ಪೊಕೊ ಮೊಬೈಲ್ ಕಂಪನಿಯ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಲಿಸ್ಟ್‌ನಲ್ಲಿ ಗುರುತಿಸಿಕೊಂಡಿರುವ POCO C85 5G ಮೊಬೈಲ್ ಕ್ಯಾಮೆರಾ, ಬ್ಯಾಟರಿ ಸೇರಿದಂತೆ ಆಕರ್ಷಕ ಫೀಚರ್ಸ್‌ಗಳ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ಆಫರ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 50MP ಸೆನ್ಸಾರ್ ಕ್ಯಾಮೆರಾ ರಚನೆ ಸಹ ಪಡೆದಿದೆ. ಅಲ್ಲದೇ ಮೊಬೈಲ್ ಆಕರ್ಷಕ ಕಲರ್ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಪೊಕೊ C85 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Samsung Galaxy M56 5G ಖರೀದಿಸಲು ಇದು ಬೆಸ್ಟ್ ಟೈಮ್! ಈ ಆಫರ್‌ಗೆ ನೀವು ಫಿದಾ ಆಗ್ತೀರಾ
ಆಕರ್ಷಕ ಫೀಚರ್ಸ್‌ಗಳ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ಪೊಕೊ ಮೊಬೈಲ್ ಕಂಪನಿಯ ಪೊಕೊ C85 5G ಮೊಬೈಲ್ ಫ್ಲಿಪ್‌ಕಾರ್ಟ್‌ನಲ್ಲಿ ಇ ಕಾಮರ್ಸ್ ತಾಣದಲ್ಲಿ ಭಾರೀ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 4GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 20,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 14,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದರ ಜೊತೆಗೆ ಗ್ರಾಹಕರಿಗೆ ಆಕರ್ಷಕ EMI ಆಯ್ಕೆಗಳು ಸಹ ಸಿಗುತ್ತವೆ. ಇನ್ನು ಈ ಮೊಬೈಲ್ ಆಕರ್ಷಕ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ.
ಪೊಕೊ C85 5G ಮೊಬೈಲ್ 6.9 ಇಂಚಿನ HD+ ಪ್ಯಾನೆಲ್ ಡಿಸ್‌ಪ್ಲೇ ಪಡೆದುಕೊಂಡಿದೆ. ಹಾಗೆಯೇ ಇದು 120Hz ರಿಫ್ರೆಶ್ ರೇಟ್ ಪಡೆದುಕೊಂಡಿದ್ದು 810 nits ಗರಿಷ್ಠ ಬ್ರೈಟ್ನೆಸ್ ಬೆಂಬಲ ಹೊಂದಿದೆ. ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 4GB RAM + 128GB, 6GB RAM + 128GB ಹಾಗೂ 8GB RAM + 128GB ಸ್ಟೋರೇಜ್ ಆಯ್ಕೆಗಳನ್ನು ಪಡೆದುಕೊಂಡಿದೆ. ಇನ್ನು ಈ ಮೊಬೈಲ್ 6,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದುಕೊಂಡಿದ್ದು ಇದಕ್ಕೆ ಪೂರಕವಾಗಿ 33W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 10W ವೈರ್ಡ್ ರಿವರ್ಸ್ ಚಾರ್ಜಿಂಗ್ ಒಳಗೊಂಡಿದೆ.
ಹಾಗೆಯೇ ಪೊಕೊ C85 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಇದರ ಮೊದಲ ಕ್ಯಾಮೆರಾ 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ ಮತ್ತು ಸೆಕೆಂಡರಿ ಕ್ಯಾಮೆರಾ ಬೇಸಿಕ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್ 8MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಹಾಗೆಯೇ ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ ಈ ಮೊಬೈಲ್ IP64 ರೇಟಿಂಗ್ ಅನ್ನು ಸಹ ಪಡೆದುಕೊಂಡಿದೆ.