ಇಂದು ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ POCO C81 ಸರಣಿ! ಬಿಗ್ ಬ್ಯಾಟರಿ ಹೈಲೈಟ್
ಈ ಸರಣಿ ಪೊಕೊ C81 ಹಾಗೂ ಪೊಕೊ C81x ಫೋನ್‌ಗಳನ್ನು ಒಳಗೊಂಡಿರಲಿದೆ
ಪೊಕೊ C81 ಮೊಬೈಲ್ ಮೂರು ಆಕರ್ಷಕ ಕಲರ್ ಆಯ್ಕೆಯಲ್ಲಿ ಲಗ್ಗೆ ಇಡಲಿದೆ
ಪೊಕೊ C81x ಫೋನ್ ಎರಡು ಬೊಂಬಾಟ್ ಬಣ್ಣಗಳ ಆಯ್ಕೆಯನ್ನು ಒಳಗೊಂಡಿರಲಿದೆ
ಜನಪ್ರಿಯ ಪೊಕೊ ಮೊಬೈಲ್ ಸಂಸ್ಥೆಯ ಬಹುನಿರೀಕ್ಷಿತ POCO C81 series ಇಂದು (ಏಪ್ರಿಲ್ 23 ರಂದು) ದೇಶಿಯ ಮಾರುಕಟ್ಟೆಗೆ ಅಧಿಕೃತವಾಗಿ ಲಾಂಚ್ ಆಗಲಿದೆ. ಈ ನೂತನ ಸರಣಿಯು ಪೊಕೊ C81 ಹಾಗೂ ಪೊಕೊ C81x ಸ್ಮಾರ್ಟ್‌ಫೋನ್ ಮಾಡೆಲ್‌ಗಳನ್ನು ಒಳಗೊಂಡಿರಲಿದೆ. ಇನ್ನು ಈ ಸರಣಿಯ ಲಾಂಚ್ ಕುರಿತು Flipkart ತಾಣದಲ್ಲಿ ಮೀಸಲಾದ ಮೈಕ್ರೋಸೈಟ್ ಈಗಾಗಲೇ ಲೈವ್ ಆಗಿದೆ. ಪೊಕೊ C81 ಮೊಬೈಲ್ 6,300mAh ಬ್ಯಾಟರಿ ಬ್ಯಾಕ್‌ಅಪ್ ಹೊಂದಿರಲಿದ್ದು, ಅದೇ ರೀತಿ ಪೊಕೊ C81x ಮೊಬೈಲ್ 5,200mAh ಬ್ಯಾಟರಿ ಪವರ್ ಒಳಗೊಂಡಿರಲಿದೆ. ಈ ಎರಡು ಮೊಬೈಲ್‌ಗಳು ಆಕರ್ಷಕ ಕಲರ್ ಆಯ್ಕೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಡಲಿವೆ. ಹಾಗಾದರೆ ಪೊಕೊ C81 ಹಾಗೂ ಪೊಕೊ C81x ಫೋನ್‌ಗಳ ನಿರೀಕ್ಷಿತ ಫೀಚರ್ಸ್ ಹಾಗೂ ಬೆಲೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : RBI New Rule: OTP ಇಲ್ಲದೆ ಬಿಲ್ ಪಾವತಿ ಸಾಧ್ಯ! ಚಂದಾದಾರಿಕೆಗಳ ಬಿಲ್ ಪಾವತಿಗೆ ಹೊಸ ವ್ಯವಸ್ಥೆ
POCO C81 ಮತ್ತು Poco C81x ಇಂದು ಲಾಂಚ್
ಪೊಕೊ ಕಂಪನಿಯ ಪೊಕೊ C81 ಹಾಗೂ ಪೊಕೊ C81x ಸ್ಮಾರ್ಟ್‌ಫೋನ್‌ಗಳು ಅಗ್ಗದ ಬೆಲೆಯ ವಿಭಾಗದಲ್ಲಿ ಮಾರುಕಟ್ಟೆ ಪ್ರವೇಶಿಸಲಿವೆ. ಈ ಸರಣಿಯು ಇಂದು (ಏಪ್ರಿಲ್ 23 ರಂದು) ಮಧ್ಯಾಹ್ನ 12 ಗಂಟೆಗೆ ಭಾರತೀಯ ಮಾರುಕಟ್ಟೆಗೆ ಬಿಡುಗಡೆ ಆಗಲಿದೆ. ಈ ಮೊಬೈಲ್‌ಗಳ ಬೆಲೆ ಸುಮಾರು 12,000 ರೂ.ಗಳ ಆಸುಪಾಸಿನಲ್ಲಿ ಇರಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಪೊಕೊ C81 ಫೋನ್ ಸನ್‌ಸೆಟ್ ಗೋಲ್ಡ್, ಇಲೈಟ್ ಬ್ಲ್ಯಾಕ್ ಹಾಗೂ ಸ್ಕೈ ಬ್ಲೂ ಕಲರ್ ಆಯ್ಕೆ ಪಡೆದಿರಲಿದೆ. ಹಾಗೆಯೇ ಪೊಕೊ C81x ಸ್ಮಾರ್ಟ್‌ಫೋನ್ ಕ್ರಿಸ್ಟಲ್ ಬ್ಲ್ಯಾಕ್ ಹಾಗೂ ಐಸ್ ಬ್ಲೂ ಕಲರ್ ಆಯ್ಕೆ ಒಳಗೊಂಡಿರಲಿದೆ.

ಪೊಕೊ C81 ಸರಣಿಯ ಫೀಚರ್ಸ್ ಮಾಹಿತಿ
ಈ ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ರೇಟ್ ಸಪೋರ್ಟ್ ಒಳಗೊಂಡ 6.9 ಇಂಚಿನ HD+ LCD ಡಿಸ್‌ಪ್ಲೇ ರಚನೆ ಅನ್ನು ಪಡೆದಿರುವ ಸಾಧ್ಯತೆಗಳು ಇವೆ. ಅಲ್ಲದೇ ಈ ಮೊಬೈಲ್ ಯುನಿಸಾಕ್ T7250 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕಾರ್ಯನಿರ್ವಹಿಸುವ ನಿರೀಕ್ಷೆಗಳು ಇವೆ. ಇದಕ್ಕೆ ಪೂರಕವಾಗಿ ಶಿಯೋಮಿ ಹೈಪರ್‌ಓಎಸ್ 3 ಜೊತೆಗೆ ಆಂಡ್ರಾಯ್ಡ್ 16 ಓಎಸ್ ಸಪೋರ್ಟ್ ಪಡೆದಿರಲಿದೆ. ಇದರೊಂದಿಗೆ ಫೋನ್ ಹಿಂಭಾಗದಲ್ಲಿ 13MP ಕ್ಯಾಮೆರಾ ಸೆನ್ಸಾರ್ ಒಳಗೊಂಡಿರಲಿದೆ ಎನ್ನಲಾಗಿದೆ.
ಪೊಕೊ C81x ಮೊಬೈಲ್ 5,200mAh ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿರುವುದು ಬಹುತೇಕ ಖಚಿತ ಆಗಿದೆ. ಇದರೊಂದಿಗೆ 15W ಚಾರ್ಜಿಂಗ್ ಮತ್ತು 7.5W ರಿವರ್ಸ್ ವೈರ್ಡ್ ಚಾರ್ಜಿಂಗ್ ಸೌಲಭ್ಯ ಇರುವ ಸಾಧ್ಯತೆಗಳು ಇವೆ. ಹಾಗೆಯೇ ಪೊಕೊ C81 ಮೊಬೈಲ್ 6,300mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಜೊತೆಗೆ 15W ಚಾರ್ಜಿಂಗ್ ಮತ್ತು 7.5W ರಿವರ್ಸ್ ವೈರ್ಡ್ ಚಾರ್ಜಿಂಗ್ ಬೆಂಬಲ ಹೊಂದಿರಲಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile