ಭಾರತದಲ್ಲಿ ಇಂದು POCO M7 Plus 5G ಸ್ಮಾರ್ಟ್ ಫೋನ್ ಮೊದಲ ಬಾರಿಗೆ ಮಾರಾಟಕ್ಕೆ ಲಭ್ಯವಾಗುತ್ತಿದ್ದು ಫ್ಲಿಪ್‌ಕಾರ್ಟ್‌ನಲ್ಲಿ ಮಧ್ಯಾಹ್ನ 12:00 ಗಂಟೆಗೆ ಮಾರಾಟ ಪ್ರಾರಂಭವಾಗಲಿದೆ. ಪ್ರಸ್ತುತ ಈ ಸ್ಮಾರ್ಟ್ಫೋನ್ ನಿಮಗೆ ಆರಂಭಿಕ 6GB RAM + 128GB ಸ್ಟೋರೇಜ್ ರೂಪಾಂತರ ಬೆಲೆ 13,999 ರೂಗಳಿಗೆ ಪಟ್ಟಿ ಮಾಡಲಾಗಿದ್ದು ಆದರೆ ಬ್ಯಾಂಕ್ ಆಫರ್ ನಂತರ ಇದನ್ನು 12,999 ರೂಗಳಿಗೆ ಆರಂಭಿಕ ಬೆಲೆಗೆ ಖರೀದಿಸಬಹುದು. ಈ ಫೋನ್‌ನ ಅತ್ಯಂತ ವಿಶೇಷವಾದ ವಿಷಯವೆಂದರೆ ಇದರ 7000mAh ಬ್ಯಾಟರಿಯನ್ನು ಹೊಂದಿರುವ ಈ ವಿಭಾಗದಲ್ಲಿ ಇದು ಏಕೈಕ ಫೋನ್ ಎಂದು ಬ್ಯಾನರ್‌ನಲ್ಲಿ ಬರೆಯಲಾಗಿದೆ. ಹಾಗಾದರೆ ಇದರ ಫೀಚರ್ ಮತ್ತು ಆಫರ್ಗಳೇನು ಎಲ್ಲವನ್ನು ತಿಳಿಯಿರಿ.
POCO M7 Plus 5G ಸ್ಮಾರ್ಟ್ಫೋನ್ ಒಟ್ಟಾರೆಯಾಗಿ ಮೂರು ರೂಪಾಂತದರಲ್ಲಿ ಅಮೆಜಾನ್ ಮೂಲಕ ಲಭ್ಯವಾಗಲಿದ್ದು ಇದರ ಆರಂಭಿಕ 6GB RAM ಮತ್ತು 128GB ಸ್ಟೋರೇಜ್ ರೂಪಾಂತರವನ್ನು ₹13,999 ರೂಗಳಿಗೆ ಮತ್ತು ಇದರ ಮತ್ತೊಂದು 8GB RAM ಮತ್ತು 128GB ಸ್ಟೋರೇಜ್ ರೂಪಾಂತರವನ್ನು ₹13,999 ರೂಗಳಿಗೆ ಪಟ್ಟಿ ಮಾಡಲಾಗಿದೆ.
ಆದರೆ ಆಸಕ್ತ ಬಳಕೆದಾರರು ಈ ಸ್ಮಾರ್ಟ್ ಫೋನ್ ಅನ್ನು ಆಯ್ದ ಬ್ಯಾಂಕ್ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಬಳಸಿಕೊಂಡು ಸುಮಾರು ₹1000 ರೂಗಳ ಡಿಸ್ಕೌಂಟ್ ಪಡೆಯುವ ಮೂಲಕ POCO M7 Plus 5G ಸ್ಮಾರ್ಟ್ಫೋನ್ ಆರಂಭಿಕ ಮಾದರಿಯನ್ನು ಸುಮಾರು ₹12,999 ರೂಗಳ ವರೆಗೆ ಕಡಿಮೆ ಬೆಲೆಯಲ್ಲಿ ಖರೀದಿಗೆ ಪ್ರಯತ್ನಿಸಬಹುದು. ಈ ಸ್ಮಾರ್ಟ್ಫೋನ್ ಪ್ರತ್ಯೇಕವಾಗಿ ಫ್ಲಿಪ್ಕಾರ್ಟ್ ಮೂಲಕ ಮಾರಾಟಕ್ಕೆ ಲಭ್ಯವಿರುತ್ತದೆ.
Also Read: 43 ಇಂಚಿನ 4K Google Smart TV ಅಮೆಜಾನ್ ಸೇಲ್‌ನಲ್ಲಿ ಸಿಕ್ಕಾಪಟ್ಟೆ ಕಡಿಮೆ ಬೆಲೆಗೆ ಲಭ್ಯ!
ಈ ಪೊಕೋ ಸ್ಮಾರ್ಟ್ ಫೋನ್ 6.69 ಇಂಚಿನ AMOLED (1080×2340 ಪಿಕ್ಸೆಲ್‌ಗಳು) ಡಿಸ್ಪ್ಲೇ ಪೂರ್ತಿ 144Hz ರಿಫ್ರೆಶ್ ರೇಟ್ ಹೊಂದಿದೆ. ಸ್ಮಾರ್ಟ್ಫೋನ್ ಸ್ಕ್ರೀನ್ ಪ್ರೊಟೆಕ್ಷನ್‌ಗಾಗಿ ಗೊರಿಲ್ಲಾ ಗ್ಲಾಸ್ 7i ಗ್ಲಾಸ್ ಹೊಂದಿದೆ. POCO M7 Plus 5G ಫೋನ್ ಕಾಮೆರದಲ್ಲಿ 50MP ಸೆನ್ಸರ್ ಹೊಂದಿದ್ದು AI- ಬೆಂಬಲಿತ ಡ್ಯುಯಲ್ ಕ್ಯಾಮೆರಾ ಹೊಂದಿದೆ. ಸ್ಮಾರ್ಟ್ಫೋನ್ ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ ಮುಂಭಾಗದಲ್ಲಿ 8MP ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ.
POCO M7 Plus 5G ಫೋನ್ Qualcomm Snapdragon 6s Gen 3 ಪ್ರೊಸೆಸರ್ ಮತ್ತು ಆಂಡ್ರಾಯ್ಡ್ 15 ಆಪರೇಟಿಂಗ್ ಸಿಸ್ಟಮ್ ಜೊತೆಗೆ HyperOS ಹೊಂದಿದೆ. ಇದರ ಕನೆಕ್ಟಿಂಗ್ ಆಯ್ಕೆಗಳಲ್ಲಿ ಮುಖ್ಯವಾಗಿ Bluetooth, GPS, WiFi, 3.5mm Audio Jack, USB Type C Charge Port, eSIM Support, AGPS/GPS, GLONASS, BDS, Galileo ಸೆನ್ಸರ್‌ಗಳನ್ನು ಹೊಂದಿದೆ. ಕೊನೆಯದಾಗಿ POCO M7 Plus 5G ಸ್ಮಾರ್ಟ್ಫೋನ್ 7000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ ಮತ್ತು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಅಲ್ಲದೆ ಕಂಪನಿ ಇದರಲ್ಲಿ 2 ವರ್ಷದ ಆಪರೇಟಿಂಗ್ ಸಿಸ್ಟಮ್ ಅಪ್ಡೇಟ್ ಮತ್ತು 4 ವರ್ಷಗಳ ಸೆಕ್ಯೂರಿಟಿ ಅಪ್ಡೇಟ್ ನೀಡುವುದಾಗಿ ಭರವಸೆ ನೀಡಿದೆ.