POCO M7 Plus ಮೊಬೈಲ್‌ ಬೆಲೆಯಲ್ಲಿ ಇದೀಗ ಭಾರೀ ಇಳಿಕೆ! 50MP ಕ್ಯಾಮೆರಾ ಸೆನ್ಸಾರ್‌

HIGHLIGHTS

ಪೊಕೊ M7 ಪ್ಲಸ್‌ ಮೊಬೈಲ್‌ ಈಗ ಭಾರೀ ಆಫರ್‌ನಲ್ಲಿ ಲಭ್ಯ

ಈ ಸ್ಮಾರ್ಟ್‌ಫೋನ್‌ 7000mAh ಬ್ಯಾಟರಿ ಸಪೋರ್ಟ್‌ ಪಡೆದುಕೊಂಡಿದೆ

ಪೊಕೊದ ಈ ಫೋನಿನ ಸ್ಕ್ರೀನ್‌ 144Hz ರಿಫ್ರೆಶ್‌ ರೇಟ್‌ ಸೌಲಭ್ಯ ಪಡೆದಿದೆ

POCO M7 Plus ಮೊಬೈಲ್‌ ಬೆಲೆಯಲ್ಲಿ ಇದೀಗ ಭಾರೀ ಇಳಿಕೆ! 50MP ಕ್ಯಾಮೆರಾ ಸೆನ್ಸಾರ್‌

ಪೊಕೊ ಕಂಪನಿಯ ಜನಪ್ರಿಯ ಫೋನ್‌ಗಳ ಪೈಕಿ ಒಂದಾದ POCO M7 Plus ಸ್ಮಾರ್ಟ್‌ಫೋನ್‌ ಈಗ ಸಖತ್ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಹೌದು, ಸದ್ಯ ಪೊಕೊ M7 ಪ್ಲಸ್‌ ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಭರ್ಜರಿ ಬೆಲೆ ಇಳಿಕೆ ಪಡೆದುಕೊಂಡಿದೆ. ಆಸಕ್ತ ಗ್ರಾಹಕರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್‌ Snapdragon 6s Gen 3 SoC ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿರುವ ಜೊತೆಗೆ ಅಂದಹಾಗೆ ಈ ಮೊಬೈಲ್‌ ಆಕ್ವಾ ಬ್ಲೂ, ಕಾರ್ಬನ್ ಬ್ಲಾಕ್ ಮತ್ತು ಕ್ರೋಮ್ ಸಿಲ್ವರ್ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಪೊಕೊ M7 ಪ್ಲಸ್‌ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ಕೊಡಲಿದೆ Redmi Turbo 5 ಸ್ಮಾರ್ಟ್‌ಫೋನ್‌! ಕುತೂಹಲ ಹೆಚ್ಚಿಸಿದ ಫೀಚರ್ಸ್‌

POCO M7 Plus ಈಗ ಆಕರ್ಷಕ ಬೆಲೆಯಲ್ಲಿ ಲಭ್ಯ

ಬಜೆಟ್‌ ಬೆಲೆಯಲ್ಲಿ ಗುರುತಿಸಿಕೊಂಡಿರುವ ಪೊಕೊ M7 ಪ್ಲಸ್‌ ಸ್ಮಾರ್ಟ್‌ಫೋನ್‌ ಸದ್ಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಗಮನಾರ್ಹ ರಿಯಾಯಿತಿ ಪಡೆದಿದೆ. ಈ ಸ್ಮಾರ್ಟ್‌ಫೋನ್‌ 6GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 16,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 15,999 ರೂ.ಗಳ ದರದಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಸಹ ಪಡೆಯಬಹುದಾಗಿದೆ. ಇದರೊಂದಿಗೆ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಮೊಬೈಲ್‌ ಆಕ್ವಾ ಬ್ಲೂ, ಕಾರ್ಬನ್ ಬ್ಲಾಕ್ ಮತ್ತು ಕ್ರೋಮ್ ಸಿಲ್ವರ್ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.

Poco M7 Plus

ಪೊಕೊ M7 ಪ್ಲಸ್‌ ಫೀಚರ್ಸ್‌ ಮಾಹಿತಿ

ಪೊಕೊ M7 ಪ್ಲಸ್‌ ಫೋನ್‌ ಡಿಸ್‌ಪ್ಲೇಯು 6.9 ಇಂಚಿನ ಪೂರ್ಣ HD+ ಮಾದರಿ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 144Hz ರಿಫ್ರೆಶ್‌ ರೇಟ್‌ ಹೊಂದಿದ್ದು ಜೊತೆಗೆ 850 nits ಬ್ರೈಟ್ನೆಸ್‌ ಸಪೋರ್ಟ್‌ ಪಡೆದಿದೆ. ಇನ್ನು ಈ ಮೊಬೈಲ್‌ Snapdragon 6s Gen 3 SoC ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಪೊಕೊದ ಈ ಮೊಬೈಲ್‌ 4GB RAM + 64GB, 6GB + 128GB ಹಾಗೂ 8GB + 128GB ವೇರಿಯಂಟ್‌ ಸೌಲಭ್ಯವನ್ನು ಒಳಗೊಂಡಿದೆ. ಇದರೊಂದಿಗೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ನೀಡಲಾಗಿದೆ.

ಹಾಗೆಯೇ ಪೊಕೊ M7 ಪ್ಲಸ್‌ 5G ಫೋನ್‌ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಅನ್ನು ಒಳಗೊಂಡಿದ್ದು ಸೆಕೆಂಡರಿ ಕ್ಯಾಮೆರಾ ಬೇಸಿಕ್‌ ಮಾದರಿಯಲ್ಲಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್‌ 8MP ಸೆನ್ಸಾರ್ ಕ್ಯಾಮೆರಾ ವ್ಯವಸ್ಥೆ ಅನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ 7,000 mAh ಬ್ಯಾಟರಿ ಜೊತೆಗೆ 18W ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್‌ ಪಡೆದಿದೆ. ಅಲ್ಲದೇ ಇದು ಧೂಳು ಹಾಗೂ ನೀರಿನ ಪ್ರತಿರೋಧಕ್ಕಾಗಿ IP64 ರೇಟಿಂಗ್ ಅನ್ನು ಸಹ ಪಡೆದುಕೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile