Digit.in

ಅಗ್ಗದ ಬೆಲೆಯ Poco C81 ಸಂಸ್ಥೆಯ ಈ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

Highlights

ಫ್ಲಿಪ್‌ಕಾರ್ಟ್‌ನಲ್ಲಿ ಪೊಕೊ C81 ಮೊಬೈಲ್‌ಗೆ ಬಿಗ್ ಆಫರ್‌

ಪೊಕೊ C81 ಮೊಬೈಲ್‌ 6,300mAh ಬ್ಯಾಟರಿ ಸೌಲಭ್ಯ ಪಡೆದಿದೆ

ಪೊಕೊ C81 ಸ್ಮಾರ್ಟ್‌ಫೋನ್‌ ಮೂರು ಆಕರ್ಷಕ ಕಲರ್‌ಗಳಲ್ಲಿ ಲಭ್ಯ

ಅಗ್ಗದ ಬೆಲೆಯ Poco C81 ಸಂಸ್ಥೆಯ ಈ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

Flipkart Big Bang Diwali Sale: ಫ್ಲಿಪ್‌ಕಾರ್ಟ್‌ ಆಯೋಜಿಸಿರುವ ಹಬ್ಬದ ಮಾರಾಟದಲ್ಲಿ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ಪೊಕೊ ಕಂಪನಿಯ Poco C81 ಸ್ಮಾರ್ಟ್‌ಫೋನ್‌ ಸಹ ಸ್ಪೆಷಲ್ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ ಆಕ್ಟಾ ಕೋರ್ ಯುನಿಸಾಕ್ T7250 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 6,300mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಪೊಕೊ C81‌ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Poco C81 ಮೊಬೈಲ್ ಬೆಲೆಯಲ್ಲಿ ಇಳಿಕೆ

ಅಗ್ಗದ ಬೆಲೆ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿರುವ ಪೊಕೊ C81 ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಅತ್ಯುತ್ತಮ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 4GB RAM + 64GB ಸ್ಟೋರೇಜ್ ವೇರಿಯಂಟ್‌ ಬೆಲೆ 19,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ ಬ್ಯಾಂಕ್‌ ಆಫರ್‌ಗಳ ಮೂಲಕ 12,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಸನ್‌ಸೆಟ್‌ ಗೋಲ್ಡ್‌, ಇಲೈಟ್‌ ಬ್ಲ್ಯಾಕ್‌ ಹಾಗೂ ಸ್ಕೈ ಬ್ಲೂ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದು.

POCO C81

ಪೊಕೊ C81 ಮೊಬೈಲ್‌ ಫೀಚರ್ಸ್‌ ಹೀಗಿವೆ

ಪೊಕೊ C81 ಫೋನ್‌ 6.9 ಇಂಚಿನ HD+ ಡಿಸ್‌ಪ್ಲೇ ರಚನೆ ಪಡೆದಿದ್ದು, 720 x 1,600 ಪಿಕ್ಸೆಲ್‌ ರೆಸಲ್ಯೂಶನ್ ಪಡೆದಿದೆ. ಇದಲ್ಲದೇ ಇದರ ಸ್ಕ್ರೀನ್‌ 120Hz ವರೆಗೆ ರಿಫ್ರೆಶ್ ರೇಟ್‌ ಹೊಂದಿದ್ದು, 800 nits ವರೆಗೆ ಗರಿಷ್ಠ ಬ್ರೈಟ್ನೆಸ್‌ ಸಪೋರ್ಟ್‌ ಪಡೆದಿದೆ. ಇದಲ್ಲದೇ ಪೊಕೊ C81 ಫೋನ್‌ ಆಕ್ಟಾ ಕೋರ್ ಯುನಿಸಾಕ್ T7250 ಚಿಪ್‌ಸೆಟ್‌ ಪ್ರೊಸೆಸರ್‌ ಅನ್ನು ಒಳಗೊಂಡಿವೆ.

ಪೊಕೊ C81 ಮೊಬೈಲ್‌ ಡ್ಯುಯಲ್ ಕ್ಯಾಮೆರಾ ರಚನೆ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಪ್ರಾಥಮಿಕ ಕ್ಯಾಮೆರಾವು 13 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಪಡೆದಿದ್ದು, ಮುಂಭಾಗದಲ್ಲಿ 8 ಮೆಗಾಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಹಾಗೆಯೇ ಪೊಕೊ C81 ಮೊಬೈಲ್‌ 6,300mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಜೊತೆಗೆ 15W ಚಾರ್ಜಿಂಗ್ ಮತ್ತು 7.5W ರಿವರ್ಸ್ ವೈರ್ಡ್ ಚಾರ್ಜಿಂಗ್ ಬೆಂಬಲ ಹೊಂದಿದೆ.

Manthesh B

Manthesh B

Manthesh B ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

View full profile