Oppo Reno 16c ಖರೀದಿಗೆ ಮಾಡಲು ಇದುವೇ ಅತ್ಯುತ್ತಮ ಆಫರ್‌! 80W ಸೂಪರ್‌ವೂಕ್ ಚಾರ್ಜರ್

HIGHLIGHTS

ಒಪ್ಪೋ ರೆನೋ 16c ಫೋನಿಗೆ ಅಮೆಜಾನ್‌ನಲ್ಲಿ ಆಫರ್‌ ಲಭ್ಯ

ಒಪ್ಪೋ ರೆನೋ 16c ಮೊಬೈಲ್‌ 7,000mAh ಬ್ಯಾಟರಿ ಪಡೆದಿದೆ

ಒಪ್ಪೋ ಸಂಸ್ಥೆಯ ಈ ಸ್ಮಾರ್ಟ್‌ಫೋನ್‌ ಮೂರು ಆಕರ್ಷಕ ಕಲರ್‌ನಲ್ಲಿ ಲಭ್ಯ

Oppo Reno 16c ಖರೀದಿಗೆ ಮಾಡಲು ಇದುವೇ ಅತ್ಯುತ್ತಮ ಆಫರ್‌! 80W ಸೂಪರ್‌ವೂಕ್ ಚಾರ್ಜರ್

ಜನಪ್ರಿಯ ಇ ಕಾಮರ್ಸ್‌ ಅಮೆಜಾನ್‌ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ಒಪ್ಪೋ ಕಂಪನಿಯ Oppo Reno 16c ಮೊಬೈಲ್‌ ಆಕರ್ಷಕ ಆಫರ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಚಿಪ್‌ಸೆಟ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 7,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಒಪ್ಪೋ ರೆನೋ 16c ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : 12GB RAM ಸೌಲಭ್ಯ ಇರುವ Motorola Edge 60 Fusion 5G ಮೊಬೈಲ್‌ಗೆ ಈಗ ಬಿಗ್ ಡಿಸ್ಕೌಂಟ್‌!

Oppo Reno 16c ಫೋನಿಗೆ ಸಖತ್ ಆಫರ್‌

ಮೀಡ್‌ರೇಂಜ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿರುವ ಒಪ್ಪೋ ರೆನೋ 16c ಮೊಬೈಲ್‌ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಸಖತ್ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 8GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 74,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ 52,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಸ್ಟಾರಿ ವೈಟ್, ಸ್ಟೆಲ್ಲರ್ ಪರ್ಪಲ್ ಮತ್ತು ಟ್ವಿಲೈಟ್ ವೈಲೆಟ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು. ಒಪ್ಪೋ ರೆನೋ 16c ಸ್ಮಾರ್ಟ್‌ಫೋನ್‌ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

Oppo Reno 16c
Oppo Reno 16c

ಒಪ್ಪೋ ರೆನೋ 16c ಮೊಬೈಲ್‌ ಫೀಚರ್ಸ್‌

ಒಪ್ಪೋ ರೆನೋ 16c ಮೊಬೈಲ್‌ 6.57 ಇಂಚಿನ AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 120Hz ರಿಫ್ರೆಶ್ ರೇಟ್‌ ಜೊತೆಗೆ 1,400 ವರೆಗಿನ ಗರಿಷ್ಠ ಬ್ರೈಟ್ನೆಸ್‌ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 8GB + 128GB, 8GB + 256GB ಹಾಗೂ 12GB RAM + 256GB ವೇರಿಯಂಟ್‌ಗಳ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಇದು ಇತ್ತೀಚಿನ Android 16 ಆಧಾರಿತ ColorOS 16 ನೊಂದಿಗೆ ಕಾರ್ಯನಿರ್ವಹಿಸಲಿದೆ.

ಹಾಗೆಯೇ ಒಪ್ಪೋ ರೆನೋ 16c ಮೊಬೈಲ್‌ ಟ್ರಿಪಲ್‌ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ. ಇನ್ನುಳಿದ ಎರಡು ಕ್ಯಾಮೆರಾಗಳು ಸಹ ಕ್ರಮವಾಗಿ 8 ಮೆಗಾಪಿಕ್ಸೆಲ್ + 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸೌಲಭ್ಯ ಪಡೆದಿವೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಅಲ್ಲದೇ ಇದು 7,000mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಜೊತೆಗೆ 80W ವೈಯರ್ಡ್‌ ಫಾಸ್ಟ್‌ ಚಾರ್ಜಿಂಗ್‌ ವ್ಯವಸ್ಥೆ ಒಳಗೊಂಡಿದೆ.

Disclosure: This Article Contains Affiliate Links

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile