ಬಜೆಟ್‌ ದರದ POCO C85 5G ಮೊಬೈಲ್‌ ಬೆಲೆಯಲ್ಲಿ ಈಗ ಆಕರ್ಷಕ ಡಿಸ್ಕೌಂಟ್‌!

HIGHLIGHTS

ಪೊಕೊ C85 5G ಮೊಬೈಲ್‌ ದರದಲ್ಲಿ ಭಾರೀ ಡಿಸ್ಕೌಂಟ್‌

ಪೊಕೊ C85 5G ಫೋನ್‌ ಡ್ಯುಯಲ್‌ ಕ್ಯಾಮೆರಾ ರಚನೆ ಹೊಂದಿದೆ

ಪೊಕೊ ಸಂಸ್ಥೆಯ ಈ ಫೋನ್‌ 6,000mAh ಬ್ಯಾಟರಿ ಸೌಲಭ್ಯ ಪಡೆದುಕೊಂಡಿದೆ

ಜನಪ್ರಿಯ ಪೊಕೊ ಸ್ಮಾರ್ಟ್‌ಫೋನ್‌ ಬ್ರಾಂಡ್‌ನ POCO C85 5G ಸ್ಮಾರ್ಟ್‌ಫೋನ್‌ ಈಗಾಗಲೇ ಮಾರುಕಟ್ಟೆಯಲ್ಲಿ ಗಮನ ಸೆಳೆದಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಬೊಂಬಾಟ್‌ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇದಲ್ಲದೇ ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಫೋನ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಸಹ ಪಡೆದಿದೆ. ಇನ್ನು ಈ ಮೊಬೈಲ್‌ ಆಕರ್ಷಕ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಪೊಕೊ C85 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Jio ಟೆಲಿಕಾಂನ ಈ Postpaid ಯೋಜನೆಯಲ್ಲಿ 100GB ಡೇಟಾ ಜೊತೆಗೆ OTT ಸೌಲಭ್ಯ

POCO C85 5G ಮೊಬೈಲ್‌ ಬೆಲೆಯಲ್ಲಿ ಸಖತ್ ಇಳಿಕೆ

ಬಜೆಟ್ ಬೆಲೆಯಲ್ಲಿ ಜೊತೆಗೆ ಕೆಲವು ಆಕರ್ಷಕ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿರುವ ಪೊಕೊ C85 5G ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಬೊಂಬಾಟ್‌ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 8GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 16,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 16,899 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಅಲ್ಲದೇ ಆಕರ್ಷಕ ಇಎಮ್‌ಐ ಆಯ್ಕೆಗಳನ್ನು ಪಡೆಯಬಹುದು.

ಪೊಕೊ C85 5G ಮೊಬೈಲ್‌ ಫೀಚರ್ಸ್‌ ಹೀಗಿವೆ

ಪೊಕೊ C85 5G ಮೊಬೈಲ್‌ 6.9 ಇಂಚಿನ HD+ ಪ್ಯಾನೆಲ್ ಡಿಸ್‌ಪ್ಲೇ ಪಡೆದುಕೊಂಡಿದೆ. ಹಾಗೆಯೇ ಇದು 120Hz ರಿಫ್ರೆಶ್ ರೇಟ್‌ ಪಡೆದುಕೊಂಡಿದ್ದು 810 nits ಗರಿ‍ಷ್ಠ ಬ್ರೈಟ್ನೆಸ್‌ ಬೆಂಬಲ ಹೊಂದಿದೆ. ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 4GB RAM + 128GB, 6GB RAM + 128GB ಹಾಗೂ 8GB RAM + 128GB ಸ್ಟೋರೇಜ್‌ ಆಯ್ಕೆಗಳನ್ನು ಪಡೆದುಕೊಂಡಿದೆ. ಇನ್ನು ಈ ಮೊಬೈಲ್‌ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದ್ದು ಇದಕ್ಕೆ ಪೂರಕವಾಗಿ 33W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 10W ವೈರ್ಡ್ ರಿವರ್ಸ್ ಚಾರ್ಜಿಂಗ್ ಒಳಗೊಂಡಿದೆ.

ಹಾಗೆಯೇ ಪೊಕೊ C85 5G ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದುಕೊಂಡಿದೆ. ಇದರ ಮೊದಲ ಕ್ಯಾಮೆರಾ 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ ಮತ್ತು ಸೆಕೆಂಡರಿ ಕ್ಯಾಮೆರಾ ಬೇಸಿಕ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್‌ 8MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಹಾಗೆಯೇ ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ ಈ ಮೊಬೈಲ್‌ IP64 ರೇಟಿಂಗ್ ಅನ್ನು ಸಹ ಪಡೆದುಕೊಂಡಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :