ಅಗ್ಗದ ಬೆಲೆಯ POCO C75 5G ಮೊಬೈಲ್‌ ಈಗ ಇನ್ನಷ್ಟು ಕಡಿಮೆ ಬೆಲೆಯಲ್ಲಿ ಖರೀದಿಗೆ ಲಭ್ಯ!

HIGHLIGHTS

ಫ್ಲಿಪ್‌ಕಾರ್ಟ್‌ ತಾಣದಲ್ಲಿ POCO C75 5G ಮೊಬೈಲ್‌ಗೆ ಭರ್ಜರಿ ಡಿಸ್ಕೌಂಟ್‌

ಪೊಕೊದ ಈ ಮೊಬೈಲ್ Snapdragon 4s Gen 2 ಪ್ರೊಸೆಸರ್‌ ಅನ್ನು ಒಳಗೊಂಡಿದೆ

POCO C75 5G ಮೊಬೈಲ್‌ 13MP ಸೆನ್ಸಾರ್ ಕ್ಯಾಮೆರಾ ಸೌಲಭ್ಯ ಹೊಂದಿದೆ

ಅಗ್ಗದ ಬೆಲೆಯ POCO C75 5G ಮೊಬೈಲ್‌ ಈಗ ಇನ್ನಷ್ಟು ಕಡಿಮೆ ಬೆಲೆಯಲ್ಲಿ ಖರೀದಿಗೆ ಲಭ್ಯ!

ಜನಪ್ರಿಯ ಪೊಕೊ ಕಂಪನಿಯ ಅಗ್ಗದ ದರದ POCO C75 5G ಮೊಬೈಲ್‌ ಈಗ ಇನ್ನಷ್ಟು ಅಗ್ಗದ ಬೆಲೆಗೆ ಲಭ್ಯವಿದೆ. ಹೌದು, ಪ್ರಸ್ತುತ ಈ ಸ್ಮಾರ್ಟ್‌ಫೋನ್‌ Flipkart ವೆಬ್‌ಸೈಟ್‌ ನಲ್ಲಿ ಭರ್ಜರಿ ಬೆಲೆ ಇಳಿಕೆ ಕಂಡಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಸಹ ಪಡೆಯಲು ಅವಕಾಶ ಇದೆ. ಪೊಕೊ ಕಂಪನಿಯ ಈ ಮೊಬೈಲ್‌ Snapdragon 4s Gen 2 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದ್ದು ಇದರೊಂದಿಗೆ 50MP ಸಾಮರ್ಥ್ಯದ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಹಾಗೆಯೇ ಈ ಮೊಬೈಲ್‌ ಆಕರ್ಷಕ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಹಾಗಾದರೆ Flipkart ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ POCO C75 5G ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Vi ಗ್ರಾಹಕರೇ ಗಮನಿಸಿ! ಈ ಬಜೆಟ್‌ ಬೆಲೆಯ ಪ್ಲಾನ್‌ಗಳಲ್ಲಿ ಡೇಟಾ ಜೊತೆಗೆ ಅತ್ಯುತ್ತಮ ವ್ಯಾಲಿಡಿಟಿ

POCO C75 5G ಮೊಬೈಲ್‌ಗೆ ಭಾರೀ ಡಿಸ್ಕೌಂಟ್‌

ಪೊಕೊ ಸಂಸ್ಥೆಯ POCO C75 5G ಮೊಬೈಲ್‌ ಪ್ರಸ್ತುತ Flipkart ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಭಾರೀ ಡಿಸ್ಕೌಂಟ್‌ ಪಡೆದಿದೆ. ಈ ಮೊಬೈಲ್‌ 4GB RAM + 64GB ವೇರಿಯಂಟ್‌ ಬೆಲೆ 10,999 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಫೋನ್‌ 8,499 ರೂಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ ಗ್ರಾಹಕರು Flipkart Axis ಕ್ರೆಡಿಟ್‌ ಕಾರ್ಡ್‌ ಮೂಲಕ ಖರೀದಿಸಿದರೆ ಹೆಚ್ಚುವರಿಯಾಗಿ 425 ರೂಗಳ ಡಿಸ್ಕೌಂಟ್‌ ಪಡೆಯಬಹುದಾಗಿದೆ. ಅಂದಹಾಗೆ ಈ ಫೋನ್‌ Enchanted Green, Aqua Bliss ಮತ್ತು Silver Stardust ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.

POCO C75 5G

POCO C75 5G ಮೊಬೈಲ್‌ನ ಪ್ರಮುಖ ಫೀಚರ್ಸ್‌ ಹೀಗಿವೆ

POCO C75 5G ಮೊಬೈಲ್‌ ಡಿಸ್‌ಪ್ಲೇಯು 6.88 ಇಂಚಿನ FHD+ ಮಾದರಿ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 120Hz ರಿಫ್ರೆಶ್‌ ರೇಟ್‌ ಹೊಂದಿದ್ದು ಜೊತೆಗೆ 600 nits ಬ್ರೈಟ್ನೆಸ್‌ ಸಪೋರ್ಟ್‌ ಪಡೆದಿದೆ. ಇನ್ನು ಈ ಮೊಬೈಲ್‌ Snapdragon 4s Gen 2 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಈ ಫೋನ್‌ 4GB RAM + 64GB ವೇರಿಯಂಟ್‌ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ಮೈಕ್ರೋಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಪಡೆದಿದೆ.

ಅಲ್ಲದೇ POCO C75 5G ಮೊಬೈಲ್‌ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಅನ್ನು ಒಳಗೊಂಡಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್‌ 13MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇನ್ನು ಈ ಫೋನ್‌ 5160mAh  ಬ್ಯಾಟರಿ ಜೊತೆಗೆ 18W  ಫಾಸ್ಟ್‌ ಚಾರ್ಜಿಂಗ್‌ ಬೆಂಬಲ ಪಡೆದಿದೆ. ಅಲ್ಲದೇ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್, AI ಫೇಸ್ ಅನ್‌ಲಾಕ್ ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಆಯ್ಕೆಗಳನ್ನು ಒಳಗೊಂಡಿದೆ. ಅಲ್ಲದೆ ಇದು ಡಾಲ್ಬಿ ಅಟ್ಮಾಸ್‌ನೊಂದಿಗೆ ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳನ್ನು ಹೊಂದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo