ಅಗ್ಗದ ಬೆಲೆಯ Poco C85x 5G ಮೊಬೈಲ್‌ ಈಗ ಮತ್ತಷ್ಟು ರಿಯಾಯಿತಿ ದರದಲ್ಲಿ ಲಭ್ಯ!

Highlights

ಫ್ಲಿಪ್‌ಕಾರ್ಟ್‌ನಲ್ಲಿ ಪೊಕೊ C85x 5G ಮೊಬೈಲ್‌ಗೆ ಬಿಗ್ ಆಫರ್‌

ಪೊಕೊ C85x 5G ಮೊಬೈಲ್‌ 6,300mAh ಬ್ಯಾಟರಿ ಸೌಲಭ್ಯ ಪಡೆದಿದೆ

ಪೊಕೊ C85x 5G ಸ್ಮಾರ್ಟ್‌ಫೋನ್‌ ಮೂರು ಆಕರ್ಷಕ ಕಲರ್‌ಗಳಲ್ಲಿ ಲಭ್ಯ

ಜನಪ್ರಿಯ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್‌ ಲಭ್ಯವಿದೆ. ಆ ಪೈಕಿ ಪೊಕೊ ಕಂಪನಿಯ Poco C85x 5G ಸ್ಮಾರ್ಟ್‌ಫೋನ್‌ ಸಹ ಸ್ಪೆಷಲ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ Unisoc T8300 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 6,300mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಪೊಕೊ C85x 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Poco C85x 5G ಮೊಬೈಲ್ ಬೆಲೆಯಲ್ಲಿ ಇಳಿಕೆ

ಅಗ್ಗದ ಬೆಲೆ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿರುವ ಪೊಕೊ C85x 5G ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಅತ್ಯುತ್ತಮ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 4GB + 64GB ಸ್ಟೋರೇಜ್ ವೇರಿಯಂಟ್‌ ಬೆಲೆ 20,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ ಬ್ಯಾಂಕ್‌ ಆಫರ್‌ಗಳ ಮೂಲಕ 13,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಬ್ಲ್ಯಾಕ್‌, ಗೋಲ್ಡ್‌ ಹಾಗೂ ಗ್ರೀನ್‌ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದು.

POCO C85x 5G

ಪೊಕೊ C85x 5G ಫೀಚರ್ಸ್‌ ಹೀಗಿವೆ

ಪೊಕೊ C85x 5G ಮೊಬೈಲ್ 6.9 ಇಂಚಿನ HD+ ಅಡಾಪ್ಟಿವ್‌ಸಿಂಕ್ ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್‌ 720x1,600 ಪಿಕ್ಸಲ್‌ ರೆಸಲ್ಯೂಶನನ್ನು ಪಡೆದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದ್ದು 800 nits ಬ್ರೈಟ್ನೆಸ್‌ ಸೌಲಭ್ಯ ನೀಡಲಾಗಿದೆ. ಈ ಫೋನ್ Unisoc T8300 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಜೊತೆಗೆ ಇದು ಆಂಡ್ರಾಯ್ಡ್ 16 ಜೊತೆಗೆ HyperOS 3 ನಲ್ಲಿ ಕಾರ್ಯನಿರ್ವಹಿಸುತ್ತದೆ. ಅಲ್ಲದೇ ಮೈಕ್ರೋ ಎಸ್‌ಡಿ ಕಾರ್ಡ್‌ ಬೆಂಬಲದ ಮೂಲಕ ಬಾಹ್ದಯ ಸ್ಟೋರೇಜ್‌ ಅನ್ನು 2TB ವರೆಗೆ ವಿಸ್ತರಿಸುವ ಅವಕಾಶ ಇದೆ.

ಪೊಕೊ C85x 5G ಮೊಬೈಲ್‌ ಹಿಂಬದಿಯಲ್ಲಿ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 32MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದ್ದು ಸೆಕೆಂಡರಿ ಕ್ಯಾಮೆರಾ ಬೇಸಿಕ್ ಸೆನ್ಸಾರ್‌ ಸಾಮರ್ಥ್ಯ ಪಡೆದಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಮೊಬೈಲ್‌ 6,300mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವ ಜೊತೆಗೆ 15W ವೈರ್ಡ್ ಚಾರ್ಜಿಂಗ್ ವ್ಯವಸ್ಥೆ ಪಡೆದಿದೆ. ಇದರೊಂದಿಗೆ 7.5W ವೈರ್ಡ್ ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲ ಸಹ ಹೊಂದಿದೆ. ಅಲ್ಲದೇ ಇದು 5G, 4G LTE, Wi-Fi 5, ಬ್ಲೂಟೂತ್ 5.4, GPS, 3.5mm ಆಡಿಯೊ ಜ್ಯಾಕ್ ಹಾಗೂ USB ಟೈಪ್-C ಪೋರ್ಟ್ ನಂತಹ ಕನೆಕ್ಟಿವಿಟಿ ಆಯ್ಕೆಗಳನ್ನು ಒಳಗೊಂಡಿದೆ.

Manthesh B

Manthesh B ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

View full profile