ಬಜೆಟ್‌ ಬೆಲೆಯ POCO C85 5G ಫೋನ್‌ ಈಗ ಇನ್ನಷ್ಟು ರಿಯಾಯಿತಿಯಲ್ಲಿ ಲಭ್ಯ

HIGHLIGHTS

ಪೊಕೊ C85 5G ಸ್ಮಾರ್ಟ್‌ಫೋನ್‌ ಈಗ ಬಿಗ್ ಆಫರ್‌ನಲ್ಲಿ ಲಭ್ಯ

ಈ ಮೊಬೈಲ್‌ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಅನ್ನು ಪಡೆದಿದೆ

ಈ ಫೋನ್‌ ಮೀಡಿಯಾಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್‌ ಹೊಂದಿದೆ

ಪೊಕೊ ಕಂಪನಿಯ POCO C85 5G ಮೊಬೈಲ್‌ ಆಕರ್ಷಕ ಫೀಚರ್ಸ್‌ಗಳ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಪ್ರಸ್ತುತ ಈ ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಆಕರ್ಷಕ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ 6,000mAh ಸಿಲಿಕಾನ್‌ ಕಾರ್ಬನ್‌ ಬ್ಯಾಟರಿ ಸಹ ಪಡೆದಿದೆ. ಅಲ್ಲದೇ ಈ ಫೋನ್‌ ಮೈಸ್ಟಿಕ್ ಪರ್ಪಲ್, ಸ್ಪ್ರಿಂಗ್ ಗ್ರೀನ್ ಹಾಗೂ ಪವರ್‌ ಬ್ಲ್ಯಾಕ್‌ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಪೊಕೊ C85 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ Vivo T5 Pro 5G ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

POCO C85 5G ಮೊಬೈಲ್‌ಗೆ ಬಿಗ್‌ ಆಫರ್‌

ಬಜೆಟ್‌ ದರದಲ್ಲಿ ಉತ್ತಮ ಫೀಚರ್ಸ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿರುವ ಪೊಕೊ C85 5G ಸ್ಮಾರ್ಟ್‌ಫೋನ್‌ ಸದ್ಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಸಖತ್ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 4GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 20,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 15,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಮೈಸ್ಟಿಕ್ ಪರ್ಪಲ್, ಸ್ಪ್ರಿಂಗ್ ಗ್ರೀನ್ ಹಾಗೂ ಪವರ್‌ ಬ್ಲ್ಯಾಕ್‌ ಬಣ್ಣಗಳ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ.

ಪೊಕೊ C85 5G ಮೊಬೈಲ್‌ ಫೀಚರ್ಸ್‌ ಹೀಗಿವೆ

ಪೊಕೊದ ಈ ಮೊಬೈಲ್‌ 6.9 ಇಂಚಿನ HD+ ಡಿಸ್‌ಪ್ಲೇ ಹೊಂದಿದ್ದು, 120Hz ರಿಫ್ರೆಶ್‌ ರೇಟ್‌ ಸಪೋರ್ಟ್‌ ಜೊತೆಗೆ ಸ್ಮೂತ್‌ ಸ್ಕ್ರೋಲಿಂಗ್ ಅನುಭವ ನೀಡಲಿದೆ. ಇದರ ಜೊತೆಗೆ 810 nits ಗರಿಷ್ಠ ಬ್ರೈಟ್‌ನೆಸ್‌ ಹೊಂದಿರುವುದರಿಂದ ಹೊರಾಂಗಣ ಬಳಕೆಯಲ್ಲಿಯೂ ಉತ್ತಮ ವೀಕ್ಷಣಾ ಅನುಭವ ಸಿಗಲಿದೆ. ಈ ಮೊಬೈಲ್‌ನಲ್ಲಿ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್‌ ನೀಡಲಾಗಿದೆ. ಇದರಿಂದ ದಿನನಿತ್ಯದ ಕಾರ್ಯಗಳು ಹಾಗೂ ಗೇಮಿಂಗ್‌ ಅನುಭವ ಉತ್ತಮವಾಗಿರಲಿದೆ. ಈ ಫೋನ್‌ 4GB RAM + 128GB, 6GB RAM + 128GB ಮತ್ತು 8GB RAM + 128GB ಸ್ಟೋರೇಜ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ಪೊಕೊ C85 5G ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಪವರ್ ಹೊಂದಿದ್ದು, ದೀರ್ಘಕಾಲ ಬಳಕೆ ಮಾಡಲು ಅನುಕೂಲವಾಗಲಿದೆ. ಇದಕ್ಕೆ ಪೂರಕವಾಗಿ 33W ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್‌ ಇದೆ. ಹಾಗೆಯೇ 10W ರಿವರ್ಸ್‌ ವೈರ್ಡ್‌ ಚಾರ್ಜಿಂಗ್‌ ಸೌಲಭ್ಯವೂ ನೀಡಲಾಗಿದೆ. ಈ ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದುಕೊಂಡಿದೆ. ಇದರ ಮುಖ್ಯ ಕ್ಯಾಮೆರಾ 50MP ಸೆನ್ಸಾರ್‌ ಸಾಮರ್ಥ್ಯದಲ್ಲಿದ್ದು, ಉತ್ತಮ ಫೋಟೋಗಳನ್ನು ಸೆರೆಹಿಡಿಯಲು ನೆರವಾಗಲಿದೆ. ಜೊತೆಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ 8MP ಫ್ರಂಟ್‌ ಕ್ಯಾಮೆರಾ ಕೂಡ ಇದೆ. ಇದಲ್ಲದೆ ಧೂಳು ಮತ್ತು ಸ್ಪ್ಲಾಶ್ ರಕ್ಷಣೆಗಾಗಿ IP64 ರೇಟಿಂಗ್‌ ಸಹ ನೀಡಲಾಗಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :