ಸೈಲೆಂಟ್ ಆಗಿ ಮಾರುಕಟ್ಟೆ ಪ್ರವೇಶಿಸಿದೆ Philips S7221 5G ಸ್ಮಾರ್ಟ್‌ಫೋನ್! 64MP ಕ್ಯಾಮೆರಾ
ಫಿಲಿಪ್ಸ್ S7221 5G ಫೋನ್ 5,700mAh ಬ್ಯಾಟರಿ ಪಡೆದುಕೊಂಡಿದೆ
ಫಿಲಿಪ್ಸ್ S7221 5G ಸ್ಮಾರ್ಟ್‌ಫೋನ್ 64MP ಕ್ಯಾಮೆರಾ ಒಳಗೊಂಡಿದೆ
ಫಿಲಿಪ್ಸ್ನ ಈ ಮೊಬೈಲ್ ಬ್ಲ್ಯಾಕ್, ಬ್ಲೂ ಮತ್ತು ಗ್ರೇ ಕಲರ್ ಆಯ್ಕೆಯಲ್ಲಿ ಲಭ್ಯ
ಫಿಲಿಪ್ಸ್ ಕಂಪನಿಯ ಹೊಸದಾಗಿ Philips S7221 5G ಸ್ಮಾರ್ಟ್‌ಫೋನ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ಹೊಸ ಮೊಬೈಲ್ ಆಕ್ಟಾ-ಕೋರ್ ಸ್ಪ್ರೆಡ್‌ಟ್ರಮ್ T765 ಚಿಪ್‌ಸೆಟ್ ಪ್ರೊಸೆಸರ್ ಸಪೋರ್ಟ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ 120Hz ರಿಫ್ರೆಶ್ ರೇಟ್ ಜೊತೆಗೆ 5,700mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಪಡೆದಿರುವುದು ಪ್ರಮುಖ ಹೈಲೈಟ್‌ಗಳಲ್ಲಿ ಒಂದಾಗಿದೆ. ಹಾಗೆಯೇ ಮುಂಭಾಗದಲ್ಲಿ ಇದು 64MP ಸೆನ್ಸಾರ್‌ನ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಬ್ಲ್ಯಾಕ್, ಬ್ಲೂ ಮತ್ತು ಗ್ರೇ ಕಲರ್ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶಿಸಿದೆ. ಹಾಗಾದರೇ ಫಿಲಿಪ್ಸ್ S7221 5G ಸ್ಮಾರ್ಟ್‌ಫೋನ್ ಬೆಲೆ ಹಾಗೂ ಫೀಚರ್ಸ್ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Jio ಟೆಲಿಕಾಂನ 629 ರೂ.ಗಳ ಪ್ಲಾನಿನಲ್ಲಿ ಸಖತ್ ಪ್ರಯೋಜನ! ಓಟಿಟಿ, ಡೇಟಾ ಜೊತೆಗೆ ಆಕರ್ಷಕ ವ್ಯಾಲಿಡಿಟಿ
Philips S7221 5G ಮೊಬೈಲ್ ಬೆಲೆ ಹಾಗೂ ಲಭ್ಯತೆ
ಫಿಲಿಪ್ಸ್ ಕಂಪನಿಯ ಫಿಲಿಪ್ಸ್ S7221 5G ಮೊಬೈಲ್ ಆಕರ್ಷಕ ಫೀಚರ್ಸ್‌ಗಳೊಂದಿಗೆ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಮೊಬೈಲ್‌ನ 6GB + 128GB ಸ್ಟೋರೇಜ್ ವೇರಿಯಂಟ್ 20,499 ರೂ.ಗಳ ಬೆಲೆಯನ್ನು ಹೊಂದಿದೆ. ಇನ್ನು 8GB + 128GB ಸ್ಟೋರೇಜ್ ವೇರಿಯಂಟ್ 22,499 ರೂ.ಗಳ ಬೆಲೆ ಪಡೆದುಕೊಂಡಿದೆ. ಈ ಫೋನ್ ಬ್ಲ್ಯಾಕ್, ಬ್ಲೂ ಮತ್ತು ಗ್ರೇ ಕಲರ್ ಆಯ್ಕೆ ಪಡೆದುಕೊಂಡಿದೆ. ಅಂದಹಾಗೆ ಈ ಫೋನ್ ಭಾರತದಲ್ಲಿ ಅಮೆಜಾನ್ ಇ ಕಾಮರ್ಸ್ ಮೂಲಕ ಖರೀದಿಗೆ ಲಭ್ಯವಿದೆ.

ಫಿಲಿಪ್ಸ್ S7221 5G ಮೊಬೈಲ್ ಫೀಚರ್ಸ್
ಫಿಲಿಪ್ಸ್ S7221 5G ಮೊಬೈಲ್ 6.67 ಇಂಚಿನ HD LCD ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ 720×1,600 ಪಿಕ್ಸಲ್ ರೆಸಲ್ಯೂಶನ ಸೌಲಭ್ಯ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ-ಕೋರ್ ಸ್ಪ್ರೆಡ್‌ಟ್ರಮ್ T765 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ ಈ ಫೋನ್ ಎರಡು ಭಿನ್ನ ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 16 ನಲ್ಲಿ ಕಾರ್ಯನಿರ್ವಹಿಸುತ್ತದೆ.
ಹಾಗೆಯೇ ಫಿಲಿಪ್ಸ್ S7221 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 64 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 16MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 5,700mAh ಬ್ಯಾಟರಿ ಸಪೋರ್ಟ್ ಹೊಂದಿರುವ ಜೊತೆಗೆ 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದುಕೊಂಡಿದೆ. ಈ ಫೋನ್ ಧೂಳು ಮತ್ತು ಸ್ಪ್ಲಾಶ್ ರಕ್ಷಣೆಗಾಗಿ IP64 ರೇಟಿಂಗ್ ಅನ್ನು ಸಹ ಹೊಂದಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
