Oppo Reno16c 5G price offers and features know here
ಒಪ್ಪೋ ಕಂಪನಿಯ ಬಜೆಟ್ ಬೆಲೆಯ ಫೋನ್‌ಗಳ ಪೈಕಿ ಒಂದಾದ Oppo Reno 16c ಸ್ಮಾರ್ಟ್‌ಫೋನ್ ಇದೀಗ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಸಖತ್ ಆಫರ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಮೊಬೈಲ್ 7,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್ ಸ್ಟಾರಿ ವೈಟ್, ಸ್ಟೆಲ್ಲರ್ ಪರ್ಪಲ್ ಮತ್ತು ಟ್ವಿಲೈಟ್ ವೈಲೆಟ್ ಕಲರ್ ಆಯ್ಕೆಯಲ್ಲಿ ಸಿಗಲಿದೆ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಒಪ್ಪೋ ರೆನೋ 16c ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಸದ್ದಿಲ್ಲದೆ ದೇಶೀಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ Redmi 17 5G ಸ್ಮಾರ್ಟ್‌ಫೋನ್! ಫೀಚರ್ಸ್ ನೋಡಿ
ಆಕರ್ಷಕ ಫೀಚರ್ಸ್ ಮೂಲಕ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿರುವ ಒಪ್ಪೋ ರೆನೋ 16c ಮೊಬೈಲ್ ಸದ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 74,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 49,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಈ ಫೋನ್ ಸ್ಟಾರಿ ವೈಟ್, ಸ್ಟೆಲ್ಲರ್ ಪರ್ಪಲ್ ಮತ್ತು ಟ್ವಿಲೈಟ್ ವೈಲೆಟ್ ಕಲರ್ ಆಯ್ಕೆ ಹೊಂದಿದೆ.
ಒಪ್ಪೋ ರೆನೋ 16c ಮೊಬೈಲ್ 6.57 ಇಂಚಿನ AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ 1,400 ವರೆಗಿನ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 8GB + 128GB, 8GB + 256GB ಹಾಗೂ 12GB RAM + 256GB ವೇರಿಯಂಟ್‌ಗಳ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಇದು ಇತ್ತೀಚಿನ Android 16 ಆಧಾರಿತ ColorOS 16 ನೊಂದಿಗೆ ಕಾರ್ಯನಿರ್ವಹಿಸಲಿದೆ.
ಹಾಗೆಯೇ ಒಪ್ಪೋ ರೆನೋ 16c ಮೊಬೈಲ್ ಟ್ರಿಪಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ. ಇನ್ನುಳಿದ ಎರಡು ಕ್ಯಾಮೆರಾಗಳು ಸಹ ಕ್ರಮವಾಗಿ 8 ಮೆಗಾಪಿಕ್ಸೆಲ್ + 50 ಮೆಗಾಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿವೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಅಲ್ಲದೇ ಇದು 7,000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಜೊತೆಗೆ 80W ವೈಯರ್ಡ್ ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ.