ನಾಳೆ Poco C85x 5G ಸ್ಮಾರ್ಟ್‌ಫೋನ್‌ ಸೇಲ್‌ ಪ್ರಾರಂಭ! ಅಗ್ಗದ ಬೆಲೆಗೆ ಖರೀದಿಸಬಹುದು

HIGHLIGHTS

ನಾಳೆ (ಮಾರ್ಚ್ 14 ರಂದು) ಭಾರತದಲ್ಲಿ ಪೊಕೊ C85x 5G ಸೇಲ್‌ ಶುರು

ಪೊಕೊದ ಈ ಅಗ್ಗದ ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಪಡೆದಿದೆ

ಪೊಕೊ ಕಂಪನಿಯ ಈ ಹೊಸ ಫೋನ್‌ 6,300mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ

ನಾಳೆ Poco C85x 5G ಸ್ಮಾರ್ಟ್‌ಫೋನ್‌ ಸೇಲ್‌ ಪ್ರಾರಂಭ! ಅಗ್ಗದ ಬೆಲೆಗೆ ಖರೀದಿಸಬಹುದು

ಪೊಕೊ ಮೊಬೈಲ್ ಬ್ರ್ಯಾಂಡ್ ಇತ್ತೀಚಿಗೆ ಬಿಡುಗಡೆ ಮಾಡಿರುವ Poco C85x 5G ಸ್ಮಾರ್ಟ್‌ಫೋನ್ ಅಗ್ಗದ ಬೆಲೆಯಿಂದ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಇನ್ನು ಈ ಮೊಬೈಲ್‌ನ ಮಾರಾಟ ನಾಳೆ (ಮಾರ್ಚ್ 14 ರಿಂದ) ಪ್ರಾರಂಭವಾಗಲಿದೆ. ಈ ಮೊಬೈಲ್‌ Unisoc T8300 ಚಿಪ್‌ಸೆಟ್‌ ಪ್ರೊಸೆಸರ್ ಪವರ್‌ ಅನ್ನು ಒಳಗೊಂಡಿರುವ ಜೊತೆಗೆ ಬರೋಬ್ಬರಿ 6,300mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಪೊಕೊ C85x 5G ಸ್ಮಾರ್ಟ್‌ಫೋನ್ ಮೂರು ಕಲರ್‌ ಆಯ್ಕೆಗಳನ್ನು ಒಳಗೊಂಡಿದೆ. ಇನ್ನುಳಿದಂತೆ ಪೊಕೊ C85x 5G ಸ್ಮಾರ್ಟ್‌ಫೋನ್ ಬೆಲೆ, ಲಭ್ಯತೆ ಹಾಗೂ ಫೀಚರ್ಸ್‌ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Samsung Galaxy M17e 5G ಬಿಡುಗಡೆಗೂ ಮುನ್ನವೇ ಬೆಲೆ ಬಹಿರಂಗ! ಇಲ್ಲಿದೆ ಕಂಪ್ಲೀಟ್ ಮಾಹಿತಿ

Poco C85x 5G ಸೇಲ್‌: ಬೆಲೆ ಮತ್ತು ಲಭ್ಯತೆ

Poco ಸಂಸ್ಥೆಯ ಪೊಕೊ C85x 5G ಸ್ಮಾರ್ಟ್‌ಫೋನ್ ನಾಳೆ (ಮಾರ್ಚ್ 14 ರಿಂದ) ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ ಮೂಲಕ ಮಧ್ಯಾಹ್ನ 12 ಗಂಟೆಗೆ ಮಾರಾಟ ಶುರು ಮಾಡಲಿದೆ. ಇನ್ನು ಈ ಮೊಬೈಲ್‌ನ 4GB RAM + 64GB ಸ್ಟೋರೇಜ್ ಆವೃತ್ತಿಯ ಬೆಲೆ 10,999 ರೂಗಳು ಆಗಿದೆ. ಇದರ 4GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 14,499 ರೂಗಳು ಆಗಿದೆ. ಇನ್ನು ಇದರ 4GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 11,999 ರೂಗಳು ಆಗಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ ಬ್ಲ್ಯಾಕ್‌, ಗೋಲ್ಡ್‌ ಹಾಗೂ ಗ್ರೀನ್‌ ಕಲರ್‌ ಆಯ್ಕೆಗಳನ್ನು ಪಡೆದುಕೊಂಡಿದೆ.

Poco C85x 5G

ಪೊಕೊ C85x 5G ಫೀಚರ್ಸ್‌ ಮಾಹಿತಿ

ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಪೊಕೊ C85x 5G ಮೊಬೈಲ್ 6.9 ಇಂಚಿನ HD+ ಅಡಾಪ್ಟಿವ್‌ಸಿಂಕ್ ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್‌ 720×1,600 ಪಿಕ್ಸಲ್‌ ರೆಸಲ್ಯೂಶನನ್ನು ಪಡೆದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದ್ದು 800 nits ಬ್ರೈಟ್ನೆಸ್‌ ಸೌಲಭ್ಯ ನೀಡಲಾಗಿದೆ. ಈ ಫೋನ್ Unisoc T8300 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಜೊತೆಗೆ ಇದು ಆಂಡ್ರಾಯ್ಡ್ 16 ಜೊತೆಗೆ HyperOS 3 ನಲ್ಲಿ ಕಾರ್ಯನಿರ್ವಹಿಸುತ್ತದೆ. ಅಲ್ಲದೇ ಮೈಕ್ರೋ ಎಸ್‌ಡಿ ಕಾರ್ಡ್‌ ಬೆಂಬಲದ ಮೂಲಕ ಬಾಹ್ಯ ಸ್ಟೋರೇಜ್‌ ಅನ್ನು 2TB ವರೆಗೆ ವಿಸ್ತರಿಸುವ ಅವಕಾಶ ಇದೆ.

ಪೊಕೊ C85x 5G ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರ ಮೊದಲ ಕ್ಯಾಮೆರಾವು 32MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದ್ದು ಸೆಕೆಂಡರಿ ಕ್ಯಾಮೆರಾ ಬೇಸಿಕ್ ಸೆನ್ಸಾರ್‌ ಸಾಮರ್ಥ್ಯ ಪಡೆದಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಮೊಬೈಲ್‌ 6,300mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವ ಜೊತೆಗೆ 15W ವೈರ್ಡ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ. ಇದರೊಂದಿಗೆ 7.5W ವೈರ್ಡ್ ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲ ಸಹ ಹೊಂದಿದೆ. ಅಲ್ಲದೇ ಇದು 5G, 4G LTE, Wi-Fi 5, ಬ್ಲೂಟೂತ್ 5.4, GPS, 3.5mm ಆಡಿಯೊ ಜ್ಯಾಕ್ ಹಾಗೂ USB ಟೈಪ್-C ಪೋರ್ಟ್ ನಂತಹ ಕನೆಕ್ಟಿವಿಟಿ ಆಯ್ಕೆಗಳನ್ನು ಒಳಗೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo