ಬಜೆಟ್‌ ಬೆಲೆಯ POCO C85 ಮೊಬೈಲ್‌ನ್ನು ಈಗ ಸಖತ್ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಸಬಹುದು!

HIGHLIGHTS

ಫ್ಲಿಪ್‌ಕಾರ್ಟ್‌ ತಾಣದಲ್ಲಿ ಪೊಕೊ C85 ಆಫರ್‌ನಲ್ಲಿ ಲಭ್ಯ

ಪೊಕೊ C85 5G ಮೊಬೈಲ್‌ 6,000mAh ಬ್ಯಾಟರಿ ಪವರ್‌ ಪಡೆದಿದೆ

ಪೊಕೊ C85 5G ಫೋನ್‌ ಮೀಡಿಯಾಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ ಹೊಂದಿದೆ

ಜನಪ್ರಿಯ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್‌ನಲ್ಲಿ ಸ್ಯಾಮ್‌ಸಂಗ್ ಕಂಪನಿಯ POCO C85 ಸ್ಮಾರ್ಟ್‌ಫೋನ್‌ ಸಖತ್ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್‌ ಮೀಡಿಯಾಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ 6,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್‌ ಮೈಸ್ಟಿಕ್ ಪರ್ಪಲ್, ಸ್ಪ್ರಿಂಗ್ ಗ್ರೀನ್ ಹಾಗೂ ಪವರ್‌ ಬ್ಲ್ಯಾಕ್‌ ಕಲರ್ ಆಯ್ಕೆಯಲ್ಲಿ ಸಿಗಲಿದೆ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಪೊಕೊ C85 5G ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Realme P4 Lite 5G ಮೊಬೈಲ್‌ ಈಗ ಆಕರ್ಷಕ ರಿಯಾಯಿತಿ ಬೆಲೆಯಲ್ಲಿ ಲಭ್ಯ!

POCO C85 ಡಿಸ್ಕೌಂಟ್‌ನಲ್ಲಿ ಲಭ್ಯ

ಬಜೆಟ್‌ ದರದಲ್ಲಿ ಆಕರ್ಷಕ ಫೀಚರ್ಸ್‌ಗಳ ಮೂಲಕ ಮೊಬೈಲ್‌ ಪ್ರಿಯರ ಗಮನ ಸೆಳೆದಿರುವ ಪೊಕೊ C85 5G ಮೊಬೈಲ್‌ ಸದ್ಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಬೊಂಬಾಟ್‌ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 4GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 20,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 16,449 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಫೋನ್‌ ಮೈಸ್ಟಿಕ್ ಪರ್ಪಲ್, ಸ್ಪ್ರಿಂಗ್ ಗ್ರೀನ್ ಹಾಗೂ ಪವರ್‌ ಬ್ಲ್ಯಾಕ್‌ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.

POCO C85 5G

ಪೊಕೊ C85 5G ಮೊಬೈಲ್‌ ಫೀಚರ್ಸ್‌ ಮಾಹಿತಿ

ಪೊಕೊ ಕಂಪನಿಯ ಈ ಫೋನ್‌ 6.9 ಇಂಚಿನ HD+ ಡಿಸ್‌ಪ್ಲೇ ಹೊಂದಿದ್ದು, 120Hz ರಿಫ್ರೆಶ್‌ ರೇಟ್‌ ಸಪೋರ್ಟ್‌ ಜೊತೆಗೆ ಸ್ಮೂತ್‌ ಸ್ಕ್ರೋಲಿಂಗ್ ಅನುಭವ ನೀಡಲಿದೆ. ಇದರ ಜೊತೆಗೆ 810 nits ಗರಿಷ್ಠ ಬ್ರೈಟ್‌ನೆಸ್‌ ಪಡೆದಿರುವುದರಿಂದ ಹೊರಾಂಗಣ ಬಳಕೆಯಲ್ಲಿಯೂ ಉತ್ತಮ ವೀಕ್ಷಣಾ ಅನುಭವ ಸಿಗಲಿದೆ. ಈ ಮೊಬೈಲ್‌ನಲ್ಲಿ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್‌ ನೀಡಲಾಗಿದೆ. ಈ ಮೊಬೈಲ್‌ 4GB RAM + 128GB, 6GB RAM + 128GB ಮತ್ತು 8GB RAM + 128GB ಸ್ಟೋರೇಜ್‌ ಆಯ್ಕೆಗಳನ್ನು ಪಡೆದುಕೊಂಡಿದೆ.

ಪೊಕೊ C85 5G ಮೊಬೈಲ್‌ 6,000mAh ಬ್ಯಾಟರಿ ಪವರ್‌ ಹೊಂದಿದ್ದು, ಇದಕ್ಕೆ ಪೂರಕವಾಗಿ 33W ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್‌ ಇದೆ. ಹಾಗೆಯೇ 10W ರಿವರ್ಸ್‌ ವೈರ್ಡ್‌ ಚಾರ್ಜಿಂಗ್‌ ಸೌಲಭ್ಯವೂ ನೀಡಲಾಗಿದೆ. ಈ ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದುಕೊಂಡಿದೆ. ಇದರ ಮುಖ್ಯ ಕ್ಯಾಮೆರಾ 50MP ಸೆನ್ಸಾರ್‌ ಸಾಮರ್ಥ್ಯದಲ್ಲಿದ್ದು, ಉತ್ತಮ ಫೋಟೋಗಳನ್ನು ಸೆರೆಹಿಡಿಯಲು ನೆರವಾಗಲಿದೆ. ಜೊತೆಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ 8MP ಫ್ರಂಟ್‌ ಕ್ಯಾಮೆರಾ ಕೂಡ ಇದೆ. ಇದಲ್ಲದೆ ಧೂಳು ಮತ್ತು ಸ್ಪ್ಲಾಶ್ ರಕ್ಷಣೆಗಾಗಿ IP64 ರೇಟಿಂಗ್‌ ಸಹ ನೀಡಲಾಗಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :