6,000mAh ಬ್ಯಾಟರಿ ಇರುವ POCO C85 5G ಬೆಲೆಯಲ್ಲಿ ಬೊಂಬಾಟ್‌ ಇಳಿಕೆ!

HIGHLIGHTS

ಪೊಕೊ C85 5G ಸ್ಮಾರ್ಟ್‌ಫೋನ್‌ ಈಗ ಡಿಸ್ಕೌಂಟ್‌ನಲ್ಲಿ ಲಭ್ಯ

ಈ ಸ್ಮಾರ್ಟ್‌ಫೋನ್‌ 6,000mAh ಬ್ಯಾಟರಿ ಸಪೋರ್ಟ್‌ ಪಡೆದುಕೊಂಡಿದೆ

ಪೊಕೊದ ಈ ಫೋನ್ MediaTek Dimensity 6300 ಪ್ರೊಸೆಸರ್‌ ಒಳಗೊಂಡಿದೆ

6,000mAh ಬ್ಯಾಟರಿ ಇರುವ POCO C85 5G ಬೆಲೆಯಲ್ಲಿ ಬೊಂಬಾಟ್‌ ಇಳಿಕೆ!

ಪೊಕೊ ಭಿನ್ನ ಪ್ರೈಸ್‌ ಟ್ಯಾಗ್‌ ರೇಂಜ್‌ನಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಮಾರುಕಟ್ಟೆಯ ಗಮನ ಸೆಳೆದಿದೆ. ಆ ಪೈಕಿ ಸಂಸ್ಥೆಯ C ಸರಣಿಯ ಮೊಬೈಲ್‌ಗಳು ಹೆಚ್ಚು ಸದ್ದು ಮಾಡಿವೆ. ಅವುಗಳ ಪೈಕಿ ಕಂಪನಿಯ POCO C85 5G ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಭಾರೀ ಬೆಲೆ ಇಳಿಕೆ ಪಡೆದುಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್‌ ಮೀಡಿಯಾಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿರುವ ಜೊತೆಗೆ ಈ ಸ್ಮಾರ್ಟ್‌ಫೋನ್ ಮೈಸ್ಟಿಕ್ ಪರ್ಪಲ್, ಸ್ಪ್ರಿಂಗ್ ಗ್ರೀನ್ ಹಾಗೂ ಪವರ್‌ ಬ್ಲ್ಯಾಕ್‌ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಪೊಕೊ C85 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ದುಬಾರಿ ಬೆಲೆಯ Motorola Razr Fold ಸ್ಮಾರ್ಟ್‌ಫೋನ್‌ ಸೇಲ್‌ ಪ್ರಾರಂಭ! ಜಬರ್ದಸ್ತ್ ಫೀಚರ್ಸ್‌

POCO C85 5G ಬೆಲೆಯಲ್ಲಿ ಸಖತ್ ಇಳಿಕೆ

ಪೊಕೊ C85 5G ಮೊಬೈಲ್‌ ಸದ್ಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಆಕರ್ಷಕ ರಿಯಾಯಿತಿ ಪಡೆದಿದೆ. ಈ ಸ್ಮಾರ್ಟ್‌ಫೋನ್‌ 4GB RAM + 128GB ವೇರಿಯಂಟ್‌ ಬೆಲೆ 20,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 13,999 ರೂ.ಗಳ ದರದಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಸಹ ಪಡೆಯಬಹುದಾಗಿದೆ. ಇದರೊಂದಿಗೆ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಗ್ರಾಹಕರು ಈ ಮೊಬೈಲ್‌ ಅನ್ನು ಮೈಸ್ಟಿಕ್ ಪರ್ಪಲ್, ಸ್ಪ್ರಿಂಗ್ ಗ್ರೀನ್ ಹಾಗೂ ಪವರ್‌ ಬ್ಲ್ಯಾಕ್‌ ಕಲರ್‌ ಆಯ್ಕೆಯಲ್ಲಿ ಖರೀದಿ ಮಾಡಬಹುದು.

POCO C85 5g

ಪೊಕೊ C85 5G ಮೊಬೈಲ್‌ ಫೀಚರ್ಸ್‌ ಹೀಗಿವೆ

ಈ ಮೊಬೈಲ್‌ 6.9 ಇಂಚಿನ HD+ ಡಿಸ್‌ಪ್ಲೇ ಹೊಂದಿದ್ದು, 120Hz ರಿಫ್ರೆಶ್‌ ರೇಟ್‌ ಸಪೋರ್ಟ್‌ ಜೊತೆಗೆ ಸ್ಮೂತ್‌ ಸ್ಕ್ರೋಲಿಂಗ್ ಅನುಭವ ನೀಡಲಿದೆ. ಇದರ ಜೊತೆಗೆ 810 nits ಗರಿಷ್ಠ ಬ್ರೈಟ್‌ನೆಸ್‌ ಹೊಂದಿರುವುದರಿಂದ ಹೊರಾಂಗಣ ಬಳಕೆಯಲ್ಲಿಯೂ ಉತ್ತಮ ವೀಕ್ಷಣಾ ಅನುಭವ ಸಿಗಲಿದೆ. ಈ ಮೊಬೈಲ್‌ನಲ್ಲಿ ಮೀಡಿಯಾಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್‌ ನೀಡಲಾಗಿದೆ. ಇದರಿಂದ ದಿನನಿತ್ಯದ ಕಾರ್ಯಗಳು ಹಾಗೂ ಗೇಮಿಂಗ್‌ ಅನುಭವ ಉತ್ತಮವಾಗಿರಲಿದೆ. ಈ ಫೋನ್‌ 4GB RAM + 128GB, 6GB RAM + 128GB ಮತ್ತು 8GB RAM + 128GB ಸ್ಟೋರೇಜ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ಪೊಕೊ C85 5G ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಹೊಂದಿದ್ದು, ದೀರ್ಘಕಾಲ ಬಳಕೆ ಮಾಡಲು ಅನುಕೂಲವಾಗಲಿದೆ. ಇದಕ್ಕೆ ಪೂರಕವಾಗಿ 33W ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್‌ ಇದೆ. ಹಾಗೆಯೇ 10W ರಿವರ್ಸ್‌ ವೈರ್ಡ್‌ ಚಾರ್ಜಿಂಗ್‌ ಸೌಲಭ್ಯವೂ ನೀಡಲಾಗಿದೆ. ಈ ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದುಕೊಂಡಿದೆ. ಇದರ ಮುಖ್ಯ ಕ್ಯಾಮೆರಾ 50MP ಸೆನ್ಸಾರ್‌ ಸಾಮರ್ಥ್ಯದಲ್ಲಿದ್ದು, ಉತ್ತಮ ಫೋಟೋಗಳನ್ನು ಸೆರೆಹಿಡಿಯಲು ನೆರವಾಗಲಿದೆ. ಜೊತೆಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ 8MP ಫ್ರಂಟ್‌ ಕ್ಯಾಮೆರಾ ಕೂಡ ಇದೆ. ಇದಲ್ಲದೆ ಧೂಳು ಮತ್ತು ಸ್ಪ್ಲಾಶ್ ರಕ್ಷಣೆಗಾಗಿ IP64 ರೇಟಿಂಗ್‌ ಸಹ ನೀಡಲಾಗಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile