ಪೊಕೊ ಮೊಬೈಲ್ ಸಂಸ್ಥೆಯ POCO M7 Plus ಮೊಬೈಲ್ ಬಜೆಟ್ ಬೆಲೆಯ ಜೊತೆಗೆ ಬಿಗ್ ಬ್ಯಾಟರಿ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಬೊಂಬಾಟ್ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್ Snapdragon 6s Gen 3 SoC ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 7,000 mAh ಬ್ಯಾಟರಿ ಬ್ಯಾಕ್‌ಅಪ್ ಸಹ ಪಡೆದಿದೆ. ಅಲ್ಲದೇ ಈ ಫೋನ್ ಆಕ್ವಾ ಬ್ಲೂ, ಕಾರ್ಬನ್ ಬ್ಲಾಕ್ ಮತ್ತು ಕ್ರೋಮ್ ಸಿಲ್ವರ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಪೊಕೊ M7 ಪ್ಲಸ್ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Vivo T4 Lite 5G ಮೊಬೈಲ್ ಈಗ ಆಕರ್ಷಕ ಡಿಸ್ಕೌಂಟ್‌ನಲ್ಲಿ ಲಭ್ಯ; ಡ್ಯುಯಲ್ ಕ್ಯಾಮೆರಾ ರಚನೆ
ಆಕರ್ಷಕ ಫೀಚರ್ಸ್ ಮೂಲಕ ಮೊಬೈಲ್ ಪ್ರಿಯರ ಗಮನ ಸೆಳೆದಿರುವ ಪೊಕೊ M7 ಪ್ಲಸ್ ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಬೊಂಬಾಟ್ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 6GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 16,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 15,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಆಕ್ವಾ ಬ್ಲೂ, ಕಾರ್ಬನ್ ಬ್ಲಾಕ್ ಮತ್ತು ಕ್ರೋಮ್ ಸಿಲ್ವರ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.
ಪೊಕೊ M7 ಪ್ಲಸ್ ಫೋನ್ ಡಿಸ್‌ಪ್ಲೇಯು 6.9 ಇಂಚಿನ ಪೂರ್ಣ HD+ ಮಾದರಿ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 144Hz ರಿಫ್ರೆಶ್ ರೇಟ್ ಹೊಂದಿದ್ದು ಜೊತೆಗೆ 850 nits ಬ್ರೈಟ್ನೆಸ್ ಸಪೋರ್ಟ್ ಪಡೆದಿದೆ. ಇನ್ನು ಈ ಮೊಬೈಲ್ Snapdragon 6s Gen 3 SoC ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಪೊಕೊದ ಈ ಮೊಬೈಲ್ 4GB RAM + 64GB, 6GB + 128GB ಹಾಗೂ 8GB + 128GB ವೇರಿಯಂಟ್ ಸೌಲಭ್ಯವನ್ನು ಒಳಗೊಂಡಿದೆ. ಇದರೊಂದಿಗೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ನೀಡಲಾಗಿದೆ.
ಹಾಗೆಯೇ ಪೊಕೊ M7 ಪ್ಲಸ್ ಫೋನ್ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಅನ್ನು ಒಳಗೊಂಡಿದ್ದು ಸೆಕೆಂಡರಿ ಕ್ಯಾಮೆರಾ ಬೇಸಿಕ್ ಮಾದರಿಯಲ್ಲಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್ 8MP ಸೆನ್ಸಾರ್ ಕ್ಯಾಮೆರಾ ವ್ಯವಸ್ಥೆ ಅನ್ನು ಪಡೆದುಕೊಂಡಿದೆ. ಇನ್ನು ಈ ಫೋನ್ 7,000mAh ಬ್ಯಾಟರಿ ಜೊತೆಗೆ 18W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ. ಅಲ್ಲದೇ ಇದು ಧೂಳು ಹಾಗೂ ನೀರಿನ ಪ್ರತಿರೋಧಕ್ಕಾಗಿ IP64 ರೇಟಿಂಗ್ ಅನ್ನು ಸಹ ಪಡೆದುಕೊಂಡಿದೆ.