10,000mAh ಬ್ಯಾಟರಿ ಸೌಲಭ್ಯದ Vivo S2 FE ಮೊಬೈಲ್ ಸಿಕ್ಕಾಪಟ್ಟೆ ರಿಯಾಯಿತಿಯಲ್ಲಿ ಲಭ್ಯ!
ಫ್ಲಿಪ್‌ಕಾರ್ಟ್‌ನಲ್ಲಿ ವಿವೋ S2 FE ಮೊಬೈಲ್‌ಗೆ ಬಿಗ್ ಆಫರ್
ವಿವೋ S2 FE ಮೊಬೈಲ್ 10,000mAh ಬ್ಯಾಟರಿ ಸೌಲಭ್ಯ ಪಡೆದಿದೆ
ವಿವೋ S2 FE ಸ್ಮಾರ್ಟ್‌ಫೋನ್ ಮೂರು ಆಕರ್ಷಕ ಕಲರ್‌ಗಳಲ್ಲಿ ಲಭ್ಯ

ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಆಯೋಜಿಸಿರುವ ಹಬ್ಬದ ಮಾರಾಟದಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್ ಲಭ್ಯವಿದೆ. ಆ ಪೈಕಿ ವಿವೋ ಕಂಪನಿಯ Vivo S2 FE ಸ್ಮಾರ್ಟ್‌ಫೋನ್ ಸಹ ಸ್ಪೆಷಲ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಆಕ್ಟಾ-ಕೋರ್ 6nm MediaTek Dimensity 7300e 5G ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ 10,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ವಿವೋ S2 FE ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Vivo S2 FE ಮೊಬೈಲ್ ಬೆಲೆಯಲ್ಲಿ ಇಳಿಕೆ
ಮೀಡ್‌ರೇಂಜ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ವಿವೋ S2 FE ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಅತ್ಯುತ್ತಮ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 6GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 65,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್ ಬ್ಯಾಂಕ್ ಆಫರ್‌ಗಳ ಮೂಲಕ 38,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಸ್ಟೆಲ್ಲಾರ್ ಗ್ರೀನ್, ಟೈಟಾನ್ ಬ್ಲ್ಯಾಕ್ ಮತ್ತು ಝೆನ್ ವೈಟ್ ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದು.
ವಿವೋ S2 FE ಮೊಬೈಲ್ ಫೀಚರ್ಸ್
ವಿವೋ S2 FE ಮೊಬೈಲ್ 6.83 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ 2000 nits ವರೆಗಿನ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ-ಕೋರ್ 6nm MediaTek Dimensity 7300e 5G ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 6GB RAM + 128GB ಹಾಗೂ 8GB + 128GB ವೇರಿಯಂಟ್‌ಗಳ ಆಯ್ಕೆಗಳನ್ನು ಒಳಗೊಂಡಿದೆ.
ಹಾಗೆಯೇ ವಿವೋ S2 FE ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಹೊಂದಿದ್ದು, ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್ ಸಾಮರ್ಥ್ಯ ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 10,000mAh ಬ್ಯಾಟರಿ ಸಪೋರ್ಟ್ ಜೊತೆಗೆ 44W ವೈರ್ಡ್ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ.
Manthesh B
Manthesh B ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.
View full profile
