ಜನಪ್ರಿಯ ಪೊಕೊ ಮೊಬೈಲ್ ಸಂಸ್ಥೆಯ ಬಹುನಿರೀಕ್ಷಿತ Poco C85x 5G ಸ್ಮಾರ್ಟ್‌ಫೋನ್ ಇಂದು (ಮಾರ್ಚ್ 10 ರಂದು) ದೇಶಿಯ ಮಾರುಕಟ್ಟೆಗೆ ಅಧಿಕೃತವಾಗಿ ಲಾಂಚ್ ಆಗಲಿದೆ. Flipkart ತಾಣದಲ್ಲಿ ಮೀಸಲಾದ ಮೈಕ್ರೋಸೈಟ್ ಈಗಾಗಲೇ ಲೈವ್ ಆಗಿದೆ. ಬಿಡುಗಡೆಗೂ ಮುನ್ನವೇ ಭಾರೀ ಕುತೂಹಲ ಮೂಡಿಸಿರುವ ಈ ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಒಳಗೊಂಡಿರುವುದು ಕನ್ಫರ್ಮ್ ಆಗಿದೆ. ಹಾಗೆಯೇ ಈ ಮೊಬೈಲ್ 6300mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಜೊತೆಗೆ ಗೋಲ್ಡ್ ಕಲರ್ ಆಯ್ಕೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಡಬಹುದು ಎನ್ನಲಾಗಿದೆ. ಇನ್ನುಳಿದಂತೆ ಇಂದು ಮಾರುಕಟ್ಟೆಗೆ ಎಂಟ್ರಿ ಕೊಡುತ್ತಿರುವ ಪೊಕೊ C85x 5G ಮೊಬೈಲ್‌ನ ಇತರೆ ನಿರೀಕ್ಷಿತ ಬೆಲೆ ಹಾಗೂ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ.
Also Read : Amazon EPL 2026 ಸೇಲ್: Vivo X300 5G ಮೊಬೈಲ್ ಖರೀದಿಗೆ ಇದೇ ಬೆಸ್ಟ್ ಟೈಮ್
ಪ್ರಮುಖ ಮೊಬೈಲ್ ಬ್ರಾಂಡ್‌ಗಳ ಪೈಕಿ ಒಂದಾಗಿರುವ ಪೊಕೊ ಕಂಪನಿಯು ಇದೀಗ ತನ್ನ C ಸರಣಿಯಲ್ಲಿ ಹೊಸದಾಗಿ ಪರಿಚಯಿಸಲಿರುವ ಪೊಕೊ C85x 5G ಮೊಬೈಲ್ ಗ್ರಾಹಕರ ನಿರೀಕ್ಷೆಗಳನ್ನು ಹೆಚ್ಚಿಸಿದೆ. ಈ ಸ್ಮಾರ್ಟ್‌ಫೋನ್ ಇಂದು (ಮಾರ್ಚ್ 10 ರಂದು) ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಿ ಲಾಂಚ್ ಆಗಲಿದೆ. ಈ ಮೊಬೈಲ್ ಲಾಂಚ್ ಕುರಿತು Flipkart ಇ ಕಾಮರ್ಸ್ ತಾಣದಲ್ಲಿ ಪ್ರತ್ಯೇಕ ಮೈಕ್ರೋಸೈಟ್ ಈಗಾಗಲೇ ತೆರೆಯಲಾಗಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ ಆಕರ್ಷಕ ಗೋಲ್ಡ್ ಕಲರ್ ಆಯ್ಕೆ ಪಡೆದಿರಲಿದೆ ಎಂದು ಹೇಳಲಾಗುತ್ತಿದೆ. ಇನ್ನು ಫೋನಿನ ಅಧಿಕೃತ ಬೆಲೆಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯನ್ನು ಕಂಪನಿಯು ಹೊರಹಾಕಿಲ್ಲ. ಈ ಫೋನ್ Flipkart ಇ ಕಾಮರ್ಸ್ ಮೂಲಕ ಮಾರಾಟ ಶುರು ಮಾಡಲಿದೆ.
ಪೊಕೊ ಸಂಸ್ಥೆಯ ಮುಂಬರುವ ನೂತನ ಪೊಕೊ C85x 5G ಮೊಬೈಲ್ ಬ್ಯಾಟರಿ ಪ್ರಮುಖ ಹೈಲೈಟ್ ಆಗಿರಲಿದೆ. ಇದು 6300mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿರಲಿದ್ದು ಇದಕ್ಕೆ ಪೂರಕವಾಗಿ 15W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದುಕೊಂಡಿರುವುದು ಬಹುತೇಕ ಪಕ್ಕಾ ಎಂದು ಹೇಳಲಾಗಿದೆ. ಒಮ್ಮೆ ಪೂರ್ಣ ಚಾರ್ಜ್ ಮಾಡಿದರೆ ಸುಮಾರು 35 ಗಂಟೆಗಳಿಗೂ ಅಧಿಕ ವಿಡಿಯೋ ಪ್ಲೇಬ್ಯಾಕ್, 14 ಗಂಟೆಗಳಿಗೂ ಅಧಿಕ ಗೇಮಿಂಗ್, 50 ಗಂಟೆಗಳಿಗೂ ಅಧಿಕ ವಾಯ್ಸ್ ಕರೆಗಳ ಬ್ಯಾಕ್‌ಅಪ್ ಒದಗಿಸಲಿದೆ ಎನ್ನಲಾಗಿದೆ. ಹಾಗೆಯೇ ಇದು 7.5W ವೈರ್ಡ್ ರಿವರ್ಸ್ ಚಾರ್ಜಿಂಗ್ ಸಪೋರ್ಟ್ ಸಹ ಒಳಗೊಂಡಿರಲಿದೆ.
ಇನ್ನು ನೂತನ ಪೊಕೊ C85x 5G ಫೋನ್ 6.9 ಇಂಚಿನ ವಿಶಾಲ ಡಿಸ್‌ಪ್ಲೇ ಪಡೆದಿರಲಿದ್ದು ಇದರೊಂದಿಗೆ 120Hz ರಿಫ್ರೆಶ್ ರೇಟ್ ಒದಗಿಸಲಿದೆ. ಇನ್ನು ಈ ಫೋನ್ 8GB ವರೆಗೆ RAM ಆಯ್ಕೆ ಒಳಗೊಂಡಿರಲಿದೆ. ಅಲ್ಲದೇ 4GB ವರೆಗೆ ವರ್ಚುವಲ್ RAM ಬೆಂಬಲ ಪಡೆದಿರುವುದು ಪಕ್ಕಾ ಎನ್ನಲಾಗಿದೆ. ಹಾಗೆಯೇ ಹಿಂಭಾಗದಲ್ಲಿ ಈ ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು ಇದರ ಪ್ರಾಥಮಿಕ ಕ್ಯಾಮೆರಾವು 32MP ಸೆನ್ಸಾರ್ ಸಾಮರ್ಥ್ಯದಲ್ಲಿ ಇರಬಹುದು ಎಂದು ಹೇಳಲಾಗುತ್ತಿದೆ.