POCO C85 5G ಮೊಬೈಲ್ ಅಮೆಜಾನ್ ತಾಣದಲ್ಲಿ ಬೊಂಬಾಟ್ ಡಿಸ್ಕೌಂಟ್‌ನಲ್ಲಿ ಲಭ್ಯ!
ಪೊಕೊ C85 ಸ್ಮಾರ್ಟ್‌ಫೋನ್ ಈಗ ಭರ್ಜರಿ ರಿಯಾಯಿತಿಯಲ್ಲಿ ಲಭ್ಯ
ಪೊಕೊ C85 ಫೋನ್ 6,000mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದೆ
ಪೊಕೊ C85 ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್ ಹೊಂದಿದೆ
ಪ್ರಮುಖ ಇ ಕಾಮರ್ಸ್ ತಾಣ ಅಮೆಜಾನ್ ಪ್ಲಾಟ್‌ಫಾರ್ಮ್‌ನಲ್ಲಿ ಪೊಕೊ ಕಂಪನಿಯ POCO C85 5G ಸ್ಮಾರ್ಟ್‌ಫೋನ್ ಸಖತ್ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 6,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್ ಅನ್ನು ಮಿಸ್ಟಿಕ್ ಪರ್ಪಲ್, ಸ್ಪ್ರಿಂಗ್ ಗ್ರೀನ್ ಹಾಗೂ ಪವರ್ ಬ್ಲ್ಯಾಕ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಪೊಕೊ C85 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Independence Day 2026: AI ಬಳಸಿ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಪೋಸ್ಟರ್ ರಚಿಸಲು ಹೀಗೆ ಮಾಡಿ
POCO C85 5G ಬೆಲೆಯಲ್ಲಿ ಸಖತ್ ಇಳಿಕೆ
ಆಕರ್ಷಕ ಬೆಲೆ ಹಾಗೂ ಫೀಚರ್ಸ್ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ಪೊಕೊ C85 5G ಮೊಬೈಲ್ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಸಖತ್ ರಿಯಾಯಿತಿ ಪಡೆದುಕೊಂಡಿದೆ. ಈ ಮೊಬೈಲ್ 4GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 20,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 15,329 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಫೋನ್ ಅನ್ನು ಮಿಸ್ಟಿಕ್ ಪರ್ಪಲ್, ಸ್ಪ್ರಿಂಗ್ ಗ್ರೀನ್ ಹಾಗೂ ಪವರ್ ಬ್ಲ್ಯಾಕ್ ಕಲರ್ ಆಯ್ಕೆಯಲ್ಲಿ ಖರೀದಿಸಬಹುದು.

ಪೊಕೊ C85 5G ಮೊಬೈಲ್ ಫೀಚರ್ಸ್ ಹೀಗಿವೆ
ಪೊಕೊ C85 5G ಮೊಬೈಲ್ 6.9 ಇಂಚಿನ HD+ ಪ್ಯಾನೆಲ್ ಡಿಸ್‌ಪ್ಲೇ ಪಡೆದುಕೊಂಡಿದೆ. ಹಾಗೆಯೇ ಇದು 120Hz ರಿಫ್ರೆಶ್ ರೇಟ್ ಪಡೆದುಕೊಂಡಿದ್ದು 810 nits ಗರಿಷ್ಠ ಬ್ರೈಟ್ನೆಸ್ ಬೆಂಬಲ ಹೊಂದಿದೆ. ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 4GB RAM + 128GB, 6GB RAM + 128GB ಹಾಗೂ 8GB RAM + 128GB ಸ್ಟೋರೇಜ್ ಆಯ್ಕೆಗಳನ್ನು ಪಡೆದುಕೊಂಡಿದೆ. ಇನ್ನು ಈ ಮೊಬೈಲ್ 6,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದುಕೊಂಡಿದ್ದು ಇದಕ್ಕೆ ಪೂರಕವಾಗಿ 33W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 10W ವೈರ್ಡ್ ರಿವರ್ಸ್ ಚಾರ್ಜಿಂಗ್ ಒಳಗೊಂಡಿದೆ.
ಹಾಗೆಯೇ ಪೊಕೊ C85 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಇದರ ಮೊದಲ ಕ್ಯಾಮೆರಾ 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ ಮತ್ತು ಸೆಕೆಂಡರಿ ಕ್ಯಾಮೆರಾ ಬೇಸಿಕ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್ 8MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಹಾಗೆಯೇ ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ ಈ ಮೊಬೈಲ್ IP64 ರೇಟಿಂಗ್ ಅನ್ನು ಸಹ ಪಡೆದುಕೊಂಡಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
