Oppo launched Reno 16 and Reno 16c smartphones in India Price and specification and sale date
ಜನಪ್ರಿಯ ಒಪ್ಪೋ ಮೊಬೈಲ್ ಕಂಪನಿಯು ಹೊಸದಾಗಿ Oppo Reno 16c ಮೊಬೈಲ್ ಅನ್ನು ಇಂದು (ಜುಲೈ 2 ರಂದು) ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ಹೊಸ ಮೊಬೈಲ್ ಮೀಡ್‌ರೇಂಜ್ ಬೆಲೆಯಲ್ಲಿ ಆಕರ್ಷಕ ಫೀಚರ್ಸ್ ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಚಿಪ್‌ಸೆಟ್ ಪ್ರೊಸೆಸರ್ ಪಡೆದುಕೊಂಡಿದೆ. ಅಲ್ಲದೇ ಇದು 7,000mAh ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದೆ. ಈ ಮೊಬೈಲ್ ಸ್ಟಾರಿ ವೈಟ್, ಸ್ಟೆಲ್ಲರ್ ಪರ್ಪಲ್ ಮತ್ತು ಟ್ವಿಲೈಟ್ ವೈಲೆಟ್ ಬಣ್ಣಗಳ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶಿಸಿದೆ. ಹಾಗಾದರೇ ಒಪ್ಪೋ ರೆನೋ 16 ಸ್ಮಾರ್ಟ್‌ಫೋನ್ ಬೆಲೆ ಹಾಗೂ ಫೀಚರ್ಸ್ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಭಾರತದಲ್ಲಿ ಬಿಡುಗಡೆ ಆಯ್ತು Oppo Reno 16 ಸ್ಮಾರ್ಟ್‌ಫೋನ್! ಟ್ರಿಪಲ್ 50MP ಕ್ಯಾಮೆರಾ ಸೌಲಭ್ಯ
ಒಪ್ಪೋ ಕಂಪನಿಯ ಒಪ್ಪೋ ರೆನೋ 16c ಮೊಬೈಲ್ ಮೂರು ವೇರಿಯಂಟ್ ಆಯ್ಕೆಗಳಲ್ಲಿ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಮೊಬೈಲ್‌ನ 8GB + 128GB ಸ್ಟೋರೇಜ್ ವೇರಿಯಂಟ್ 46,999 ರೂ.ಗಳ ಬೆಲೆಯನ್ನು ಹೊಂದಿದೆ. ಅದೇ ರೀತಿ 8GB + 256GB ಸ್ಟೋರೇಜ್ ವೇರಿಯಂಟ್ ಮಾಡೆಲ್ 49,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು 12GB + 256GB ವೇರಿಯಂಟ್ 55,999 ರೂ. ಗಳ ಬೆಲೆ ಪಡೆದಿದೆ. ಇನ್ನು ಈ ಮೊಬೈಲ್ ಮೂರು ಬಣ್ಣಗಳ ಆಯ್ಕೆ ಪಡೆದಿದ್ದು ಅವುಗಳು ಕ್ರಮವಾಗಿ ಸ್ಟಾರಿ ವೈಟ್, ಸ್ಟೆಲ್ಲರ್ ಪರ್ಪಲ್ ಮತ್ತು ಟ್ವಿಲೈಟ್ ವೈಲೆಟ್ ಆಗಿವೆ. ಅಂದಹಾಗೆ ಈ ಮೊಬೈಲ್ ಭಾರತದಲ್ಲಿ ಜುಲೈ 9 ರಂದು ಅಮೆಜಾನ್, ಫ್ಲಿಪ್‌ಕಾರ್ಟ್ ಮತ್ತು ಒಪ್ಪೋ ವೆಬ್‌ಸೈಟ್ ಮೂಲಕ ಮಾರಾಟಕ್ಕೆ ಬರಲಿದೆ.
ಒಪ್ಪೋ ರೆನೋ 16c ಮೊಬೈಲ್ 6.57 ಇಂಚಿನ AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ 1,400 ವರೆಗಿನ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 8GB + 128GB, 8GB + 256GB ಹಾಗೂ 12GB RAM + 256GB ವೇರಿಯಂಟ್‌ಗಳ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಇದು ಇತ್ತೀಚಿನ Android 16 ಆಧಾರಿತ ColorOS 16 ನೊಂದಿಗೆ ಕಾರ್ಯನಿರ್ವಹಿಸಲಿದೆ.
ಹಾಗೆಯೇ ಒಪ್ಪೋ ರೆನೋ 16c ಮೊಬೈಲ್ ಟ್ರಿಪಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ. ಇನ್ನುಳಿದ ಎರಡು ಕ್ಯಾಮೆರಾಗಳು ಸಹ ಕ್ರಮವಾಗಿ 8 ಮೆಗಾಪಿಕ್ಸೆಲ್ + 50 ಮೆಗಾಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿವೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಅಲ್ಲದೇ ಇದು 7000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಜೊತೆಗೆ 80W ವೈಯರ್ಡ್ ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ.