾಗಾದರೇ ಒಪ್ಪೋ ರೆನೋ 16 ಫೋನಿನ ಸೇಲ್‌, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Jio ಗ್ರಾಹಕರೇ ಗಮನಿಸಿ! ಜಸ್ಟ್‌ 666 ರೂ.ಗಳ ಈ ರೀಚಾರ್ಜ್‌ನಲ್ಲಿ 70 ದಿನಗಳ ವ್ಯಾಲಿಡಿಟಿ

Oppo Reno 16 ಮೊಬೈಲ್‌ ಸೇಲ್ ಮಾಹಿತಿ

ಭಾರತದಲ್ಲಿ ಒಪ್ಪೋ ಕಂಪನಿಯ ಒಪ್ಪೋ ರೆನೋ 16 ಮೊಬೈಲ್‌ ಇದೇ ನಾಳೆ (ಜುಲೈ 9 ರಿಂದ) ಫ್ಲಿಪ್‌ಕಾರ್ಟ್‌ ಹಾಗೂ ಅಮೆಜಾನ್‌ ಇ ಕಾಮರ್ಸ್‌ ಮೂಲಕ ಮಾರಾಟಕ್ಕೆ ಬರಲಿದೆ. ಈ ಮೊಬೈಲ್‌ನ 8GB RAM + 256GB ಸ್ಟೋರೇಜ್‌ ವೇರಿಯಂಟ್‌ 61,999 ರೂ.ಗಳ ಬೆಲೆಯನ್ನು ಹೊಂದಿದೆ. ಅದೇ ರೀತಿ 12GB RAM + 256GB ಸ್ಟೋರೇಜ್‌ ವೇರಿಯಂಟ್‌ ಮಾಡೆಲ್‌ 67,999 ರೂ.ಗಳು ಆಗಿದೆ. ಇನ್ನು ಈ ಮೊಬೈಲ್‌ ಮೂರು ಬಣ್ಣಗಳ ಆಯ್ಕೆ ಪಡೆದಿದ್ದು ಅವುಗಳು ಕ್ರಮವಾಗಿ ಸ್ಟಾರಿ ವೈಟ್, ಸ್ಟೆಲ್ಲರ್ ಪರ್ಪಲ್ ಮತ್ತು ಟ್ವಿಲೈಟ್ ವೈಲೆಟ್ ಆಗಿವೆ.

Oppo Reno 16 sale : Price

ಒಪ್ಪೋ ರೆನೋ 16 ಮೊಬೈಲ್‌ ಫೀಚರ್ಸ್‌

ಒಪ್ಪೋ ರೆನೋ 16 ಮೊಬೈಲ್‌ 6.32 ಇಂಚಿನ AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 120Hz ರಿಫ್ರೆಶ್ ರೇಟ್‌ ಜೊತೆಗೆ 3,500 nits ವರೆಗಿನ ಗರಿಷ್ಠ ಬ್ರೈಟ್ನೆಸ್‌ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಕ್ವಾಲ್ಕಾಮ್‌ನ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 7 ಜೆನ್ 4 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 8GB RAM + 256GB ಹಾಗೂ 12GB RAM + 256GB ವೇರಿಯಂಟ್‌ಗಳ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಇದು ಇತ್ತೀಚಿನ Android 16 ಆಧಾರಿತ ColorOS 16 ನೊಂದಿಗೆ ಕಾರ್ಯನಿರ್ವಹಿಸಲಿದೆ.

ಹಾಗೆಯೇ ಒಪ್ಪೋ ರೆನೋ 16 ಮೊಬೈಲ್‌ ಟ್ರಿಪಲ್‌ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ. ಇನ್ನುಳಿದ ಎರಡು ಕ್ಯಾಮೆರಾಗಳು ಸಹ ಕ್ರಮವಾಗಿ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸೌಲಭ್ಯ ಪಡೆದಿವೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಅಲ್ಲದೇ ಇದು 6,700mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಜೊತೆಗೆ 80W ವೈಯರ್ಡ್‌ ಫಾಸ್ಟ್‌ ಚಾರ್ಜಿಂಗ್‌ ವ್ಯವಸ್ಥೆ ಒಳಗೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile