ಭಾರತದಲ್ಲಿ Oppo Reno 16c ಮೊಬೈಲ್‌ ಈಗ ಖರೀದಿಗೆ ಲಭ್ಯ! 7,000mAh ಬ್ಯಾಟರಿ ಹೈಲೈಟ್‌

HIGHLIGHTS

ಇಂದಿನಿಂದ ಒಪ್ಪೋ ರೆನೋ 16c ಮೊಬೈಲ್ ಖರೀದಿಗೆ ಲಭ್ಯ

ಒಪ್ಪೋ ರೆನೋ 16 ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಪ್ರೊಸೆಸರ್‌ ಹೊಂದಿದೆ

ಈ ಫೋನ್‌ ಸ್ಟಾರಿ ವೈಟ್, ಸ್ಟೆಲ್ಲರ್ ಪರ್ಪಲ್ ಮತ್ತು ಟ್ವಿಲೈಟ್ ವೈಲೆಟ್ ಕಲರ್ ಆಯ್ಕೆ ಪಡೆದಿದೆ

ಒಪ್ಪೋ ಸಂಸ್ಥೆಯ ನೂತನ Oppo Reno 16c ಸ್ಮಾರ್ಟ್‌ಫೋನ್ ಮೀಡ್‌ರೇಂಜ್‌ ದರದ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಅಂದಹಾಗೆ ಈ ಮೊಬೈಲ್‌ ಇಂದಿನಿಂದ (ಜುಲೈ 9 ರಿಂದ) ಭಾರತೀಯ ಮಾರುಕಟ್ಟೆಯಲ್ಲಿ ಸೇಲ್‌ ಶುರು ಮಾಡಿದೆ. ಈ ನೂತನ ಮೊಬೈಲ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಚಿಪ್‌ಸೆಟ್‌ ಪ್ರೊಸೆಸರ್‌ ಒಳಗೊಂಡಿರುವ ಜೊತೆಗೆ 7,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದೆ. ಅಲ್ಲದೇ ಈ ಮೊಬೈಲ್‌ನ ಡಿಸ್‌ಪ್ಲೇಯು 120Hz ವರೆಗೆ ರಿಫ್ರೆಶ್ ರೇಟ್‌ ಹೊಂದಿದೆ. ಅಲ್ಲದೇ ಈ ಮೊಬೈಲ್‌ ಸ್ಟಾರಿ ವೈಟ್, ಸ್ಟೆಲ್ಲರ್ ಪರ್ಪಲ್ ಮತ್ತು ಟ್ವಿಲೈಟ್ ವೈಲೆಟ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಹಾಗಾದರೇ ಒಪ್ಪೋ ರೆನೋ 16c ಫೋನಿನ ಸೇಲ್‌, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಬಜೆಟ್‌ ಬೆಲೆಯಲ್ಲಿ ಹೊಸ Moto G77 Power ಬಿಡುಗಡೆ! 7,000mAh ಬ್ಯಾಟರಿ ವಿಶೇಷ

Oppo Reno 16c ಮೊಬೈಲ್‌ ಸೇಲ್ ಮಾಹಿತಿ

ಭಾರತದಲ್ಲಿ ಒಪ್ಪೋ ಕಂಪನಿಯ ಒಪ್ಪೋ ರೆನೋ 16c ಮೊಬೈಲ್‌ ಇದೇ ಇಂದಿನಿಂದ (ಜುಲೈ 9 ರಿಂದ) ಫ್ಲಿಪ್‌ಕಾರ್ಟ್‌ ಹಾಗೂ ಅಮೆಜಾನ್‌ ಇ ಕಾಮರ್ಸ್‌ ಮೂಲಕ ಖರೀದಿಗೆ ಲಭ್ಯವಾಗಿವೆ. ಈ ಮೊಬೈಲ್‌ನ 8GB + 128GB ಸ್ಟೋರೇಜ್‌ ವೇರಿಯಂಟ್‌ 46,999 ರೂ.ಗಳ ಬೆಲೆಯನ್ನು ಹೊಂದಿದೆ. ಅದೇ ರೀತಿ 8GB + 256GB ಸ್ಟೋರೇಜ್‌ ವೇರಿಯಂಟ್‌ ಮಾಡೆಲ್‌ 49,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು 12GB + 256GB ವೇರಿಯಂಟ್‌ 55,999 ರೂ. ಗಳ ಬೆಲೆ ಪಡೆದಿದೆ. ಇನ್ನು ಈ ಮೊಬೈಲ್‌ ಮೂರು ಕಲರ್‌ ಆಯ್ಕೆ ಪಡೆದಿದ್ದು ಅವುಗಳು ಕ್ರಮವಾಗಿ ಸ್ಟಾರಿ ವೈಟ್, ಸ್ಟೆಲ್ಲರ್ ಪರ್ಪಲ್ ಮತ್ತು ಟ್ವಿಲೈಟ್ ವೈಲೆಟ್ ಆಗಿವೆ.

ಒಪ್ಪೋ ರೆನೋ 16c ಮೊಬೈಲ್‌ ಫೀಚರ್ಸ್‌

ಒಪ್ಪೋ ರೆನೋ 16c ಮೊಬೈಲ್‌ 6.57 ಇಂಚಿನ AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 120Hz ರಿಫ್ರೆಶ್ ರೇಟ್‌ ಜೊತೆಗೆ 1,400 ವರೆಗಿನ ಗರಿಷ್ಠ ಬ್ರೈಟ್ನೆಸ್‌ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 8GB + 128GB, 8GB + 256GB ಹಾಗೂ 12GB RAM + 256GB ವೇರಿಯಂಟ್‌ಗಳ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಇದು ಇತ್ತೀಚಿನ Android 16 ಆಧಾರಿತ ColorOS 16 ನೊಂದಿಗೆ ಕಾರ್ಯನಿರ್ವಹಿಸಲಿದೆ.

ಹಾಗೆಯೇ ಒಪ್ಪೋ ರೆನೋ 16c ಮೊಬೈಲ್‌ ಟ್ರಿಪಲ್‌ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ. ಇನ್ನುಳಿದ ಎರಡು ಕ್ಯಾಮೆರಾಗಳು ಸಹ ಕ್ರಮವಾಗಿ 8 ಮೆಗಾಪಿಕ್ಸೆಲ್ + 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸೌಲಭ್ಯ ಪಡೆದಿವೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಅಲ್ಲದೇ ಇದು 7000mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಜೊತೆಗೆ 80W ವೈಯರ್ಡ್‌ ಫಾಸ್ಟ್‌ ಚಾರ್ಜಿಂಗ್‌ ವ್ಯವಸ್ಥೆ ಒಳಗೊಂಡಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :