ಫ್ಲಿಪ್‌ಕಾರ್ಟ್ ತಾಣದ ಬಹುನಿರೀಕ್ಷಿತ ಸಮ್ಮರ್ ಸೇಲ್ ಪ್ರಾರಂಭಕ್ಕೆ ದಿನಗಣನೆ ಶುರುವಾಗಿದೆ. ಈ ಮಾರಾಟದಲ್ಲಿ ಎಲ್ಲ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಘೋಷಿಸಲಾಗಿದೆ. ಪ್ರಮುಖವಾಗಿ ಪೊಕೊ ಕಂಪನಿಯ POCO F7 5G ಮೊಬೈಲ್ ಸಹ ಭರ್ಜರಿ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8s Gen 4 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿರುವ ಜೊತೆಗೆ 7,550mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಒಳಗೊಂಡಿದೆ. ಹಾಗಾದರೆ ಪೊಕೊ F7 5G ಮೊಬೈಲ್‌ನ ಆಫರ್ ಬೆಲೆ ಹಾಗೂ ಲಭ್ಯತೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಕಡಿಮೆ ಬೆಲೆಯಲ್ಲಿ ಲಭ್ಯವಿರುವ ಅತ್ಯುತ್ತಮ Jio ಕ್ರಿಕೆಟ್ ಡೇಟಾ ಪ್ಯಾಕ್ ಯೋಜನೆಗಳ ಮಾಹಿತಿ!
ಫ್ಲಿಪ್‌ಕಾರ್ಟ್ ತಾಣದ ಸಮ್ಮರ್ ಸೇಲ್ ಇದೇ ಮೇ 8 ರಂದು ಪ್ರಾರಂಭ ಆಗಲಿದೆ. ಆದರೆ ಫ್ಲಿಪ್‌ಕಾರ್ಟ್ ಪ್ಲಸ್ ಸದಸ್ಯರಿಗೆ ಮೇ 7 ರಂದು ಸೇಲ್ ಲೈವ್ ಆಗಲಿದೆ. ಪೊಕೊ F7 5G ಮೊಬೈಲ್‌ನ 12GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 35,999 ರೂ.ಗಳು ಆಗಿದ್ದು, ಆದರೆ ಈ ಸೇಲ್‌ನಲ್ಲಿ 33,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಇನ್ನು ಈ ಮೊಬೈಲ್ ಪ್ಯಾಂಟೋಮ್ ಬ್ಲ್ಯಾಕ್, ಫ್ರಾಸ್ಟ್ ವೈಟ್ ಹಾಗೂ ಸೈಬರ್ ಸಿಲ್ವರ್ ಎಡಿಷನ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.
ಪೊಕೊ F7 5G ಮೊಬೈಲ್ 120Hz ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.83 ಇಂಚಿನ 1.5K ಫ್ಲೋ AMOLED ಡಿಸ್‌ಪ್ಲೇ ಅನ್ನು ಪಡೆದಿದೆ. ಇದರ ಸ್ಕ್ರೀನ್ 3,200 nits ಬ್ರೈಟ್ನೆಸ್ ಸಪೋರ್ಟ್ ಅನ್ನು ಪಡೆದುಕೊಂಡಿದೆ. ಈ ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8s Gen 4 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 12GB RAM + 512GB ಹಾಗೂ 12GB + 256GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ.
ಇನ್ನು ಪೊಕೊ F7 5G ಮೊಬೈಲ್ ಅತ್ಯುತ್ತಮ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಹೊಂದಿರುವ ಜೊತೆಗೆ ಇದರ ದ್ವಿತೀಯ ಕ್ಯಾಮೆರಾವು 8MP ಅಲ್ಟ್ರಾ ವೈಡ್ ಸೆನ್ಸಾರ್ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್ 20MP ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಈ ಮೊಬೈಲ್ 7,550mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 90W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ. ಅಲ್ಲದೇ 22.5W ರಿವರ್ಸ್ ವೈರ್ಡ್ ಚಾರ್ಜಿಂಗ್ ಸೌಲಭ್ಯ ಸಹ ಪಡೆದಿದೆ.