poco c85 5g first sale today in India via Flipkart offer specs camera battery
ನೀವು ಹೊಸ ಸ್ಮಾರ್ಟ್ ಫೋನ್ ಖರೀದಿಸಲು ಯೋಜಿಸುತ್ತಿದ್ದರೆ ಇಂದು ಹೊಸ POCO C85 5G ಮೊದಲ ಮಾರಾಟಕ್ಕೆ ಬರಲಿದೆ. ಇದನ್ನು ಪ್ರತ್ಯೇಕವಾಗಿ ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಸಬಹುದು. ಪರಿಚಯಾತ್ಮಕ ಕೊಡುಗೆಯ ಅಡಿಯಲ್ಲಿ ಮಾರಾಟದ ಸಮಯದಲ್ಲಿ ಫೋನ್ ರಿಯಾಯಿತಿಯಲ್ಲಿ ಲಭ್ಯವಿರುತ್ತದೆ. ಕಡಿಮೆ ಬೆಲೆಯಲ್ಲಿ ಅದರ ಪವರ್ಫುಲ್ ವೈಶಿಷ್ಟ್ಯಗಳಿಗಾಗಿ ಫೋನ್ ಸುದ್ದಿಗಳನ್ನು ಮಾಡುತ್ತಿದೆ. ಇದರ ಕಡಿಮೆ ಬೆಲೆಯ ಹೊರತಾಗಿಯೂ ಈ ಫೋನ್ Dimensity 6300 ಪ್ರೊಸೆಸರ್, 6000mAh ಬ್ಯಾಟರಿಯೊಂದಿಗೆ ಪ್ರಬಲವಾದ 50MP ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ. ಇದರ ಮೊದಲ ಮಾರಾಟವು ಇಂದು ಮಧ್ಯಾಹ್ನ 12:00 ಗಂಟೆಗೆ ಪ್ರಾರಂಭವಾಗಲಿದೆ. ಹಾಗಾದರೆ ಮೊದಲ ಮಾರಾಟದಲ್ಲಿ ಫೋನ್ ಎಷ್ಟು ಕಡಿಮೆಯಾಗಲಿದೆ.
POCO C85 5G ಸ್ಮಾರ್ಟ್ಫೋನ್ ಒಟ್ಟಾರೆಯಾಗಿ ಮೂರು ರೂಪಾಂತದರಲ್ಲಿ ಫ್ಲಿಪ್ಕಾರ್ಟ್ ಮೂಲಕ ಲಭ್ಯವಾಗಲಿದ್ದು ಇದರ ಆರಂಭಿಕ 4GB RAM ಮತ್ತು 128GB ಸ್ಟೋರೇಜ್ ರೂಪಾಂತರವನ್ನು ₹11,999 ರೂಗಳಿಗೆ ಮತ್ತು ಇದರ ಮತ್ತೊಂದು 6GB RAM ಮತ್ತು 128GB ಸ್ಟೋರೇಜ್ ರೂಪಾಂತರವನ್ನು ₹12,999 ರೂಗಳಿಗೆ ಮತ್ತು ಕೊನೆಯದಾಗಿ ಇದರ 8GB RAM ಮತ್ತು 128GB ಸ್ಟೋರೇಜ್ ರೂಪಾಂತರವನ್ನು ₹14,499 ರೂಗಳಿಗೆ ಪಟ್ಟಿ ಮಾಡಲಾಗಿದೆ. ಸ್ಮಾರ್ಟ್ಫೋನ್ ಬಿಡುಗಡೆಯ ಬೆಲೆಗಿಂತ ಕಡಿಮೆ ಬೆಲೆಗೆ ಅಂದರೆ ಕೇವಲ ₹11,999 ವಿಶೇಷ ಬೆಲೆಯಲ್ಲಿ ಲಭ್ಯವಿದೆ. ಆಯ್ದ ಬ್ಯಾಂಕ್ ಕಾರ್ಡ್‌ಗಳ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಬಳಸಿ EMI ಸೌಲಭ್ಯದೊಂದಿಗೆ 1000 ರೂಗಳ ಹೆಚ್ಚುವರಿ ಕ್ಯಾಶ್‌ಬ್ಯಾಕ್ ಪಡೆಯಬಹುದು. ಅಲ್ಲದೆ ಅನುಕೂಲಕರವಾದ ನೋ ಕಾಸ್ಟ್ EMI ಆಯ್ಕೆಗಳೊಂದಿಗೆ ಲಭ್ಯವಿದೆ.
POCO C85 5G ಸ್ಮಾರ್ಟ್ಫೋನ್ 6.9 ಇಂಚಿನ HD+ (1600× 720 ಪಿಕ್ಸೆಲ್‌ಗಳು) ಡಿಸ್ಪ್ಲೇ ಪೂರ್ತಿ 120Hz ರಿಫ್ರೆಶ್ ರೇಟ್ ಹೊಂದಿದೆ. POCO C85 5G ಫೋನ್ ಕಾಮೆರದಲ್ಲಿ 50MP ಪ್ರೈಮರಿ ಕ್ಯಾಮೆರಾ ಸೆನ್ಸರ್ ಹೊಂದಿದ್ದು AI- ಬೆಂಬಲಿತ ಡ್ಯುಯಲ್ ಕ್ಯಾಮೆರಾ ಹೊಂದಿದೆ. ಸ್ಮಾರ್ಟ್ಫೋನ್ ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ ಮುಂಭಾಗದಲ್ಲಿ 8MP ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ. ಫೋನ್ MediaTek Dimensity 6300 ಪ್ರೊಸೆಸರ್ ಮತ್ತು ಆಂಡ್ರಾಯ್ಡ್ 15 ಆಪರೇಟಿಂಗ್ ಸಿಸ್ಟಮ್ ಜೊತೆಗೆ ColorOS 15.0.2 ಬರುತ್ತದೆ.
POCO C85 5G ಇದರ ಕನೆಕ್ಟಿಂಗ್ ಆಯ್ಕೆಗಳಲ್ಲಿ ಮುಖ್ಯವಾಗಿ Bluetooth, GPS, WiFi, 3.5mm Audio Jack, USB Type C Charge Port, AGPS/GPS, GLONASS, BDS, Galileo ಸೆನ್ಸರ್‌ಗಳನ್ನು ಹೊಂದಿದೆ. ಕೊನೆಯದಾಗಿ POCO C85 5G ಸ್ಮಾರ್ಟ್ಫೋನ್ 6000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ ಮತ್ತು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಅಲ್ಲದೆ ಕಂಪನಿ ಇದರಲ್ಲಿ 2 ವರ್ಷದ ಆಪರೇಟಿಂಗ್ ಸಿಸ್ಟಮ್ ಅಪ್ಡೇಟ್ ಮತ್ತು 3 ವರ್ಷಗಳ ಸೆಕ್ಯೂರಿಟಿ ಅಪ್ಡೇಟ್ ನೀಡುವುದಾಗಿ ಭರವಸೆ ನೀಡಿದೆ.